ಬೆಂಗಳೂರು: ಹಾಲು ಉತ್ಪಾದಕರಿಗೆ ಮತ್ತು ರೈತರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ರೈತರ ಪಾಲಿನ ಸಂಜೀವಿನಿಯಾಗಿದ್ದ ಯಶಸ್ವಿನಿ ಯೋಜನೆಯನ್ನು (Yashaswini Health Insurance Scheme) ಮರು ಜಾರಿಗೊಳಿಸಿ ಸರ್ಕಾರ ಇಂದು ಆದೇಶಿಸಿದೆ.
Advertisement
ರೈತರಿಗೆ ವೈದ್ಯಕೀಯ ಸೌಲಭ್ಯ ಒದಗಿಸುವ ಸಲುವಾಗಿ ಯಶಸ್ವಿನಿ ಯೋಜನೆ ರಾಜ್ಯದಲ್ಲಿ 2003 ರಿಂದ ಆರಂಭವಾಗಿತ್ತು. ಆ ಬಳಿಕ 2018ರಲ್ಲಿ ಈ ಯೋಜನೆಯನ್ನು ರದ್ದು ಪಡಿಸಲಾಗಿತ್ತು. ಇದೀಗ ಮತ್ತೆ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದ ಸರ್ಕಾರ ಪರಿಷ್ಕಣೆಯೊಂದಿಗೆ ಯಶಸ್ವಿನಿ ಯೋಜನೆ ಮರು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಕಳೆದ ಬಜೆಟ್‍ನಲ್ಲಿ ಯೋಜನೆ ಮರುಜಾರಿ ಬಗ್ಗೆ ಬಿಜೆಪಿ (BJP) ಸರ್ಕಾರ ಪ್ರಸ್ತಾಪಿಸಿತ್ತು. ಇದೀಗ ಯಶಸ್ವಿನಿ ಪರಿಷ್ಕೃತ ಯೋಜನೆಗೆ ಬೊಮ್ಮಾಯಿ ಸರ್ಕಾರ 300 ಕೋಟಿ ರೂ. ನಿಗದಿ ಪಡಿಸಿದೆ. ನವೆಂಬರ್ 1 ರಿಂದ ಯೋಜನೆಯಡಿ ಸದಸ್ಯತ್ವ ನೋಂದಣಿ ಆರಂಭವಾಗಲಿದೆ. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು ದಾಖಲು
Advertisement
ಮುಖ್ಯಮಂತ್ರಿ @BSBommai ಅವರು ಈ ಹಿಂದೆ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯದ ರೈತರ ಪಾಲಿನ ಸಂಜೀವಿನಿಯಾಗಿದ್ದ ಯಶಸ್ವಿನಿ ಯೋಜನೆಯನ್ನು ಮರುಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಆರಂಭಿಕ ಹಂತದಲ್ಲಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ₹300 ಕೋಟಿ ರೂಪಾಯಿಗಳನ್ನು ಮೀಸಲಿರಿಸಲಾಗಿದೆ.
1/2 pic.twitter.com/Y0jgp5PhtZ
— CM of Karnataka (@CMofKarnataka) October 12, 2022
Advertisement
ಈ ಯೋಜನೆಯಡಿಯಲ್ಲಿ ಒಂದು ಕುಟುಂಬ 5 ಲಕ್ಷವರೆಗೆ ನಗದು ರಹಿತ ಚಿಕಿತ್ಸೆ ಪಡೆಯಬಹುದಾಗಿದೆ. ಗ್ರಾಮೀಣ ಸಹಕಾರ ಸಂಘಗಳ, ಸ್ವಸಹಾಯ ಸಂಘಗಳ ಗರಿಷ್ಠ ನಾಲ್ವರು ಸದಸ್ಯರ ಕುಟುಂಬ 500 ರೂ. ಮತ್ತು ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರಿದ್ದವರು ಒಬ್ಬರಿಗೆ ತಲಾ 100 ರೂ.ನಂತೆ ಪಾವತಿಸಬೇಕು ನಗರ ಸಹಕಾರ ಸಂಘಗಳ ಗರಿಷ್ಠ ನಾಲ್ವರು ಸದಸ್ಯರಿದ್ದವರು 1,000 ರೂ. ಹೆಚ್ಚುವರಿ ಸದಸ್ಯರಿಗೆ 200 ರೂ. ಪಾವತಿಸಿ ವಿಮೆ ಪಡೆಯಬಹುದಾಗಿದೆ. ಇದನ್ನೂ ಓದಿ: ಕಾಂಗ್ರೆಸ್ 80 ಸ್ಥಾನ ಗಳಿಸಿದ್ರೆ ನನ್ನ ಬೆರಳು ಕತ್ತರಿಸಿ ಕೊಡುತ್ತೇನೆ: ಶಿವನಗೌಡ ನಾಯಕ
Advertisement
ಈ ಹಿಂದೆ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯದ ರೈತರ ಪಾಲಿನ ಸಂಜೀವಿನಿಯಾಗಿದ್ದ ಯಶಸ್ವಿನಿ ಯೋಜನೆಯನ್ನು ಮರುಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಆರಂಭಿಕ ಹಂತದಲ್ಲಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು 300 ಕೋಟಿ ರೂಪಾಯಿಗಳನ್ನು ಮೀಸಲಿರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.