‘ಬಿಗ್ ಬಾಸ್ ಕನ್ನಡ 7’ರ (Bigg Boss Kannada 7) ಸ್ಪರ್ಧಿ ಶೈನ್ ಶೆಟ್ಟಿ (Shine Shetty) ನಟನಾಗಿ ಮಾತ್ರವಲ್ಲ ಹೋಟೆಲ್ ಉದ್ಯಮ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡವರು. ಇದೀಗ ಅವರು ಬದುಕು ಕೊಟ್ಟ ರೆಸ್ಟೋರೆಂಟ್‌ಗೆ ಗುಡ್ ಬೈ ಹೇಳಿದ್ದಾರೆ. ಈ ಕುರಿತು ಶೈನ್ ಬಹಿರಂಗವಾಗಿ ಪತ್ರ ಬರೆದಿದ್ದಾರೆ. ಇದನ್ನೂ ಓದಿ:ಡಿವೋರ್ಸ್ ವದಂತಿಯ ನಡುವೆ ಬಿಂದಾಸ್ ಆಗಿ ಹೆಜ್ಜೆ ಹಾಕಿದ ಐಶ್ವರ್ಯಾ ರೈ ದಂಪತಿ
ಸೋಶಿಯಲ್ ಮೀಡಿಯಾ ಪೋಸ್ಟ್‌ನಲ್ಲಿ, ಜೀವನದ ಕೆಲವೊಂದು ಪ್ರಯಾಣ ನಮ್ಮ ಅಸ್ತಿತ್ವವನ್ನು ತೋರಿಸಿ ನಮ್ಮ ವ್ಯಕ್ತಿತ್ವವನ್ನು ಎತ್ತಿ ಹಿಡಿಯುತ್ತೆ ನನ್ನ ಲೈಫ್ ಅಲ್ಲಿ ಅದು ಗಲ್ಲಿ ಕಿಚನ್. ಜೀವನ ಸಾಗಿಸೋಕೆ ಅಂತ ಶುರು ಮಾಡಿದ ಒಂದು ಪುಟ್ಟ ದೋಸೆ ಕ್ಯಾಂಪ್ ನೀವೆಲ್ಲ ಇಷ್ಟಪಟ್ಟು ಕೊಂಡಾಡಿ ಎರಡು ಬ್ರಾಂಚ್‌ಗಳ ಹೋಟೆಲ್ ಮಟ್ಟಕ್ಕೆ ಪ್ರೀತಿಯಿಂದ ಬೆಳೆಸಿದ್ರಿ. ಆ ಪ್ರೀತಿ ವಿಶ್ವಾಸಕ್ಕೆ ನಾನು ಸದಾ ಚಿರಋಣಿ ಎಂದು ಶೈನ್ ಪತ್ರ ಬರೆದಿದ್ದಾರೆ. ಇದನ್ನೂ ಓದಿ:ಬಾತ್‌ರೂಮ್‌ನಲ್ಲಿ ರೀಲ್ಸ್ ಮಾಡಿದ ನಿವೇದಿತಾಗೆ ಕಾಲೆಳೆದ ನೆಟ್ಟಿಗರು
ಬೆಳೆಯುತ್ತಾ ಬೆಳಸ್ತಾ ಮುಂದಕ್ಕೆ ಸಾಗೋದೆ ಜೀವನ ಅಲ್ವಾ. ಹಾಗಾಗಿ, ಮುಂದೊಂದಿಷ್ಟು ಕೆಲಸ ಮಾಡೋದ್ ಇದೆ. ಅದಕ್ಕಾಗಿ ಹೊಸದೊಂದು ಪ್ರಯಾಣ ಶುರು ಮಾಡಬೇಕಾಗಿದೆ. ಹಾಗಾಗಿ 6 ವರ್ಷಗಳ ‘ಗಲ್ಲಿ ಕಿಚನ್’ ಪ್ರಯಾಣಕ್ಕೆ ವಿದಾಯ ಹೇಳೋ ಸಮಯ. ವಿದಾಯ ಹೇಳೋದು ಇಲ್ಲಿ ಬರದಷ್ಟು ಸುಲಭ ಅಲ್ಲ ನಿಮಗೂ ಗೊತ್ತು. ಆದರೆ ಜೀವನದಲ್ಲಿ ದಿಕ್ಕು ಮತ್ತು ಗುರಿ ಬದಲಾದಾಗ ಅದಕ್ಕೆ ಹೊಂದಿಕೊಂಡು ಹೋಗೋದು ಅನಿವಾರ್ಯ. ಗಲ್ಲಿ ಕಿಚನ್ ಅನ್ನು ನನ್ನಂತೆ ಆಸಕ್ತಿ ಇರೋ ಯುವ ಪ್ರತಿಭೆಗೆ ಹಸ್ತಾಂತರ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
View this post on Instagram
ಈ ಕನಸಿಗೆ ಹೊತ್ತಿದ್ದ ಜ್ವಾಲೆ ಇನ್ನು ಮುಂದೆ ಹೊಸ ಪಾಲುದಾರನ ಕೈಯಲ್ಲಿ ಹೊಸ ರೀತಿಯಲ್ಲಿ ಮುಂದುವರಿಯಲಿದೆ. ಶ್ರದ್ಧೆ ಇಂದ ಜನರ ಪ್ರೀತಿನ ಉಳ್ಕೊಂಡು ಬೆಳಸ್ಕೊಂಡು ಹೋಗ್ಲಿ ಅಂತ ಆಶಿಸ್ತೀನಿ. ತಿಂದುಂಡು ಹೊಗಳಿದ, ತಪ್ಪಿದ್ದಲ್ಲಿ ತಿದ್ದಿದ ನನ್ನೆಲ್ಲ ಅಭಿಮಾನಿಗಳೇ, ಭೋಜನ ಪ್ರಿಯರೇ, ಗಲ್ಲಿ ಕಿಚನ್ ಕುಟುಂಬಸ್ಥರೆ, ಮತ್ತೊಂದು ಪ್ರಯತ್ನದೊಂದಿಗೆ ಮರಳಿ ಬರುವೆ, ಮತ್ತೊಮ್ಮೆ ನಿಮ್ಮೆಲ್ಲರ ಸಹಕಾರ ಪ್ರೀತಿ ಬೇಡುವೆ ಎಂದಿದ್ದಾರೆ.
ಇನ್ನೂ ‘ಲಕ್ಷ್ಮಿ ಬಾರಮ್ಮ’ ಸೀರಿಯಲ್ ಬಳಿಕ ಚಿತ್ರರಂಗದಲ್ಲಿ ಹಿನ್ನೆಡೆಯಾದಾಗ ‘ಗಲ್ಲಿ ಕಿಚನ್’ ಫುಡ್ ಟ್ರಕ್ ಆರಂಭಿಸಿದ್ದರು. ಆ ನಂತರ ಶೈನ್ ಬಿಗ್ ಬಾಸ್‌ಗೆ ಹೋದಾಗ ಅವರ ತಾಯಿ ಇದನ್ನು ಮುಂದುವರೆಸಿಕೊಂಡು ಹೋದರು. ಶೋ ಮುಗಿದ್ಮೇಲೆ ಇನ್ನೆರಡು ಬ್ರ್ಯಾಂಚ್ ಅನ್ನು ಆರಂಭಿಸಿದರು. ಇದೀಗ ಬದುಕು ಕೊಟ್ಟ ಹೋಟೆಲ್ ಉದ್ಯಮಕ್ಕೆ ಅವರು ಗುಡ್ ಬೈ ಹೇಳಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್‌ಗೆ ನಿರಾಸೆ ಆಗಿದೆ.