– ಐದು ಉತ್ತಮ ರೀಲ್ಸ್‌ಗೆ ತಲಾ 25,000 ರೂ. ಬಹುಮಾನ
– ಹೆಚ್ಚು ವಿದ್ಯಾರ್ಥಿಗಳನ್ನು ಬಳಸಿಕೊಂಡು ರೀಲ್ಸ್ ಮಾಡುವ ಶಾಲೆಗೆ 1 ಲಕ್ಷ ರೂ.
ಬೆಂಗಳೂರು: ರೀಲ್ಸ್ ಪ್ರಿಯರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಆರೋಗ್ಯ ಇಲಾಖೆ ಭರ್ಜರಿ ಆಫರ್ ಕೊಟ್ಟಿದೆ. ಡೆಂಗ್ಯೂ (Degue) ಕುರಿತು ಜಾಗೃತಿ ಮೂಡಿಸುವ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಎಂದು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.
Advertisement
ರಾಜ್ಯಾದ್ಯಂತ ಹಾಗೂ ಬೆಂಗಳೂರಲ್ಲಿ (Bengaluru) ಡೆಂಗ್ಯೂ ಸೋಂಕು ಮತ್ತು ಸಾವು ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಬಿಬಿಎಂಪಿ ಆರೋಗ್ಯ ಇಲಾಖೆ ಹೊಸ ಪ್ರಯತ್ನ ಮಾಡಿದೆ. ರೀಲ್ಸ್ ಮೂಲಕ ಡೆಂಗ್ಯೂ ವಾರಿಯರ್ ಆಗಲು ಬಿಬಿಎಂಪಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದೆ. ಇದನ್ನೂ ಓದಿ: ಡೆಂಗ್ಯೂ ಜ್ವರದಿಂದ MBBS ವಿದ್ಯಾರ್ಥಿ ಸಾವು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ!
Advertisement
Advertisement
ಸೋಷಿಯಲ್ ಮೀಡಿಯಾದಲ್ಲಿ ಡೆಂಗ್ಯೂ ಕುರಿತು ರೀಲ್ಸ್ ವೀಡಿಯೋಗಳನ್ನು ಬಿಬಿಎಂಪಿ ಆಹ್ವಾನಿಸಿದೆ. ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿದವರಿಗೆ ಬಹುಮಾನ ನೀಡಲಾಗುವುದು. ಮೊದಲ ಐದು ಉತ್ತಮ ರೀಲ್ಸ್‌ಗೆ 25,000 ರೂ. ಬಹುಮಾನ ನೀಡಲಾಗುವುದು. ದ್ವಿತೀಯ ಬಹುಮಾನಕ್ಕೆ ಆಯ್ಕೆಯಾಗುವ ಐವರಿಗೆ ತಲಾ 10 ಸಾವಿರ ರೂ. ಬಹುಮಾನ ನೀಡುವುದಾಗಿ ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.
Advertisement
ಶಾಲಾ ಮಕ್ಕಳಿಗೆ ಬಂಪರ್ ಆಫರ್
ಉತ್ತಮ ರೀತಿಯಲ್ಲಿ ಹೆಚ್ಚು ವಿದ್ಯಾರ್ಥಿಗಳ ಮೂಲಕ ರೀಲ್ಸ್ ಮಾಡಿಸುವ ಶಾಲೆಗೆ ಬರೋಬ್ಬರಿ 1 ಲಕ್ಷ ಬಹುಮಾನ ನೀಡುವುದಾಗಿ ಬಿಬಿಎಂಪಿ ತಿಳಿಸಿದೆ. ಅಲ್ಲದೇ ಮಕ್ಕಳಿಗೆ ಜಾಗೃತಿ ಮೂಡಿಸುವ ವೀಡಿಯೋ ಮಾಡಲು ಉತ್ತೇಜಿಸುವ ಶಿಕಕ್ಷಕರಿಗೂ 35 ಸಾವಿರ ಬಹುಮಾನ ನೀಡುವುದಾಗಿ ತಿಳಿಸಿದೆ. ಇದನ್ನೂ ಓದಿ: ರಾಮನಗರದಲ್ಲಿ ಡೆಂಗ್ಯೂಗೆ 19 ವರ್ಷದ ಯುವತಿ ಬಲಿ
ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿ ಅದನ್ನು ಬಿಬಿಎಂಪಿ ಆರೋಗ್ಯ ಇಲಾಖೆಗೆ ಫೇಸ್‌ಬುಕ್ ಮತ್ತು ಎಕ್ಸ್ (ಟ್ವಿಟ್ಟರ್) ಖಾತೆಗೆ ಟ್ಯಾಗ್ ಮಾಡಬೇಕು. ಡೆಂಗ್ಯೂ ಬಗ್ಗೆ ಹೆಚ್ಚಿನ ಮಾಹಿತಿಯೊಂದಿಗೆ ಹೆಚ್ಚು ವೀಕ್ಷಣೆ ಪಡೆಯುವ ರೀಲ್ಸ್ಗೆ ತಕ್ಕಂತೆ ಬಹುಮಾನ ನೀಡಲಾಗುವುದು ಎಂದು ತಿಳಿಸಿದೆ. ರೀಲ್ಸ್ ಹಂಚಿಕೊಳ್ಳುವ ಪ್ರತಿಯೊಬ್ಬರಿಗೂ ಡೆಂಗ್ಯೂ ವಾರಿಯರ್ ಎಂಬ ಪಟ್ಟವನ್ನು ಪಾಲಿಕೆ ಆರೋಗ್ಯ ವಿಭಾಗ ನೀಡಲಿದೆ.
ಸಿಲಿಕಾನ್ ಸಿಟಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಷಿಯಲ್ ಮೀಡಿಯಾ ಬಳಸಿಕೊಂಡು ಜಾಗೃತಿ ಮೂಡಿಸಲು ಬಿಬಿಎಂಪಿ ಮುಂದಾಗಿದೆ. ಅದಕ್ಕಾಗಿ ವಿಭಿನ್ನ ಕಾರ್ಯಕ್ರಮಕ್ಕೆ ಉತ್ತೇಜನ ನೀಡಿದೆ. ಇದನ್ನೂ ಓದಿ: ಡೆಂಗ್ಯೂ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟ – ಬಿಪಿಎಲ್ ಕಾರ್ಡ್‌ದಾರರಿಗೆ ಸೊಳ್ಳೆ ನಿರೋಧಕ, ಬೇವಿನ ಎಣ್ಣೆ ವಿತರಿಸಲು ಸೂಚನೆ!