‘ಬಿಗ್ ಬಾಸ್ ಕನ್ನಡ 10’ರ (Bigg Boss Kannada 11) ಮೂಲಕ ಗಮನ ಸೆಳೆದ ಡ್ರೋನ್ ಪ್ರತಾಪ್ (Drone Prathap) ಇದೀಗ ಚಿತ್ರರಂಗಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಹೊಸ ಚಿತ್ರವನ್ನು ಒಪ್ಪಿಕೊಂಡಿರೋದಾಗಿ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪ್ರತಾಪ್ ಅನೌನ್ಸ್ ಮಾಡಿದ್ದಾರೆ. ಇದನ್ನೂ ಓದಿ:‘ವಿಶ್ವ ಕನ್ನಡ ಹಬ್ಬ’ಕ್ಕೆ ಹಾರೈಸಿದ ಶಿವರಾಜ್ ಕುಮಾರ್
ಒಂದು ಚಿತ್ರಕ್ಕೆ ನಾಯಕ ನಟನಾಗಿ ಅಭಿನಯಿಸುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಬೇಕು. ನನ್ನ ಬ್ಯುಸಿನೆಸ್ ಜೊತೆಗೆ ಸಿನಿಮಾ ರಂಗಕ್ಕೂ ಕಾಲಿಡುತ್ತಿದ್ದೇನೆ. ಶ್ರೀ ಆಂಜನೇಯಸ್ವಾಮಿ ಆಶೀರ್ವಾದದೊಂದಿಗೆ ಎಂದು ಡ್ರೋನ್ ಪ್ರತಾಪ್ ಇನ್ಸ್ಟಾಗ್ರಾಂ ಖಾತೆಯಲ್ಲಿ ತಿಳಿಸಿದ್ದಾರೆ. ನಟನ ಈ ವಿಡಿಯೋ ನೋಡಿ ಫ್ಯಾನ್ಸ್ ಶುಭಕೋರಿದ್ದಾರೆ.
View this post on Instagram
ಸಿನಿಮಾ ಅನೌನ್ಸ್‌ಮೆಂಟ್ ಜೊತೆಗೆ ಮಂಡ್ಯದ ಕೆ.ಆರ್ ಪೇಟೆಯ ಹನುಮಂತನ ದೇವಸ್ಥಾನವನ್ನು ಇಂದು (ನ.21) ಪ್ರತಾಪ್ ಉದ್ಘಾಟನೆ ಮಾಡಿದ್ದಾರೆ. ಇನ್ನೂ ಚಿತ್ರದಲ್ಲಿ ನಟಿಸುವ ಬಗ್ಗೆ ಅವರು ತಿಳಿಸಿದ್ದಾರೆ. ಆದರೆ ಚಿತ್ರದ ಬಗ್ಗೆ ಯಾವುದೇ ವಿವರ ನೀಡಿಲ್ಲ.