ನಿಪ್ಪಾಣಿಯಿಂದ ಕಿತ್ತೂರುವರೆಗಿನ ರಾಷ್ಟ್ರೀಯ ಪಕ್ಕದಲ್ಲಿ ಜಲಶಕ್ತಿ ನಿರ್ಮಾಣ: ಬೊಮ್ಮಾಯಿ

Public TV
1 Min Read
CM basavaraj bommai

ಬೆಳಗಾವಿ: ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ನಿಪ್ಪಾಣಿಯಿಂದ ಕಿತ್ತೂರಿನವರೆಗಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಜಲಶಕ್ತಿ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

water

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಐದು ರಾಷ್ಟ್ರೀಯ ಹೆದ್ದಾರಿಗಳ ಶಂಕು ಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ದೂರದೃಷ್ಟಿಯಿಂದ ದೇಶದಲ್ಲಿ ರಸ್ತೆ ಅಭಿವೃದ್ಧಿಗಳಾಗುತ್ತಿವೆ. ರಸ್ತೆ ಮೂಲಕ ನರೇಂದ್ರ ಮೋದಿ ಕಂಡಿರುವ ಕನಸನ್ನು ನನಸು ಮಾಡಲು ರಸ್ತೆ ಅಭಿವೃದ್ಧಿಗೆ ಚಾಲನೆ ಕೊಡಲಾಗುತ್ತಿದೆ. ಮೋದಿ ಅವರ ಕನಸನ್ನು ನಿತಿನ್ ಗಡ್ಕರಿ ಅವರು ಸಾಕಾರಗೊಳಿಸುವ ಕಾರ್ಯ ಮಾಡುತ್ತಿದ್ದಾರೆ. ನಿತಿನ್ ಗಡ್ಕರಿ ಅವರು ಮಹಾರಾಷ್ಟ್ರ ಲೋಕೋಪಯೋಗಿ ಸಚಿವರಾಗಿ ಕ್ರಾಂತಿಯನ್ನು ಮಾಡಿದ್ದಾರೆ. 20 ವರ್ಷಗಳ ಹಿಂದೆ ಈ ಕಾರ್ಯವನ್ನ ಮಾಡಿದ್ದರು. ಇಂದು ಇಡೀ ದೇಶದಲ್ಲಿ ನ್ಯಾಷನಲ್ ಹೈವೇ ಅಭಿವೃದ್ಧಿ ಮಾಡುತ್ತಿದ್ದಾರೆ. ರಸ್ತೆಗಳನ್ನ ರಸ್ತೆಗಳಾಗಿ ನೋಡಲಿಲ್ಲ. ಹಲವು ಉಪಯುಕ್ತ ಯೋಜನೆಗಳನ್ನ ರೂಪಿಸಲಾಗುತ್ತಿದೆ. ಬೆಳಗಾವಿಯಲ್ಲಿನ ನ್ಯಾಷನಲ್ ಹೈವೇ ಪಕ್ಕದಲ್ಲಿ ಜಲಶಕ್ತಿ ನಿರ್ಮಾಣ ಮಾಡುತ್ತೇನೆ. ನಿಪ್ಪಾಣಿಯಿಂದ ಕಿತ್ತೂರುವರೆಗಿನ ರಾಷ್ಟ್ರೀಯ ಪಕ್ಕದಲ್ಲಿ ಜಲಶಕ್ತಿ ನಿರ್ಮಾಣ ಮಾಡಲಾಗುವುದು. ಬೆಳಗಾವಿಯಿಂದಲೇ ಈ ಯೋಜನೆ ಆರಂಭ ಮಾಡುತ್ತೇನೆ ಎಂದು ಸಿಎಂ ಘೋಷಣೆ ಮಾಡಿದರು. ಇದನ್ನೂ ಓದಿ: ವಿದ್ಯುತ್ ಪೂರೈಕೆ ಉಚಿತವಲ್ಲ, ಬಿಲ್ ಪಾವತಿಸದಿದ್ದರೆ ಕರೆಂಟ್ ಕಟ್ : ನಿತಿನ್ ರಾವತ್

BOMMAI 5

ಗಡ್ಕರಿಯವರು ರಿಂಗ್ ರೋಡ್ ಮಾಡಲು ಒತ್ತು ನೀಡಿದ್ದಾರೆ. ಬೆಳಗಾವಿಯಲ್ಲಿ ರಿಂಗ್ ರೋಡ್ ಮಾಡಬೇಕೆಂದು ಬಹಳ ವರ್ಷಗಳ ಯೋಜನೆಯಿದೆ. ಆದಷ್ಟು ಬೇಗ ಬೆಳಗಾವಿಯಲ್ಲಿ ರಿಂಗ್ ರೋಡ್ ಮಾಡುತ್ತೇನೆ. ಮಹಾರಾಷ್ಟ್ರ ಧಾರ್ಮಿಕ ಸ್ಥಳಗಳು, ಕರ್ನಾಟಕ ಧಾರ್ಮಿಕ ಸ್ಥಳಗಳಿಗೆ ಜೋಡಣೆ ಮಾಡುವ ಕನಸು ಗಡ್ಕರಿ ಕಂಡಿದ್ದಾರೆ. ಆ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿದ್ದಾರೆ. ರಸ್ತೆಗಳು ಅಭಿವೃದ್ಧಿಗೆ ಮಾದರಿ ಆಗಲಿ. ಇದು ರಾಷ್ಟ್ರೀಯ ಐಕ್ಯತೆಗೆ ಸಹಕಾರಿ ಆಗಿದೆ ಎಂದು ಹೇಳಿದರು. ಇದನ್ನೂ ಓದಿ: ಭಾರತೀಯರನ್ನು ತಾಯ್ನಾಡಿಗೆ ತರುವ ಪ್ರಾಮಾಣಿಕ ಪ್ರಯತ್ನವನ್ನು ಮೋದಿ ಸರ್ಕಾರ ಮಾಡುತ್ತಿದೆ: ಖೂಬಾ

Share This Article
Leave a Comment

Leave a Reply

Your email address will not be published. Required fields are marked *