ಬೆಂಗಳೂರು: ಸದಾಶಿವನಗರದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಭೇಟಿಯಾದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅಸಮಾಧಾನದಿಂದಲೇ ಹೊರನಡೆದಿದ್ದಾರೆ.
ಇಂದು ಸಿಎಂ ಡಿಕೆಶಿಯನ್ನು ಹೊರಟ್ಟಿ ಮತ್ತೆ ಬೇಟಿಯಾಗಿದ್ದರು. 10 ನಿಮಿಷಗಳ ಕಾಲ ಸಿಎಂ ಜೊತೆ ಮಾತುಕತೆ ನಡೆಸಿದರು. ಅಸಮಾಧಾನದಿಂದಲೇ ಸಿಎಂ ಮನೆಯಿಂದ ಹೊರ ಬಂದರು. ಹೊರಟ್ಟಿ ಅವರನ್ನ ಬೀಳ್ಕೊಡಲು ಗೇಟ್ ವರೆಗೂ ಮುಖ್ಯಮಂತ್ರಿಗಳು ಹೊರಬಂದಿದ್ದರು. ಈ ವೇಳೆ ಸಿಟ್ಟಲ್ಲಿದ್ದ ಹೊರಟ್ಟಿ ತಮ್ಮ ಸಿಬ್ಬಂದಿಗೆ, ‘ಏ.. ಕಾರು ಎಲ್ಲಿದೆ’ ಎಂದು ಕೇಳಿದರು. ಹಿಂದೆ ತಿರುಗಿ ಸಿಎಂ ಡಿಕೆಯನ್ನೂ ನೋಡದ ಕಾರಲ್ಲಿ ಹೊರಟರು. ಇದನ್ನೂ ಓದಿ: ನನಗೆ ಸಚಿವ ಸ್ಥಾನ ನೀಡಲೇಬೇಕು, ಅದನ್ನು ಬಿಟ್ಟು ಬೇರೆ ಮಾತುಕತೆ ಇಲ್ಲ: ಕೃಷ್ಣಪ್ಪ ಖಡಕ್ ಮಾತು
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ, ಏನೂ ಮಾತಾಡಿಲ್ಲ, ಬೇರೆ ವಿಷಯ ಮಾತಾಡಿದ್ದೇನೆ. ಮೊನ್ನೆ ಏನು ಹೇಳಿದ್ದೇನೋ ಅದಕ್ಕೆ ಬದ್ಧ ಆಗಿದ್ದೇನೆ. ಅವಿಶ್ವಾಸ ನಿರ್ಣಯ ಮಂಡಿಸಿದ್ರೆ ಮಂಡಿಸಲಿ. ಕಾನೂನು ಪ್ರಕಾರ ಏನು ಬೇಕಾದರೂ ಮಾಡಲಿ ಎಂದು ತಿಳಿಸಿದರು.




