ಬಾಗಲಕೋಟೆ: ಜಮಖಂಡಿ ಉಪಚುನಾವಣೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಶ್ರೀಕಾಂತ್ ಕುಲಕರ್ಣಿ ಅವರ ಹೆಸರು ಘೋಷಣೆಯಾದ ಬೆನ್ನಲ್ಲೇ, ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಈ ಮೂಲಕ ಟಿಕೆಟ್ ಆಕಾಂಕ್ಷಿಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಜಮಖಂಡಿಯ ಬಿಜೆಪಿ ಮುಖಂಡ ಬಸವರಾಜ ಸಿಂಧೂರ ಅವರು, ರಾಜ್ಯ ಬಿಜೆಪಿ ಕಬ್ಬು ಬೆಳೆಗಾರರ ಪ್ರಕೋಷ್ಟದ ಸಹಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಉಪಚುನಾವಣೆ ಟಿಕೆಟ್‍ನ ಪ್ರಬಲ ಆಕಾಂಕ್ಷಿಯಾಗಿದ್ದ ಅವರಿಗೆ ಭಾರೀ ನಿರಾಸೆ ಉಂಟಾಗಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
Advertisement
Advertisement
ಬಸವರಾಜ ಸಿಂಧೂರ ಅವರು ಕಳೆದ ಎರಡು ದಿನಗಳಿಂದ ಬೆಂಗಳೂರಲ್ಲಿ ಬೀಡು ಬಿಟ್ಟಿದ್ದರು. ಈ ವೇಳೆ ರಾಜ್ಯ ಬಿಜೆಪಿ ನಾಯಕರ ಮನವೊಲಿಕೆಗೆ ಪ್ರಯತ್ನಿಸಿ, ಟಿಕೆಟ್ ಗಿಟ್ಟಿಸಿಕೊಳ್ಳಲು ಯತ್ನಿಸಿದ್ದರು. ಅಷ್ಟೇ ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ, ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು.
Advertisement
ಶ್ರೀಕಾಂತ್ ಕುಲಕರ್ಣಿ ಅವರಿಗೆ ಟಿಕೆಟ್ ನೀಡಿರುವ ವಿಚಾರದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಕೂಡ ಅಸಹಾಯಕರಾಗಿದ್ದಾರೆ. ಇದರಿಂದಾಗಿ ಜಮಖಂಡಿಗೆ ಮರಳಿ ಬೆಂಬಲಿಗರ ಜೊತೆ ಚರ್ಚೆ ನಡೆಸುತ್ತೇನೆ. ಅವರ ಸಲಹೆ ಹಾಗೂ ನಿರ್ಧಾರದ ಮೇಲೆ ಮುಂದಿನ ನಡೆ ಎಂದು ಬಸವರಾಜ ಸಿಂಧೂರ ಅವರು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv