ಚಾಮರಾಜನಗರ: ಇಂದು ಜಿಲ್ಲೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ.
ಸಿದ್ದತಾ ಕಾರ್ಯ ಪೂರ್ಣವಾಗಿದ್ದು, ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ತಪ್ಪಲಿನಲ್ಲಿರುವ ವಡ್ಡಗೆರೆ ಬಳಿ 3 ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ. ಇದನ್ನೂ ಓದಿ: 12 ಲಕ್ಷ ಮೌಲ್ಯದ ಅಕ್ಕಿ, ಲಾರಿಯ ಫೈನಾನ್ಸ್ ಹಣ ವಂಚನೆಗೆ ಸಂಚು ಮಾಡಿದ್ದ ಮಾಲೀಕ ಅರೆಸ್ಟ್
Advertisement
Advertisement
ಚಾಮರಾಜನಗರದ ಸರ್ಕಾರಿ ಮೆಡಿಕಲ್ ಕಾಲೇಜು ಬಳಿ 3 ಹೆಲಿಪ್ಯಾಡ್ ನಿರ್ಮಾಣ ಮಾಡಿದ್ದಾರೆ. ಬಿಳಿಗಿರಿರಂಗನ ಬೆಟ್ಟಕ್ಕೆ ಬೆಳಿಗ್ಗೆ 11.40 ಕ್ಕೆ ಭೇಟಿ ನೀಡಲಿರುವ ರಾಮನಾಥ್ ಕೋವಿಂದ್ ಭೇಟಿ ನೀಡಲಿದ್ದಾರೆ. ಇದೇ ವೇಳೆ ಮೈಸೂರಿನಿಂದ ರಸ್ತೆ ಮಾರ್ಗ ಚಾಮರಾಜನಗರಕ್ಕೆ ಆಗಮಿಸಲಿರುವ ಬಸವರಾಜ ಬೊಮ್ಮಾಯಿ ಮಧ್ಯಾಹ್ನ 1.25ಕ್ಕೆ ಯಡಬೆಟ್ಟ ಹೆಲಿಪ್ಯಾಡ್ ಬಳಿ ರಾಷ್ಟ್ರಪತಿ ಗಳನ್ನು ಸ್ವಾಗತಿಸಲಿದ್ದಾರೆ. ಇದನ್ನೂ ಓದಿ: 2023ರಲ್ಲೂ ಬೊಮ್ಮಾಯಿ ಸಿಎಂ ಆಗಿ ದಸರಾ ಉದ್ಘಾಟಿಸಲಿದ್ದಾರೆ: ಪ್ರತಾಪ್ ಸಿಂಹ
Advertisement
162 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸರ್ಕಾರಿ ಮೆಡಿಕಲ್ ಕಾಲೇಜು ಬೋಧನಾ ಆಸ್ಪತ್ರೆಯನ್ನು ಮಧ್ಯಾಹ್ನ 3.30 ಕ್ಕೆ ರಾಮನಾಥ್ ಕೋವಿಂದ್ ಸರ್ಕಾರಿ ಮೆಡಿಕಲ್ ಕಾಲೇಜು ಬೋಧನಾ ಆಸ್ಪತ್ರೆ ಉದ್ಘಾಟಿಸಲಿದ್ದಾರೆ. ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ 500 ಮಂದಿಗೆ ಮಾತ್ರ ಅವಕಾಶ ನೀಡಿದ್ದಾರೆ. ಬಿಳಿಗಿರಿರಂಗನ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಚಾಮರಾಜನಗರದ ಸರ್ಕಾರಿ ಮೆಡಿಕಲ್ ಮೆಡಿಕಲ್ ಕಾಲೇಜು ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
Advertisement