ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ರಜತ್‌ಗೆ (Rajath) 14 ದಿನಗಳ ನ್ಯಾಯಾಂಗ ಬಂಧನಕ್ಕೆ 24ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ಇದನ್ನೂ ಓದಿ:ಶ್ರೀದೇವಿ ಬಯೋಪಿಕ್‌ನಲ್ಲಿ ನಟಿಸಲು ಸಿದ್ಧ ಎಂದ ಪೂಜಾ ಹೆಗ್ಡೆ
ರೀಲ್ಸ್ ಕೇಸ್‌ಗೆ ಸಂಬಂಧ ವಿಚಾರಣೆಗೆ ರಜತ್‌ಗೆ 2 ಬಾರಿ ನೋಟಿಸ್ ನೀಡಿದ್ದರು. ವಿಚಾರಣೆಗೆ ಹಾಜರಾಗದ ರಜತ್‌ನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿ ಇಂದು ಕೋರ್ಟ್ ಹಾಜರುಪಡಿಸಿದ್ದರು. ಇದನ್ನೂ ಓದಿ:ರೀಲ್ಸ್ ಕೇಸ್: ‘ಬಿಗ್ ಬಾಸ್’ ರಜತ್ ಮತ್ತೆ ಅರೆಸ್ಟ್, ವಿನಯ್‌ಗೂ ಬಂಧನ ಭೀತಿ
ವಿಚಾರಣೆ ನಡೆಸಿದ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಈ ಆದೇಶದ ಅನ್ವಯ ರಜತ್ ಏ.29ರವರೆಗೆ ಪರಪ್ಪನ ಅಗ್ರಹಾರದಲ್ಲಿ ಇರಬೇಕಾಗುತ್ತದೆ.
ರೀಲ್ಸ್‌ಗೆ ಬಳಸಿದ್ದ ಮಚ್ಚು ಸಿಗದ ಹಿನ್ನೆಲೆ 2 ಬಾರಿ ನೋಟಿಸ್ ನೀಡಲಾಗಿತ್ತು. ಆದರೆ ಪೊಲೀಸ್ ವಿಚಾರಣೆಗೆ ಗೈರಾಗಿದ್ದಕ್ಕೆ ಅಸಮಾಧಾನಗೊಂಡಿದ್ದ ಕೋರ್ಟ್ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿತ್ತು.