Connect with us

ಮಂಗಳೂರಿನಲ್ಲಿ ಬಶೀರ್ ಹತ್ಯೆ ಪ್ರಕರಣ- ಮತ್ತಿಬ್ಬರು ಆರೋಪಿಗಳ ಬಂಧನ

ಮಂಗಳೂರಿನಲ್ಲಿ ಬಶೀರ್ ಹತ್ಯೆ ಪ್ರಕರಣ- ಮತ್ತಿಬ್ಬರು ಆರೋಪಿಗಳ ಬಂಧನ

ಮಂಗಳೂರು: ಅಬ್ದುಲ್ ಬಶೀರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕಾಸರಗೋಡಿನ ಲತೀಶ್(24) ಹಾಗೂ ಪುಷ್ಪರಾಜ್(23) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಈ ಮುಂಚೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಾದ ಶ್ರೀಜಿತ್ ಪಿ.ಕೆ(25), ಕಿಶನ್ ಪೂಜಾರಿ(21), ಧನುಷ್ ಪೂಜಾರಿ(22) ಹಾಗೂ ಸಂದೇಶ್ ಕೋಟ್ಯಾನ್ (22) ಎಂಬವರನ್ನ ಬಂಧಿಸಲಾಗಿತ್ತು.

ಶ್ರೀಜಿತ್ ಕಾಸರಗೋಡಿನ ಉಪ್ಪಳದ ಮಂಗಲ್ಪಾಡಿ ನಿವಾಸಿ, ಸಂದೇಶ್ ಮಂಜೇಶ್ವರದ ಕುಂಜತ್ತೂರು ನಿವಾಸಿ, ಕಿಶನ್ ಮತ್ತು ಧನುಷ್ ಮಂಗಳೂರಿನ ಪಡೀಲ್ ನಿವಾಸಿಗಳು ಎಂದು ತಿಳಿದುಬಂದಿದೆ. ಇದೀಗ ಒಟ್ಟು 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜ.3 ರಂದು ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ಫಾಸ್ಟ್ ಫುಡ್ ವ್ಯಾಪಾರಿ ಅಬ್ದುಲ್ ಬಶೀರ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು.  ಅಂಗಡಿಯಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ಬಶೀರ್ ಮೇಲೆ 7 ಜನರ ತಂಡವೊಂದು ತಲ್ವಾರ್ ದಾಳಿ ನಡೆಸಿತ್ತು. ಪರಿಣಾಮ ಗಂಟಲು, ತಲೆ ಹಾಗೂ ಎದೆಯ ಭಾಗಕ್ಕೆ ಗಂಭೀರ ಗಾಯಗೊಂಡಿದ್ದ ಬಶೀರ್ ರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಜ.7 ರಂದು  ಬಶೀರ್ ಮೃತಪಟ್ಟಿದ್ದರು.

https://www.youtube.com/watch?v=prf8LAzRcus

https://www.youtube.com/watch?v=nqZ3ZShX1q0

https://www.youtube.com/watch?v=82lslIp7u0w

https://www.youtube.com/watch?v=XIln_78eJlQ

Advertisement
Advertisement