ಧಾರವಾಡ: ಆಸ್ಪತ್ರೆ ಸಹಾಯಕಿಯೊಬ್ಬಳು ನಾಲ್ಕು ದಿನದ ಮಗುವನ್ನು ಬಿಸಿನೀರಿನ ಟಬ್‍ನಲ್ಲಿ ಕೂರಿಸಿ ಸುಟ್ಟ ಗಾಯ ಮಾಡಿದ್ದು ತಪ್ಪು ಎಂದು ಪರಿಗಣಿಸಿ ಹುಬ್ಬಳ್ಳಿಯ ಸಿಟಿ ಕ್ಲಿನಿಕ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ (Multi Speciality) ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು 10 ಲಕ್ಷ ದಂಡ ವಿಧಿಸಿ ಆದೇಶ ಮಾಡಿದೆ.
ಹುಬ್ಬಳ್ಳಿಯ (Hubballi) ವಿನಯ ಹಂಜಿ ಅವರ ಪತ್ನಿ ರೇಖಾ ಅವರು 2019ರ ಡಿ.10ರಂದು ಹುಬ್ಬಳ್ಳಿಯ ಸಿಟಿ ಕ್ಲಿನಿಕ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಿಸಿನೀರಿದ್ದ ಟಬ್‍ನಲ್ಲಿ ಮಗುವನ್ನು ಸ್ನಾನಕ್ಕೆ ಕೂರಿಸಿದ್ದರಿಂದ ಪೃಷ್ಠದ ಭಾಗ ಸುಟ್ಟು ಚರ್ಮ ಸುಲಿದಿತ್ತು. ಈ ವಿಚಾರವನ್ನು ಮಗುವಿನ ಪೋಷಕರು ಆಸ್ಪತ್ರೆ ಮುಖ್ಯಸ್ಥರ ಗಮನಕ್ಕೆ ತಂದಿದ್ದರು. ಆದರೆ ಅದು ಚರ್ಮ ರೋಗ ಎಂದು ಹೇಳಿ ಆಸ್ಪತ್ರೆಯ ವೈದ್ಯರು ಅದನ್ನ ಮರೆ ಮಾಚಿದ್ದರು.
Advertisement
Advertisement
ವಿನಯ ಹಂಜಿಯವರು ಪತ್ನಿ ಮತ್ತು ಆ ಮಗುವನ್ನು ಸಿಟಿ ಕ್ಲಿನಿಕ್ ಆಸ್ಪತ್ರೆಯಿಂದ ಬಿಡುಗಡೆ ಮಾಡಿಸಿಕೊಂಡು ಧಾರವಾಡದ ಬೇರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಆಸ್ಪತ್ರೆಯಲ್ಲಿ ಮಗುವಿನ ಚರ್ಮದ ಸುಟ್ಟ ಗಾಯಗಳಿಗೆ ಚಿಕಿತ್ಸೆ ನೀಡಿದರು. ಆಗ ಮಗು ಗುಣಮುಖವಾಯಿತು. ಈ ಬಗ್ಗೆ ವಿನಯ ಹಂಜಿಯವರು ಹುಬ್ಬಳ್ಳಿಯ ಸಿಟಿ ಕ್ಲಿನಿಕ್ ಹಾಗೂ ಅಲ್ಲಿನ 7 ಮಂದಿ ವೈದ್ಯರ ವಿರುದ್ಧ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಇದನ್ನೂ ಓದಿ: ರಾಮನಗರದಲ್ಲಿ ಅಶಾಂತಿ ಸೃಷ್ಠಿಸೋದೆ ಹೆಚ್‌ಡಿಕೆ ಕೆಲಸ: ಡಿಕೆಶಿ
Advertisement
ಸದ್ಯ ಕೃತ್ಯ ನಡೆದ ಅವಧಿಯಲ್ಲಿ ವಿಮೆ ಚಾಲ್ತಿಯಲ್ಲಿ ಇದ್ದಿದ್ದರಿಂದ ಯುನೈಟೆಡ್ ಇಂಡಿಯಾ ವಿಮಾ ಕಂಪನಿಯು ಪರಿಹಾರದ 75% ಭಾಗ ಮತ್ತು ಬಾಕಿ 25% ಭಾಗವನ್ನು ಆಸ್ಪತ್ರೆಯವರು ಪಾವತಿಸಬೇಕು. ತೀರ್ಪು ನೀಡಿದ ದಿನದಿಂದ ತಿಂಗಳೊಳಗೆ 10 ಲಕ್ಷ ಪರಿಹಾರ ನೀಡಬೇಕು, ತಪ್ಪಿದ್ದಲ್ಲಿ ಪರಿಹಾರ ಮೊತ್ತಕ್ಕೆ ವಾರ್ಷಿಕ 8% ಬಡ್ಡಿ ಲೆಕ್ಕಹಾಕಿ ಕೊಡಬೇಕು ಎಂದು ಆಯೋಗ ಆದೇಶದಲ್ಲಿ ತಿಳಿಸಿದೆ.