ತಂದೆಗೆ ಅನ್ನ ಹಾಕದವಳು ಏನು ದೇಶ ಸೇವೆ ಮಾಡ್ತಾಳೆ?- ತಂದೆ ಬಾಲಕೃಷ್ಣ ನಾಯ್ಕ್
ನನ್ನನ್ನು ಮನೆಯ ಜಗಲಿಯಲ್ಲಿ ಬಿಟ್ಟು ಬೀಗ ಹಾಕಿಕೊಂಡು ಬಿಗ್ ಬಾಸ್‌ಗೆ (Bigg Boss Kannada 11) ಹೋಗಿದ್ದಳು ಎಂದು ಚೈತ್ರಾ (Chaithra Kundapura) ಮತ್ತು ಪತ್ನಿಯ ವಿರುದ್ಧ ಬಾಲಕೃಷ್ಣ ನಾಯ್ಕ್ ಕಿಡಿಕಾರಿದ್ದಾರೆ. ತಂದೆಗೆ ಅನ್ನ ಹಾಕದವಳು ದೇಶ ಸೇವೆ ಏನು ಮಾಡುತ್ತಾಳೆ ಎಂದು ಚೈತ್ರಾ ತಂದೆ ತಿರುಗಿಬಿದ್ದಿದ್ದಾರೆ. ಇದನ್ನೂ ಓದಿ:ಚೈತ್ರ & ಆಕೆಯ ಪತಿ ಇಬ್ಬರೂ ಕಳ್ಳರು- ಮಗಳ ಮದುವೆಗೆ ತಂದೆ ಆಕ್ಷೇಪ

ಬಿಗ್ ಬಾಸ್ ವೇದಿಕೆಯಲ್ಲಿ ಎಲ್ಲಾ ಸತ್ಯ ಒಪ್ಪಿಕೊಳ್ಳಬಹುದಾಗಿತ್ತು. ನಾನೇ ಮನೆ ನಡೆಸುವವಳು ಎಂದು ಬಿಂಬಿಸಿಕೊಂಡಿದ್ದಾಳೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಈಕೆ ಹಣ ಹೊಡೆದಿರುತ್ತಾಳೆ. ಬೇರೆ ಬೇರೆ ಬ್ಯಾಂಕುಗಳಲ್ಲಿ ಡೆಪಾಸಿಟ್ ಇಟ್ಟಿದ್ದಳು. ಪಡ್ಡೆ ಹುಡುಗರ ಹೆಸರಿನಲ್ಲೆಲ್ಲ ಡೆಪಾಸಿಟ್ ಮಾಡಿ ಬಾಂಡ್ ಮೇಲೆ ಸಾಲ ಪಡೆದಿದ್ದಳು. ನನ್ನ ಮಗಳು ಎಂದು ಹೇಳಲು ನಾಚಿಕೆಯಾಗುತ್ತದೆ. ತಂದೆ ಇಲ್ಲದ ಮಗಳು ಎಂದು ಹೇಳಿಕೊಂಡು ಬರುತ್ತಾಳೆ. ನನ್ನ ತಂದೆ ಬಾಲ ನಾಯ್ಕ್ ಗೌರವಾನ್ವಿತ ವ್ಯಕ್ತಿಯಾಗಿದ್ದರು. ತಂದೆಗೆ ಅನ್ನ ಹಾಕದವಳು ಏನು ದೇಶ ಸೇವೆ ಮಾಡುತ್ತಾಳೆ? ನನ್ನ ಹೆಂಡತಿಗೂ ಹಣ ಕೊಟ್ಟಿದ್ದಾಳೆ, ಅವಳಿಗೆ ಗಂಡ ಬೇಡ ಎಂದು ಪತ್ನಿ ವಿರುದ್ಧವು ಮಾತನಾಡಿದ್ದಾರೆ.

