ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ (Narendra Modi) ಕುರಿತು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಚಿತ್ರ ( BBC Documentary) ಈಗಾಗಲೇ ದೇಶದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಭಾರೀ ಸಂಘರ್ಷವನ್ನುಂಟುಮಾಡಿದೆ. ದೇಶದ ವಿವಿಧ ವಿಶ್ವವಿದ್ಯಾಲಯಗಳಲ್ಲಿ (Hyderabad University) ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ಸಿನಿಮಾ ಮಾದರಿಯಲ್ಲಿ ವೀಕ್ಷಣೆ ಮಾಡುತ್ತಿದ್ದಾರೆ.
Advertisement
ಹೈದರಾಬಾದ್ ವಿಶ್ವವಿದ್ಯಾನಿಲಯದಲ್ಲಿ ಗುರುವಾರ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) `ಪಿಎಂ ಮೋದಿ’ ಅವರ ಬಿಬಿಸಿ ಸಾಕ್ಷ್ಯಚಿತ್ರದ ಪ್ರದರ್ಶನ ಆಯೋಜಿಸಿತ್ತು. ಇದಕ್ಕೆ ತಿರುಗೇಟು ನೀಡುವಂತೆ ಆರ್‌ಎಸ್‌ಎಸ್ (RSS) ಸಂಯೋಜಿತ ಎಬಿವಿಪಿ (ABVP) ಸಂಘಟನೆಯು ಅದೇ ಕ್ಯಾಂಪಸ್‌ನಲ್ಲಿ `ದಿ ಕಾಶ್ಮೀರ್ ಫೈಲ್ಸ್’ (The Kashmir Files) ಚಿತ್ರ ಪ್ರದರ್ಶನ ಏರ್ಪಡಿಸಿತ್ತು.
Advertisement
ಗಣರಾಜ್ಯೋತ್ಸವ ದಿನದಂದೇ ವಿವಿಯಲ್ಲಿ ಸಾಕ್ಷ್ಯಚಿತ್ರ ಸ್ಕ್ರೀನಿಂಗ್ ಮಾಡಲಾಗಿದ್ದು, 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ವೀಕ್ಷಣೆ ಮಾಡಿದ್ದಾರೆ ಎಂದು ಎಸ್‌ಎಫ್‌ಐ ಹೇಳಿಕೊಂಡಿದೆ.
Advertisement
Advertisement
ಪೂರ್ವಾನುಮತಿಯಿಲ್ಲದೇ ಕ್ಯಾಂಪಸ್‌ನಲ್ಲಿ ಚಿತ್ರಪ್ರದರ್ಶಿಸಿದ ಬಗ್ಗೆ ವರದಿ ನೀಡುವಂತೆ ವಿವಿ ಅಧಿಕಾರಿಗಳಿಗೆ ತಾಕೀತು ಮಾಡಿದ್ದು, ಈ ಬೆನ್ನಲ್ಲೇ ಎಬಿವಿಪಿ, ಎಸ್‌ಎಫ್‌ಐ ವಿರುದ್ಧ ದೂರು ಸಲ್ಲಿಸಿದೆ. ಆದರೆ ಎಸ್‌ಎಫ್‌ಐ ತನ್ನ ಮೇಲಿನ ಆರೋಪವನ್ನು ತಳ್ಳಿಹಾಕಿದೆ.
ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿ ಎಬಿವಿಪಿ ವಿದ್ಯಾರ್ಥಿಗಳು ಅದೇ ದಿನ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ `ದಿ ಕಾಶ್ಮೀರ ಫೈಲ್ಸ್’ ಚಿತ್ರ ಪ್ರದರ್ಶಿಸಿದ್ದಾರೆ. ಇದನ್ನೂ ಓದಿ: ಡಾರ್ಕ್‌ನೆಟ್ ಬಳಸಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನ- ರಣಾಂಗಣವಾದ ವಿವಿ ಕ್ಯಾಂಪಸ್
ಎರಡೂ ಸಿನಿಮಾಗಳ ಸ್ಕ್ರೀನಿಂಗ್ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ, ಕ್ಯಾಂಪಸ್ ಶಾಂತಿಯುತವಾಗಿತ್ತು ಎಂದು ವಿಶ್ವವಿದ್ಯಾನಿಲಯದ ರಿಜಿಸ್ಟಾರ್ ಹೇಳಿದ್ದಾರೆ. ಆದರೆ ಎಬಿವಿಪಿ ಕಾರ್ಯಕರ್ತರು ಕ್ಯಾಂಪಸ್ ಭದ್ರತಾ ಸಿಬ್ಬಂದಿ ತಮ್ಮ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿದ್ದಾರೆ. ಇದನ್ನೂ ಓದಿ: Australian Open 2023: ಫೈನಲ್‍ನಲ್ಲಿ ಸೋತ ಬೋಪಣ್ಣ, ಸಾನಿಯಾ ಜೋಡಿ – ರನ್ನರ್ ಅಪ್ ಕಿರೀಟದೊಂದಿಗೆ ಗ್ರ್ಯಾಂಡ್ ಸ್ಲಾಮ್‍ಗೆ ಗುಡ್‍ಬೈ
ವಿಶ್ವವಿದ್ಯಾನಿಲಯ ಆಡಳಿತ ಮಂಡಳಿ `ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರದ ಪ್ರದರ್ಶನ ನಿಲ್ಲಿಸಲು ಪ್ರಯತ್ನಿಸಿತು. ಎಬಿವಿಪಿ ಕಾರ್ಯಕರ್ತರು ಮುಖ್ಯದ್ವಾರದಿಂದ ಪ್ರೊಜೆಕ್ಟರ್ ತರುತ್ತಿದ್ದಾಗ ವಿಶ್ವವಿದ್ಯಾಲಯದ ಭದ್ರತಾ ಸಿಬ್ಬಂದಿ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ಸಹ ನಡೆಸಿದರು ಎಂದು ಎಬಿವಿಪಿ ಜಾಲತಾಣದಲ್ಲಿ ಹಂಚಿಕೊಂಡಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k