ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ಬಗ್ಗೆ ಅವಹೇಳನಕಾರಿ ಮಾತಾಡಿರೋ ಬಿಜೆಪಿ MLC ರವಿಕುಮಾರ್ ವಿರುದ್ಧ ಕ್ರಮಕ್ಕೆ ಪ್ರದೇಶ ಕಾಂಗ್ರೆಸ್ ಕಮಿಟಿಯಿಂದ ದೂರು ಬಂದಿದೆ ಅಂತ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ (Congress) ನನಗೆ ದೂರು ಕೊಟ್ಟಿದ್ದಾರೆ. ರವಿಕುಮಾರ್ (N Ravikumar) ಅವರು ಸಿಎಸ್‌ಗೆ ಅಸಂಬದ್ಧ ಪದ ಬಳಕೆ ಮಾಡಿದ್ದಾರೆ. ಅವರ ಮೇಲೆ ಕ್ರಮಕ್ಕೆ ಮನವಿ ಮಾಡಿದ್ದಾರೆ. MLC ಸ್ಥಾನದಿಂದ ಅಮಾನತು ಮಾಡಬೇಕು ಅಂತ ಕೇಳಿದ್ದಾರೆ. ರವಿಕುಮಾರ್‌ಗೆ ನಾನು ಪತ್ರ ಬರೆದಿದ್ದೇನೆ. ಹೀಗೆ ದೂರು ಬಂದಿದೆ. ನಿಮ್ಮ ಅಭಿಪ್ರಾಯ ಕೊಡಿ ಅಂತ ಕೇಳಿದ್ದೀನಿ. ಅವರು ಅಭಿಪ್ರಾಯ ಕೊಟ್ಟ ಮೇಲೆ ಮುಂದಿನ ತೀರ್ಮಾನ ಮಾಡ್ತೀನಿ ಎಂದಿದ್ದಾರೆ. ಇದನ್ನೂ ಓದಿ: ಸಿಎಸ್ ವಿರುದ್ಧ ರವಿಕುಮಾರ್ ಅವಹೇಳನಕಾರಿ ಹೇಳಿಕೆ – ನಾಳೆ ಜೋಷಿಗೆ ಸ್ಪಷ್ಟನೆ
ರವಿಕುಮಾರ್ ಅವರ ಸದಸ್ಯತ್ವ ರದ್ದು ಮಾಡೋ ಅಧಿಕಾರ ನನಗೆ ಇಲ್ಲ. ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಮಾಡ್ತೀವಿ. ವಿಧಾನ ಪರಿಷತ್ ನಿಯಮದ ಪ್ರಕಾರ ಮುಂದಿನ ಕ್ರಮ ತೆಗೆದುಕೊಳ್ತೀವಿ. ರವಿಕುಮಾರ್ ಅಭಿಪ್ರಾಯ ಪಡೆಯದೇ ನಾನೇನು ಕ್ರಮ ತೆಗೆದುಕೊಳ್ಳಲು ಆಗಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿ ಆಗಲಿ: ಸಂಸದ ಯದುವೀರ್
ಇದು ವಿಧಾನಸೌಧದ ಪರಿಮಿತಿಯಲ್ಲಿ ನಡೆದಿದೆ. ಅದಕ್ಕೆ ನಾನು ರವಿಕುಮಾರ್‌ಗೆ ಪತ್ರ ಬರೆದಿದ್ದೇನೆ. ಪತ್ರಕ್ಕೆ ಅವರ ಅಭಿಪ್ರಾಯ ಬರಲಿ, ರಾಜ್ಯಸಭೆ ಸೆಕ್ರೆಟರಿ ಜನರಲ್ ಅವರ ಅಭಿಪ್ರಾಯ ಪಡೆಯುತ್ತೇನೆ. ಪೊಲೀಸ್ ಕೇಸ್ ಬಗ್ಗೆ ನನಗೆ ಗೊತ್ತಿಲ್ಲ. ಶಾಸಕರನ್ನ ಅರೆಸ್ಟ್ ಮಾಡಿದ್ರೆ ನಮಗೆ ಮಾಹಿತಿ ಕೊಡಬೇಕು ಅಷ್ಟೆ. ನಾವು ರವಿಕುಮಾರ್ ಅಭಿಪ್ರಾಯ ಪಡೆದು ನಿಯಮದ ಪ್ರಕಾರ ಕ್ರಮ ತೆಗೆದುಕೊಳ್ತೀನಿ ಅಂತ ತಿಳಿಸಿದ್ದಾರೆ. ಇದನ್ನೂ ಓದಿ: SKSSF ಅಬುಧಾಬಿ ಕರ್ನಾಟಕ & ಬ್ಲಡ್ ಹೆಲ್ಪ್‌ಲೈನ್ ಕರ್ನಾಟಕ ಆಶ್ರಯದಲ್ಲಿ 4ನೇ ಯಶಸ್ವಿ ರಕ್ತದಾನ ಶಿಬಿರ