LatestDharwadDistrictsKarnatakaMain Post

ಮಹಿಳೆಯರ ಆತ್ಮರಕ್ಷಣೆಗಾಗಿ ವಿಶೇಷ ತರಬೇತಿ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಹಿಳೆಯರ ಆತ್ಮರಕ್ಷಣೆಗಾಗಿ ವಿಶೇಷ ತರಬೇತಿ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

bommai

ಇಂದು ಹುಬ್ಬಳ್ಳಿ-ಧಾರವಾಡ ಸಶಸ್ತ್ರ ಮೀಸಲು ಪಡೆಯ ಪೋಲಿಸ್ ಕವಾಯತು ಮೈದಾನದ ಬಳಿ ಆಯೋಜಿಸಿದ್ದ “ಪೋಲಿಸ್ ಸಂಸ್ಮರಣಾ ದಿನಾಚರಣೆ” ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಿಳೆಯರ ಆತ್ಮರಕ್ಷಣೆಗಾಗಿ ತರಬೇತಿ ನೀಡುವ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕೆಎಸ್‌ಆರ್‌ಪಿಪಿ ಪಡೆ ಹಾಗೂ ಪೋಲಿಸ್ ತರಬೇತಿ ಶಾಲೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿಗಳ ಸೇವೆ ಹಾಗೂ ಅನುಭವವನ್ನು ಬಳಸಿಕೊಂಡು ಈ ತರಬೇತಿಯನ್ನು ಒದಗಿಸಲಾಗುವುದು ಎಂದು ನುಡಿದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಸಿಗೆ ದ್ರೋಹ ಮಾಡಿರುವ ಸುಧಾಕರ್ ಅಧಿಕಾರದ ಮದದಿಂದ ವರ್ತಿಸ್ತಿದ್ದಾರೆ: ಸಿದ್ದರಾಮಯ್ಯ

bommai

ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ, ನಾಗರಿಕರ ಸುರಕ್ಷತೆಗಾಗಿ ಪೋಲಿಸರು ಮಾಡುವ ಸೇವೆ ತ್ಯಾಗವನ್ನು ಸ್ಮರಣೆ ಮಾಡಬೇಕು. ನಮ್ಮ ನಾಗರಿಕ ಕರ್ತವ್ಯವನ್ನು ನೆನಪು ಮಾಡಿಕೊಳ್ಳುವ ದಿನವಿದು. ಪೋಲಿಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕು ಎಂದಿದ್ದಾರೆ. ಇದನ್ನೂ ಓದಿ:  ಭಾರತದ ಐತಿಹಾಸಿಕ ಸಾಧನೆ- ಯಾವ ದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ಲಸಿಕೆ ವಿತರಿಸಲಾಗಿದೆ?

bommai

ಇದೇ ವೇಳೆ ಕೇರಳ ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಆಗಿರುವ ಸಂಕಷ್ಟಕ್ಕೆ ರಾಜ್ಯದ ಜನತೆ ಹಾಗೂ ಕರ್ನಾಟಕ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ ಸಹಕಾರವನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ. ಮತ್ತೊಂದೆಡೆ ಉತ್ತರಾಖಂಡದಲ್ಲಿಯೂ ಭೂಕುಸಿತ ಸಂಭವಿಸಿದ್ದು, ಅಲ್ಲಿ ಸಿಲುಕಿಕೊಂಡಿರುವ ಕನ್ನಡಿಗರಿಗೆ ನೆರವು ಒದಗಿಸಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *