DharwadDistrictsKarnatakaLatestMain Post

ಕಾಂಗ್ರೆಸ್ ಸದಸ್ಯರ ವರ್ತನೆಯಿಂದ ರಾಜೀನಾಮೆಗೆ ಮುಂದಾಗಿದ್ದೆ: ಹೊರಟ್ಟಿ ಬೇಸರ

Advertisements

ಹುಬ್ಬಳ್ಳಿ: ಬೆಳಗಾವಿಯ ಅಧಿವೇಶನದ ಕೊನೆಯ ದಿನ ಕಾಂಗ್ರೆಸ್ ಸದಸ್ಯರು ತಮ್ಮ ಕಚೇರಿಗೆ ಮುತ್ತಿಗೆ ಹಾಕಿ ಮಾತನಾಡಿದ ಪದಗಳು ನನಗೆ ಬೇಸರ ತರಿಸಿತ್ತು. ಇದರಿಂದಾಗಿ ನಾನು ರಾಜೀನಾಮೆಗೆ ಮುಂದಾಗಿದ್ದೆ ಎಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನಂತರ ಮಾತನಾಡಿದ ಅವರು, ನನ್ನ 40 ವರ್ಷದ ರಾಜಕೀಯ ಜೀವನದಲ್ಲಿ ಈ ತರಹದ ಮಾತುಗಳನ್ನು ಕೇಳಿರಲಿಲ್ಲ. ಆದರೆ ಕಾಂಗ್ರೆಸ್ ಸದಸ್ಯರು ನನ್ನ ತೇಜೋವಧೆಗೆ ಮುಂದಾಗಿದ್ದರು. ನನ್ನನ್ನು ಬಿಜೆಪಿ ಏಜೆಂಟ್ ಎಂದಿದ್ದರು. ಈ ಸಂಗತಿ ಬೇಸರ ತಂದಿತ್ತು. ಹೀಗಾಗಿ ನಾನು ರಾಜೀನಾಮೆಗೆ ಮುಂದಾಗಿದ್ದೆ ಎಂದು ಹೇಳಿದರು.

ನಂತರ ಕಾಂಗ್ರೆಸ್ ಸದಸ್ಯರ ಪರವಾಗಿ ಪರಿಷತ್‌ನ ವಿರೋಧ ಪಕ್ಷದ ಸಭಾನಾಯಕ ಎಸ್ ಆರ್ ಪಾಟೀಲ್‌ರು ಕ್ಷಮೆ ಕೇಳಿದ್ದಾರೆ. ಹೀಗಾಗಿ ಪ್ರಕರಣ ಇತ್ಯರ್ಥವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬಳ್ಳಾರಿಯಲ್ಲಿ ಸರಣಿ ಸರಕಳ್ಳತನ – ತಾಯಿ, ಮಗಳು ಬಂಧನ

ಬೆಳಗಾವಿ ಅಧಿವೇಶನದಲ್ಲಿ ಪರಿಷತ್ ನಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಅಭಿವೃದ್ಧಿಗಳ ಕುರಿತು ಸತತವಾಗಿ ಎರಡು ದಿನಗಳ ಕಾಲ ಚರ್ಚೆ ನಡೆದಿದೆ. ಇದು ಸಮಾಧಾನ ತಂದಿದೆ. ಮುಂದಿನ ಫೆಬ್ರವರಿಯಲ್ಲಿ ಮತ್ತೆ ಜಂಟಿ ಸದನ ಕರೆಯಲಾಗುವುದು. ಜಂಟಿ ಸದನ ನಡೆದ ಒಂದು ವಾರದ ನಂತರ ಬಜೆಟ್ ಅಧಿವೇಶನ ನಡೆಯಲಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ವಾಹನವನ್ನು ಓವರ್ ಟೇಕ್ ಮಾಡಿದ್ದಕ್ಕೆ ಕೆಎಸ್‌ಆರ್‌ಟಿಸಿ ಚಾಲಕ, ಕಂಡಕ್ಟರ್ ಮೇಲೆ ಹಲ್ಲೆ!

Leave a Reply

Your email address will not be published.

Back to top button