ಬೆಂಗಳೂರು: ಹನುಮಂತು (Hanumantha) ಮುಂದೆ ಗಾಂಧೀಜಿ ನಿಂತಿದ್ದರು ಹನುಮಂತುನೇ ಗೆಲ್ಲುತ್ತಿದ್ದರು ಎಂದು ಬಿಗ್ ಬಾಸ್ ಸೀಸನ್ 11ರ (Bigg Boss 11) ಸೆಕೆಂಡ್ ರನ್ನರ್ ಅಪ್ ರಜತ್ ಕಿಶನ್ (Rajath Kishan) ಸಂತಸ ವ್ಯಕ್ತಪಡಿಸಿದರು.
ಬಿಗ್ ಬಾಸ್ 11ರ ಗ್ರ್ಯಾಂಡ್ ಫಿನಾಲೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಗ್ ಬಾಸ್ ಜರ್ನಿ ಚೆನ್ನಾಗಿತ್ತು. ಶಾರ್ಟ್ ಟೈಂನಲ್ಲಿ ಇಷ್ಟೊಂದು ಪ್ರೀತಿ ವಿಶ್ವಾಸ ಸಿಕ್ಕಿರೋದು ಖುಷಿ ಇದೆ ಎಂದು ಹರ್ಷ ವ್ಯಕ್ತಪಡಿಸಿದರು. ಇದನ್ನೂ ಓದಿ: ದೇವರಾಣೆ ಗೆಲ್ತೀನಿ ಅಂತ ಬಂದಿರಲಿಲ್ಲ, ಹೋಗಿ ಮಜಾ ಮಾಡಿ ಬರೋಣ ಅಂತ ಬಂದಿದ್ದೆ: ಹನುಮಂತ
ಇನ್ನು ಮಾಜಿ ಪ್ರೇಯಸಿ ಜೊತೆ ಪೋಟೋ ವೈರಲ್ ಮಾಡಿ ಟ್ರೋಲ್ ಪೇಜ್‌ಗಳು ಬೆದರಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಹೊರಗಡೆ ಬಂದಿದ್ದೀನಲ್ಲ, ನೋಡಿಕೊಳ್ಳುತ್ತೇನೆ ಬಿಡಿ ಎಂದರು. ಇದನ್ನೂ ಓದಿ: BBK 11: ಬಿಗ್ ಬಾಸ್ ಟ್ರೋಫಿ ಗೆದ್ದು ಸುದೀಪ್ ಕಾಲಿಗೆ ಬಿದ್ದ ಹನುಮಂತ
ಬಿಗ್ ಬಾಸ್ ಸೀಸನ್ 11ರಲ್ಲಿ ಹನುಮಂತ ವಿನ್ನರ್ ಆಗಿ ಹೊರಹೊಮ್ಮಿದ್ರೆ, ತ್ರಿವಿಕ್ರಮ್ ರನ್ನರ್ ಅಪ್ ಆಗಿದ್ದಾರೆ. ಇನ್ನು ಬಿಗ್ ಬಾಸ್ 11ರ ಶೋಗೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಬಂದಿದ್ದ ರಜತ್ ಅವರು ಮನೆಯಲ್ಲಿ ವೈಲ್ಡ್ ಆಗಿ ಆಟ ಆಡಿ ಸೆಕೆಂಡ್ ರನ್ನರ್ ಅಪ್ ಪಟ್ಟ ಸ್ವೀಕರಿಸಿದ್ದಾರೆ. ಇದನ್ನೂ ಓದಿ: BBK 11: ಹನುಮಂತ ಟ್ರೋಫಿ ಗೆದ್ದಿರೋದು ಖುಷಿಯಿದೆ- ತ್ರಿವಿಕ್ರಮ್ ರಿಯಾಕ್ಷನ್