ಆನೇಕಲ್: ಖಾಸಗಿ ಕಾಲೇಜಿನ (Private College) ಆರನೇ ಮಹಡಿಯಿಂದ ಬಿಬಿಎ (BBA) ವಿದ್ಯಾರ್ಥಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ನಲ್ಲಿ (Anekal) ಮಂಗಳವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಹೊಂಗಸಂದ್ರದ ರಾಘವೇಂದ್ರ ಲೇಔಟ್ ನಿವಾಸಿ ವಿಘ್ನೇಶ್.ಕೆ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ವಿಘ್ನೇಶ್ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದನು. ಮಂಗಳವಾರ ಕಾಲೇಜಿನ ಇಂಜಿನಿಯರಿಂಗ್ ವಿಭಾಗದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ:ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನಿಂದ ಬಾಂಬ್ ಬೆದರಿಕೆ – ಆಸಾಮಿ ಅಂದರ್!
ಸದ್ಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಕುರಿತು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ಮಣಿಪುರದಲ್ಲಿ ಮತ್ತೆ ಗುಂಡಿನ ಸುರಿಮಳೆ – ಇಬ್ಬರು ಸಾವು, ಓರ್ವ BJP ಮುಖಂಡನಿಗೆ ಗಂಭೀರ ಗಾಯ