ಬೆಂಗಳೂರು: ಏರ್ ಶೋ (Air Show) ಹಿನ್ನೆಲೆಯಲ್ಲಿ ಯಲಹಂಕ ವಾಯುಸೇನಾ ನೆಲೆಯ (Yelahanka Air Force Station) ಸುತ್ತಮುತ್ತ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಮೇಲೆ ಕ್ರೇನ್ (Crane) ಎತ್ತರವನ್ನು ತಗ್ಗಿಸುವಂತೆ ಬಿಬಿಎಂಪಿ (BBMP) ಸುತ್ತೋಲೆ ಪ್ರಕಟಿಸಿದೆ.
ಕಾರ್ಯಕ್ರಮದಲ್ಲಿ ಹಲವು ಯುದ್ಧ ವಿಮಾನಗಳು ಭಾಗಿಯಾಗಿ ಕಸರತ್ತು ನಡೆಸುವ ಹಿನ್ನೆಲೆಯಲ್ಲಿ ಬಿಬಿಎಂಪಿ (BBMP) ಈಗ ಸುತ್ತೋಲೆ ಪ್ರಕಟಿಸಿ ಬಹುಮಹಡಿ ಕಟ್ಟಡಗಳ ಸಂಸ್ಥೆಗಳ/ ಅಭಿವೃದ್ಧಿದಾರರಿಗೆ ಸೂಚನೆ ನೀಡಿದೆ.
ಸುತ್ತೋಲೆಯಲ್ಲಿ ಏನಿದೆ?
ಅಂತರಾಷ್ಟ್ರೀಯ ಮಟ್ಟದ ಏರ್ ಇಂಡಿಯಾ ನಡೆಯಲಿರುವ ಹಿನ್ನೆಲೆಯಲ್ಲಿ ಫೆ.1 ರಿಂದ ಫೆ.14ರವರೆಗೆ ಯಲಹಂಕ ವಾಯುಸೇನಾ ನೆಲೆಯಿಂದ 10 ಕಿ.ಮೀ ಅಂತರದಲ್ಲಿ ನಿರ್ಮಾಣ ಹಂತದಲ್ಲಿರುವ ಬೃಹತ್ ಕಟ್ಟಡಗಳಲ್ಲಿ ಉಪಯೋಗಿಸುವ ಕ್ರೇನ್‌ಗಳ ಎತ್ತರವನ್ನು ತಗ್ಗಿಸಬೇಕು ಹಾಗೂ ಕ್ರೇನ್ ಚಟುವಟಿಕೆಯನ್ನು ನಿಲ್ಲಿಸಬೇಕು. ಇದನ್ನೂ ಓದಿ: ಫೆ.10 ರಿಂದ ಬೆಂಗಳೂರಿನಲ್ಲಿ `ಏರೋ ಇಂಡಿಯಾ 2025′ – ಏಷ್ಯಾದ ಅತಿದೊಡ್ಡ ಏರ್ ಶೋ!
ವಾಯುಸೇನಾ ನೆಲೆಯಿಂದ 10 ಕಿ.ಮೀ ಅಂತರದಲ್ಲಿ ನಿರ್ಮಾಣ ಹಂತದಲ್ಲಿರುವ ಎಲ್ಲಾ ಬೃಹತ್ ಕಟ್ಟಡಗಳು, ಮೇಲಿನ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಬಿಬಿಎಂಪಿ ಕಾಯ್ದೆ 2020 ಮತ್ತು ಭಾರತೀಯ ಏರ್‌ಕ್ರಾಪ್ಟ್ 1937ರ ರೂಲ್ 91 ರಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಯಲಹಂಕದ ವಾಯುನೆಲೆಯಲ್ಲಿ ಫೆಬ್ರವರಿ 10 ರಿಂದ 14 ರವರೆಗೆ ಏರೋ ಇಂಡಿಯಾ-2025 (Aeroindia 2025)ವೈಮಾನಿಕ ಪ್ರದರ್ಶನ ನಡೆಯಲಿದ್ದು ಫೆ.13, 14 ರಂದು ಸಾರ್ವಜನಿಕರ ವೀಕ್ಷಣೆಗೆ ಅವಕಾಶವಿದೆ.