‘ಬಿಗ್ ಬಾಸ್ ಕನ್ನಡ 11’ರ ಸ್ಪರ್ಧಿ (Bigg Boss Kannada 11) ಚೈತ್ರಾ ಕುಂದಾಪುರ (Chaithra Kundapura) ಅವರು 12 ವರ್ಷಗಳಿಂದ ಪ್ರೀತಿಸುತ್ತಿದ್ದ ಗೆಳೆಯನೊಂದಿಗೆ ಹಸೆಮಣೆ (Wedding) ಏರಲು ರೆಡಿಯಾಗಿದ್ದಾರೆ. ಇದನ್ನು ಖುದ್ದು ‘ಪಬ್ಲಿಕ್ ಟಿವಿ’ಗೆ ಚೈತ್ರಾ ತಿಳಿಸಿದ್ದಾರೆ. ಇದನ್ನೂ ಓದಿ:ಯುದ್ಧವು ದೇಶದ ಖ್ಯಾತಿಗೆ ಒಳ್ಳೆಯದಲ್ಲ: ‘ಆಪರೇಷನ್ ಸಿಂಧೂರ’ ಬಗ್ಗೆ ಸಂಜನಾ ಗಲ್ರಾನಿ ಪೋಸ್ಟ್
ನಮ್ಮದು 12 ವರ್ಷಗಳ ಪ್ರೀತಿ. ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದೆ. ಗುರುಹಿರಿಯರ ಸಮ್ಮತಿಯ ಮೇರೆಗೆ ಪ್ರೀತಿಸಿದ ಹುಡುಗನೊಂದಿಗೆ ಮೇ 9ರಂದು ಕುಂದಾಪುರದಲ್ಲಿ ಮದುವೆ ಆಗುತ್ತಿದ್ದೇನೆ. ಈಗಾಗಲೇ ಮೆಹಂದಿ ಸೇರಿದಂತೆ ಮದುವೆ ಶಾಸ್ತ್ರಗಳು ಆರಂಭ ಆಗಿದೆ. ಕುಟುಂಬಕ್ಕೆ ಆಪ್ತರಾದ 100 ಜನರಿಗೆ ಮಾತ್ರ ಮದುವೆಗೆ ಆಹ್ವಾನಿಸಿದ್ದೇವೆ. ದೇವಸ್ಥಾನವೊಂದರಲ್ಲಿ ಸರಳವಾಗಿ ಮದುವೆಯಾಗುತ್ತಿದೆ. ವೈದಿಕ ಶಾಸ್ತ್ರದಂತೆ ಮದುವೆ ಕಾರ್ಯಕ್ರಮ ನಡೆಯಲಿದೆ ಎಂದಿದ್ದಾರೆ ಚೈತ್ರಾ. ಇದನ್ನೂ ಓದಿ:ಆಪರೇಷನ್ ಸಿಂಧೂರ: ಪ್ರಾಣವನ್ನೇ ಪಣಕ್ಕಿಟ್ಟು ರಕ್ಷಿಸುವ ನಮ್ಮ ಸೈನಿಕರಿಗೆ ಥ್ಯಾಂಕ್ಯೂ ಎಂದ ರಶ್ಮಿಕಾ ಮಂದಣ್ಣ
View this post on Instagram
ಇದುವರೆಗೂ ಮದುವೆಯಾಗುವ ಹುಡುಗನ ಫೋಟೋವನ್ನು ಚೈತ್ರಾ ರಿವೀಲ್ ಮಾಡಿಲ್ಲ. ಹೀಗಾಗಿ ಸಹಜವಾಗಿ ಫೈರ್ ಬ್ರ್ಯಾಂಡ್ ಚೈತ್ರಾ ಮದುವೆಯಾಗುತ್ತಿರುವ ವರ ಯಾರು ಎಂಬುದರ ಬಗ್ಗೆ ಫ್ಯಾನ್ಸ್‌ಗೆ ಕುತೂಹಲವಿದೆ. ಚೈತ್ರಾ ಅದ್ಯಾವಾಗ ರಿವೀಲ್ ಮಾಡ್ತಾರೆ ಎಂದು ಎದುರು ಮಾಡ್ತಿದ್ದಾರೆ.
ಇತ್ತೀಚೆಗೆ ‘ಮಜಾ ಟಾಕೀಸ್’ ಶೋಗೆ ಬಿಗ್ ಬಾಸ್ ಸ್ಪರ್ಧಿಗಳಾದ ಧರ್ಮ ಕೀರ್ತಿರಾಜ್, ಅನುಷಾ ರೈ ಹಾಗೂ ಚೈತ್ರಾ ಎಂಟ್ರಿ ಕೊಟ್ಟಿದ್ದರು. ಚೈತ್ರಾ ಕುಂದಾಪುರ ಅವರಿಗೆ ಮದುವೆ ಫಿಕ್ಸ್ ಅಗಿದೆ ಎನ್ನುತ್ತಲೇ ಸೃಜನ್ ಲೋಕೇಶ್ ಮಾತು ಶುರು ಮಾಡಿದ್ದರು. ಚೈತ್ರಾಗೆ ಸೃಜನ್ ಲವ್ ಅಥವಾ ಅರೇಂಜ್ಡ್ ಮ್ಯಾರೇಜಾ ಎಂಬ ಪ್ರಶ್ನಿಸಿದ್ದರು. ಇದಕ್ಕೆ ಎರಡು ಎಂದು ಚೈತ್ರಾ ಉತ್ತರ ನೀಡಿದ್ದರು. ಈ ಮಧ್ಯೆ ಅವರದ್ದು 12 ವರ್ಷದ ಲವ್ ಸ್ಟೋರಿ ಎಂಬ ಅನುಷಾ ರೈ ಮಾತಿಗೆ, ಚೈತ್ರಾ ಯೆಸ್ ಕಾಲೇಜಿನಲ್ಲಿ ಲವ್ ಶುರುವಾಗಿದ್ದು ಅನ್ನೋ ವಿಚಾರವನ್ನು ರಿವೀಲ್ ಮಾಡಿದ್ದರು.