– ಬೆಂಕಿ ಕೆನ್ನಾಲಿಗೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ
ರಾಯಚೂರು: ನಗರದ ಮಹಾವೀರ ಚೌಕ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ (Short Circuit Fire) ಎಲೆಕ್ಟ್ರಿಕ್ ಚಾರ್ಜಿಂಗ್ ಬ್ಯಾಟರಿ (Electric Charging Battery) ಅಂಗಡಿಗೆ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆಗೆ ಅಂಗಡಿಯಲ್ಲಿನ ವಸ್ತುಗಳು ಸುಟ್ಟು ಭಸ್ಮವಾಗಿವೆ.
ರಾಯಚೂರಿನ (Raichur) ಆರ್.ಕೆ ಭಂಡಾರಿ ಎಂಬುವವರಿಗೆ ಸೇರಿದ ಅಂಗಡಿಗೆ ಬೆಂಕಿ ತಗುಲಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಇದನ್ನೂ ಓದಿ: ಹನುಮಾನ್ ಚಾಲೀಸಾ ಹಾಕಲು ಅನುಮತಿ ಇಲ್ಲ, ರಸ್ತೆಯಲ್ಲಿ ನಮಾಜ್ ಮಾಡಲು ಅನುಮತಿ ಬೇಕಿಲ್ಲ: ಬಿಜೆಪಿ ಕಿಡಿ
ಅದೃಷ್ಟವಶಾತ್ ಅಂಗಡಿಯಲ್ಲಿದ್ದ ಕೆಲಸಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಇದನ್ನೂ ಓದಿ: ಪ್ರಜಾಪ್ರಭುತ್ವ, ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ನೆಹರೂ – ಸಿದ್ದರಾಮಯ್ಯ
ಮೂರು ಅಂತಸ್ತಿನ ಕಟ್ಟಡಕ್ಕೆ ಬೆಂಕಿ ಆವರಿಸಿದ್ದು ಸುತ್ತಮುತ್ತಲಿನ ಅಂಗಡಿಗಳ ವ್ಯಾಪಾರಸ್ಥರು ಸಹ ಆತಂಕಕ್ಕೆ ಒಳಗಾಗಿದ್ದರು. ಈ ಸಂಬಂಧ ಸದರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.