ಬೆಂಗಳೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನುಡಿದಂತೆ ನಡೆಯುವ ಸಜ್ಜನ ವ್ಯಕ್ತಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಡಿ ಹೊಗಳಿದ್ದಾರೆ.
Advertisement
ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಕೇಂದ್ರ ಕ್ಷೇಮವನ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಆಗಮಿಸಿರುವುದು ನಮಗೆ ಸಂಭ್ರಮ ಮತ್ತು ಹೆಮ್ಮೆ. ಉತ್ತರದಿಂದ ದಕ್ಷಿಣದವರೆಗೂ ಅವರು ಮನೆ ಮಾತಾಗಿದ್ದಾರೆ. ಯೋಗಿ ಆದಿತ್ಯನಾಥ್ ಗುರುಗಳಾಗಿದ್ದವರು. ನಮ್ಮ ಧರ್ಮ ಮತ್ತು ಸಮಾಜದಲ್ಲಿ ಗುರುಗಳಿಗೆ ಅ ಅತ್ಯುತ್ತಮ ಸ್ಥಾನವಿದೆ. ಮೂರು ದಶಕಗಳಿಗೂ ಹೆಚ್ಚು ಕಾಲ ಸಾರ್ವಜನಿಕ ಜೀವನದಲ್ಲಿದ್ದಾರೆ. ಆದರ್ಶಪ್ರಾಯ, ಮಾದರಿಯಾಗಿ, ಸಾರ್ವಜನಿಕ ಜೀವನವನ್ನು ಅತಿ ಉನ್ನತ ಮಟ್ಟಕ್ಕೆ ಕೊಂಡೊಯ್ದಿದ್ದಾರೆ. ನುಡಿದಂತೆ ನಡೆಯುತ್ತಾರೆ. ಗುರುಗಳು ಕೂಡ ದಕ್ಷ ಆಡಳಿತಗಾರರಾಗಬಹುದೆಂದು ಅವರು ನಿರೂಪಿಸಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಕ್ಷೇಮವನ ಜೀವನದ ಸೂತ್ರವಾಗಲಿ: ಬೊಮ್ಮಾಯಿ
Advertisement
Advertisement
ತತ್ವಜ್ಞಾನ ಮತ್ತು ಆಡಳಿತ ಒಂದೇ ನಾಣ್ಯದ ಎರಡು ಮುಖಗಳೆಂದು ತೋರಿಸಿಕೊಟ್ಟಿದ್ದಾರೆ ಹಾಗೂ ಆಧ್ಯಾತ್ಮ ಮತ್ತು ಆಡಳಿತವೂ ಒಂದೇ ನಾಣ್ಯದ ಎರಡು ಮುಖಗಳೆಂದು ನಿರೂಪಸಿದ್ದಾರೆ. ದುಷ್ಟರ ಶಿಕ್ಷೆ, ಶಿಷ್ಟರ ರಕ್ಷಣೆ ಅವರ ಆಡಳಿತದ ಪ್ರಮುಖ ಅಂಶ. ಹಲವಾರು ಸಮುದಾಯಗಳಲ್ಲಿ ವಿಶ್ವಾಸ ಮೂಡಿಸುವ ಕೆಲಸವನ್ನು ಅವರು ಮಾಡಿದ್ದಾರೆ. ಪ್ರಜಾಸತ್ತಾತ್ಮಕ, ಬಹು ಸಂಸ್ಕೃತಿಯ ಭಾರತದಲ್ಲಿ ಹೊಸ ಅಧ್ಯಾಯವನ್ನು ಅವರು ಬರೆದಿದ್ದಾರೆ. ನಮ್ಮ ಸಮಾಜದಲ್ಲಿ ಗುರುಗಳಿಗೆ ಅತ್ಯುನ್ನತ ಸ್ಥಾನವಿದೆ. ಸಾರ್ವಜನಿಕ ಬದುಕಿನಲ್ಲಿ 3 ದಶಕಗಳಿಂದಲೂ ಹೆಚ್ಚಿದ್ದು, ನುಡಿದಂತೆ ನಡೆಯುತ್ತಾರೆ. ಗುರುಗಳು ದಕ್ಷ ಆಡಳಿತಗಾರರಾಗಿರಬಹುದು. ತತ್ವಜ್ಞಾನ, ಆಡಳಿತಕ್ಕೆ ಸಂಬಂಧವಿಲ್ಲ ಎಂದು ತೋರಿಸಿಕೊಟ್ಟಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗೆ ಇನ್ಮುಂದೆ ಸಾಂಪ್ರದಾಯಿಕ ವೈದ್ಯ ಪದ್ಧತಿ ಹಬ್ ಆಗೋ ಅವಕಾಶ- ಯೋಗಿ ಆದಿತ್ಯನಾಥ್