ನವದೆಹಲಿ: ಆನ್‌ಲೈನ್ ವೇದಿಕೆಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಬಿಸಿ ಸಿದ್ಧಪಡಿಸಿದ್ದ ಸಾಕ್ಷ್ಯಚಿತ್ರ (BBC Documentary) ಪ್ರಸಾರ ನಿಷೇಧಿಸಿರುವ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರಕ್ಕೆ (Government Of India) ಸುಪ್ರೀಂ ಕೋರ್ಟ್ (Supreme Court) ನೋಟಿಸ್ ಜಾರಿ ಮಾಡಿದೆ.
ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸಂಜೀವ್ ಖನ್ನಾ ಮತ್ತು ಎಂ.ಎಂ ಸುಂದ್ರೇಶ್ ಅವರ ದ್ವಿಸದಸ್ಯ ಪೀಠ ಯಾವುದೇ ಮಧ್ಯಂತರ ಆದೇಶ ನೀಡದೇ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಏಪ್ರಿಲ್‌ಗೆ ಮುಂದೂಡಿತು. ಇದನ್ನೂ ಓದಿ: ಚೀನಾ ಓಲೈಸಲು ಮೋದಿ ವಿರುದ್ಧ ಬಿಬಿಸಿ ಸಾಕ್ಷ್ಯಚಿತ್ರ: ಮಹೇಶ್ ಜೇಠ್ಮಾಲನಿ
Advertisement
Advertisement
2002ರ ಗುಜರಾತ್ ಗಲಭೆಗೆ ಸಂಬಂಧಿಸಿದ `ಇಂಡಿಯಾ: ದಿ ಮೋದಿ ಕ್ವಶ್ಚನ್’ (India: The Modi Question) ಎಂಬ ಶೀರ್ಷಿಕೆಯ ಬಿಬಿಸಿ ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ನಿರ್ಬಂಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ವಕೀಲ ಎಂ.ಎಲ್ ಶರ್ಮಾ, ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ, ಪತ್ರಕರ್ತ ಎನ್. ರಾಮ್ ಹಾಗೂ ವಕೀಲ ಪ್ರಶಾಂತ್ ಭೂಷಣ್ (Prashant Bhushan) ಅವರು ಸಲ್ಲಿಸಿದ್ದರು.
Advertisement
Advertisement
ಫೆಬ್ರವರಿ 3ರಂದು ನಡೆದ ವಿಚಾರಣೆ ವೇಳೆ ಸರ್ಕಾರದ ಆದೇಶಕ್ಕೆ ತಡೆ ನೀಡಬೇಕು. ಸಾರ್ವಜನಿಕ ವಲಯದಲ್ಲಿ ಪ್ರಸಾರಕ್ಕೆ ಅವಕಾಶ ನೀಡಬೇಕು ಎಂದು ವಾದಿಸಲಾಯಿತು. ಇದನ್ನೂ ಓದಿ: ಮೋದಿ ವಿರುದ್ಧದ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ರಷ್ಯಾ ಆಕ್ರೋಶ
ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಕೇಂದ್ರ ಸರ್ಕಾರದ ಅಭಿಪ್ರಾಯ ಕೇಳದೆ ಯಾವುದೇ ಆದೇಶ ನೀಡಲು ಸಾಧ್ಯವಿಲ್ಲ, ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಬಳಿಕ ಈ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಹೇಳಿತು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k