ಬೆಂಗಳೂರು: ನವೆಂಬರ್ 1 ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವವನ್ನು (Kannada Rajyotsava) ವಿಶೇಷ ರೀತಿಯಲ್ಲಿ ಮನೆಯಲ್ಲಿ ಆಚರಿಸುವಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಕರೆ ನೀಡಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ ಆಯುಕ್ತರು, ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿ ಎಂದು ಜನತೆಗೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: KSRTC ನೌಕರರ ಕುಟುಂಬ ಕಲ್ಯಾಣ ಯೋಜನೆ ಪರಿಹಾರ ಮೊತ್ತ 3 ರಿಂದ 10 ಲಕ್ಷಕ್ಕೆ ಹೆಚ್ಚಳ
Advertisement
Advertisement
ಬಿಬಿಎಂಪಿ ಸಲಹೆ ಏನು?
* ಬಿಬಿಎಂಪಿ ವ್ಯಾಪ್ತಿಯಲ್ಲಿ ನವೆಂಬರ್ 01 ರಂದು ಆಚರಿಸುವ ರಾಜ್ಯೋತ್ಸವ ಕಾರ್ಯಕ್ರಮ ವೇಳಾಪಟ್ಟಿಯಲ್ಲಿರುವಂತೆ ಧ್ವಜಾರೋಹಣ ರಾಷ್ಟ್ರಗೀತೆ, ನಾಡಗೀತೆ, ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಯಾದ ನಂತರ ಐದು ಕನ್ನಡ ಗೀತೆಗಳನ್ನು ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸುವುದು.
Advertisement
* ನವೆಂಬರ್ 1 ರಂದು ಬೆಂಗಳೂರು ನಗರದ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-50 “ಹೆಸರಾಯಿತು. ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ಘೋಷ ವಾಕ್ಯವನ್ನು ಬರೆಯುವಂತೆ ನಾಗರಿಕರಲ್ಲಿ ಮನವಿ ಮಾಡುವುದು. ಇದನ್ನೂ ಓದಿ: ಹೀಗೆ ಆದ್ರೆ ಮುಂದೆ ಕುಡಿಯೋಕು ಸಹ ನೀರು ಇರಲ್ಲ: ಕಾವೇರಿ ಹೋರಾಟದಲ್ಲಿ ಅಜ್ಜಿ ಕಣ್ಣೀರು
Advertisement
* ನವೆಂಬರ್ 1 ರ ಬೆಳಗ್ಗೆ 9 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ (ರೇಡಿಯೋ) ನಾಡಗೀತೆಯನ್ನು ಪ್ರಸಾರ ಮಾಡಲಾಗುವುದು. ಆ ಸಮಯದಲ್ಲಿ ಕನ್ನಡ ನಾಡಿನ ಸಮಸ್ತ ನಾಗರಿಕರು ಎದ್ದು ನಿಂತು ರಾಷ್ಟ್ರಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡಗೀತೆಗೂ ಗೌರವ ಸಲ್ಲಿಸಲು ಮನವಿ ಮಾಡುವುದು.
ನವೆಂಬರ್ 1ರ ಸಂಜೆ 50 ಗಂಟೆಗೆ ಬೆಂಗಳೂರು ನಗರದ ಎಲ್ಲಾ ಮೈದಾನಗಳಲ್ಲಿ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವ ಆಚರಿಸಲು ಮನವಿ ಮಾಡುವುದು. ಇದನ್ನೂ ಓದಿ: ಮುಂದಿನ 15 ದಿನ ನಿತ್ಯ ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಬಿಡಿ – ಕರ್ನಾಟಕಕ್ಕೆ CWRC ನಿರ್ದೇಶನ
* ನವೆಂಬರ್ 1ರ ಸಂಜೆ 7 ಗಂಟೆಗೆ ಬೆಂಗಳೂರು ನಗರದ ಎಲ್ಲಾ ಮನೆಗಳ ಮುಂದೆ, ಕಚೇರಿಗಳ ಮುಂದೆ ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ (ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಿಸಬೇಕು ಎಂದು ಸಲಹೆ ನೀಡಿದ್ದಾರೆ.
Web Stories