ಕ್ಷೇಮವನ ಜೀವನದ ಸೂತ್ರವಾಗಲಿ: ಬೊಮ್ಮಾಯಿ

Public TV
1 Min Read
BSSAVARJ BOMMAI AND YOGI ADITHYANATH PROGRAM 1

ಬೆಂಗಳೂರು: ವನ ಎಂದರೆ ಹಸಿರು, ಸಮೃದ್ಧಿ ಹಾಗೂ ಆಮ್ಲಜನಕ. ಆಮ್ಲಜನಕ ಜೀವನದ ಸೂತ್ರ. ಈ ಕ್ಷೇಮವನ ಜೀವನದ ಸೂತ್ರವಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

BSSAVARJ BOMMAI AND YOGI ADITHYANATH PROGRAM

ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕೇಂದ್ರದ ವತಿಯಿಂದ ನೂತನವಾಗಿ ನಿರ್ಮಿಸಿರುವ ಪ್ರಕೃತಿ ಚಿಕಿತ್ಸಾ ಕೇಂದ್ರ ಕ್ಷೇಮವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕ್ಷೇಮವನ ಎಂಬ ಹೆಸರಿನಲ್ಲಿಯೇ ನೆಮ್ಮದಿ ಇದೆ. ಮೊದಲು ಪತ್ರ ಬರೆಯುವಾಗ ಕ್ಷೇಮ ಎಂದು ಬರೆದೇ ಪ್ರಾರಂಭ ಮಾಡುತ್ತಿದ್ದೆವು. ಆರೋಗ್ಯ ಎಂಬುದು ಅತ್ಯಂತ ಪ್ರಮುಖ ಸಂಗತಿ ಎನ್ನುವುದನ್ನು ನಮ್ಮ ಪೂರ್ವಜರು ಅರಿತಿದ್ದರು. ನಾವು ಈಗ ಇದನ್ನು ತಿರುವು ಮುರುವು ಮಾಡಿದ್ದೇವೆ. ಬೇಡವಾದುದ್ದನ್ನು ದೇಹಕ್ಕೆ ಸೇರಿಸಿಕೊಂಡು ಕಷ್ಟಪಡುತ್ತಿದ್ದೇವೆ. ದೇಹದೊಳಗಿನ ವಿಷಕಾರಿ ಅಂಶಗಳನ್ನು ಹೊರತೆಗೆದು ದೇಹ ಮತ್ತು ಮನಸ್ಸುಗಳಿಗೆ ಆರೋಗ್ಯ ನೀಡುವ ಕೆಲಸವನ್ನು ಕ್ಷೇಮವನ ಮಾಡಲಿದೆ ಎಂದರು. ಇದನ್ನೂ ಓದಿ: ಬೆಂಗಳೂರಿಗೆ ಇನ್ಮುಂದೆ ಸಾಂಪ್ರದಾಯಿಕ ವೈದ್ಯ ಪದ್ಧತಿ ಹಬ್ ಆಗೋ ಅವಕಾಶ- ಯೋಗಿ ಆದಿತ್ಯನಾಥ್

ಕ್ಷೇಮವನ ಎನ್ನುವುದು ಅದ್ಭುತ ಕಲ್ಪನೆ. ಬಾಹ್ಯದಿಂದ ಚಿಕಿತ್ಸೆ, ಔಷಧ ನೀಡದೇ ಸಹಜ ರೀತಿಯಲ್ಲಿ ಚಿಕಿತ್ಸೆ ನೀಡಿ ವಾಸಿ ಮಾಡುವ ಕ್ಷೇತ್ರವಿದು. ಚಿಕಿತ್ಸೆಯಲ್ಲಿ ಧರ್ಮವನ್ನು ಸೇರಿಸುವ ಕ್ಷೇತ್ರ ಕ್ಷೇಮವನ. ಆರೋಗ್ಯ ಎನ್ನುವುದು ಮನಸ್ಥಿತಿಯಿಂದ ಪ್ರಾರಂಭವಾಗುತ್ತದೆ. ಮನಸ್ಸು ಮತ್ತು ದೇಹದ ಉತ್ತಮ ಸ್ಥಿತಿಯೇ ಆರೋಗ್ಯ. ಸಂಯಮದ ಮನಸ್ಥಿತಿ ಅಗತ್ಯ. ಮನಸ್ಸು ಹತೋಟಿಯಲ್ಲಿದ್ದರೆ ಸ್ಥಿತಪ್ರಜ್ಞತೆಗೆ ದಾರಿ ಮಾಡಿಕೊಡುತ್ತದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: CBI ತನಿಖೆ ಮಾಡಿದ್ರೆ ಮುರುಘಾ ಮಠದ ಇನ್ನಷ್ಟು ಕೇಸ್ ಬೆಳಕಿಗೆ ಬರುತ್ತೆ – ಒಡನಾಡಿ ಸಂಸ್ಥೆ

BOMMAI AND YOGI ADITHYANATH PROGRAM

ವಾಸ್ತವವಲ್ಲದ್ದನ್ನು ದೇಹ ಮತ್ತು ಮನಸ್ಸಿನೊಳಗೆ ಬಿಟ್ಟುಕೊಳ್ಳದಿರುವುದೇ ಸ್ಥಿತಪ್ರಜ್ಞತೆ. ಸ್ಥಿತಪ್ರಜ್ಞತೆಯ ಸ್ಥಿತಿಗೆ ಕ್ಷೇಮವನ ಕೊಂಡೊಯ್ಯುತ್ತದೆ ಎಂದು ತಿಳಿಸಿದರಲ್ಲದೇ ಮಾನವನ ಪ್ರತಿ ಅಂಗಾಂಗ ಕ್ಷೇಮವಾಗಿರಬೇಕು. ದಿನಚರಿ ಅಶಿಸ್ತಿ ನಿಂದ ಕೂಡಿದ್ದರೆ ದೇಹ ಮತ್ತು ಮನಸ್ಸು ಶಿಥಿಲಗೊಳ್ಳತ್ತದೆ. ಕ್ಷೇಮವನ ದೇಹ ಮತ್ತು ಮನಸ್ಸುಗಳನ್ನು ಸಮತೋಲನ ಕಾಯುತ್ತದೆ ಎಂದು ತಿಳಿಸಿದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *