ಬೆಂಗಳೂರು: ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಇಬ್ಬರಲ್ಲಿ ದೃಢಪಟ್ಟಿದ್ದು, ಒಬ್ಬರ ಸಂಪರ್ಕಿತರ ಟ್ರಾವೆಲ್ ಹಿಸ್ಟರಿ ಲಭ್ಯವಾಗಿಲ್ಲ. ಹೀಗಾಗಿ ಹಲವರಲ್ಲಿ ರೂಪಾಂತರಿ ಇರುವ ಸಾಧ್ಯತೆ ಇದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಎರಡು ಪ್ರಕರಣ ದೃಢಪಟ್ಟಿರುವ ಬಗ್ಗೆ ಭಾರತ ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಓಮಿಕ್ರಾನ್ ದೃಢಪಟ್ಟ 66 ವಯಸ್ಸಿನ ಒಬ್ಬ ವ್ಯಕ್ತಿ ನ.20ಕ್ಕೆ ಬೆಂಗಳೂರಿಗೆ ಬಂದಿದ್ದರು. ಪರೀಕ್ಷೆ ವೇಳೆ ಅವರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಅವರ ಸ್ವಾಬ್ ಅನ್ನು ಜಿನೋಟಿಕ್ ಲ್ಯಾಬ್‌ಗೆ ಕಳಿಸಲಾಗಿತ್ತು. ಒಮಿಕ್ರಾನ್ ಎಂದು ದೃಢಪಟ್ಟಿದೆ. ಅವರನ್ನು ಹೋಟೆಲ್‌ನಲ್ಲಿ ಕ್ವಾರಂಟೈನ್‌ಲ್ಲಿರಿಸಲಾಗಿತ್ತು. ಮೊದಲ ವ್ಯಕ್ತಿಯ ಪ್ರಾಥಮಿಕ ಮತ್ತು ದ್ವೀತಿಯ ಸಂಪರ್ಕದಲ್ಲಿದ್ದವರ ಮೇಲೆ ನಿಗಾವಹಿಸಲಾಗಿದೆ. ಎಲ್ಲರ ವರದಿಯೂ ನಗೆಟಿವ್ ಬಂದಿದೆ ಎಂದು ತಿಳಿಸಿದರು. ಇದನ್ನೂ ಓದಿ: ಓಮಿಕ್ರಾನ್ ಸೋಂಕಿತರ ಸಂಪರ್ಕದಲ್ಲಿದ್ದ ನಾಲ್ವರಿಗೆ ಕೊರೊನಾ ಪಾಸಿಟಿವ್: ಸುಧಾಕರ್
Advertisement
Advertisement
ಎರಡನೇ ವ್ಯಕ್ತಿ 46 ವಯಸ್ಸಿನವರಾಗಿದ್ದು, ನ.24 ರಂದು ಬೆಂಗಳೂರಿಗೆ ಆಗಮಿಸಿದ್ದರು. ಮೊದಲು ಹೋಂ ಐಸೋಲೇಷನ್ ಮಾಡಲಾಗಿತ್ತು. ಅ ನಂತರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿ 12 ಹಾಗೂ ದ್ವಿತೀಯ ಸಂಪರ್ಕದಲ್ಲಿ 205 ಮಂದಿ ಇದ್ದಾರೆ ಎಂದು ಗುರುತಿಸಲಾಗಿದೆ. ಅದರಲ್ಲಿ 5 ಜನರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಈಗ 5 ಜನರ ಸ್ವಾಬ್ ಅನ್ನು ಜಿನೋಟಿಕ್ ಲ್ಯಾಬ್‌ಗೆ ಕಳಿಸಲಾಗಿದೆ. ಆದರೆ ಈ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಇಲ್ಲ. ಅತನಿಗೆ ಸ್ಥಳೀಯವಾಗಿ ಪ್ರಾಥಮಿಕ ಸಂಪರ್ಕದಲ್ಲಿದ್ದ ಮೂವರು ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ ಇಬ್ಬರಿಗೆ ಪಾಸಿಟಿವ್ ಬಂದಿದೆ. ಓಮಿಕ್ರಾನ್ ದೃಢಪಟ್ಟಿರುವ ಎರಡನೇ ವ್ಯಕ್ತಿ ಆಸ್ಪತ್ರೆಯಲ್ಲಿದ್ದು, ಆರೋಗ್ಯವಾಗಿದ್ದಾರೆ ಎಂದು ಮಾಹಿತಿ ನೀಡಿದರು.
Advertisement
ಎರಡನೆಯ ವ್ಯಕ್ತಿ ಟ್ರಾವಲ್ ಹಿಸ್ಟರಿ ಇಲ್ಲ. ಹೀಗಾಗಿ ಇನ್ನೂ ಹೆಚ್ಚಿನ ಜನರಿಗೆ ಈ ರೂಪಾಂತರಿ ಇರುವ ಸಾಧ್ಯತೆ ಇದೆ. ಜನ ಎಚ್ಚರಿಕೆಯಿಂದ ಇರಬೇಕು. ಮಾಸ್ಕ್ ಹಾಕಿಕೊಳ್ಳದೇ ಹೊರಗಡೆ ಬರಬೇಡಿ. ಮುಂಜಾಗ್ರತೆ ಕ್ರಮಗಳನ್ನು ಪಾಲಿಸಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ರಾಜ್ಯದಲ್ಲಿ ಪತ್ತೆಯಾದ ಓಮಿಕ್ರಾನ್ ಸೋಂಕಿತರನ್ನು ಐಸೋಲೇಟ್ ಮಾಡಲಾಗಿದೆ: ಅಶ್ವಥ್ ನಾರಾಯಣ್
Advertisement
ಬೌರಿಂಗ್ ಆಸ್ಪತ್ರೆಯಲ್ಲಿ ಒಮಿಕ್ರಾನ್ ರೂಪಾಂತರಿ ವೈರಸ್ ಸೋಂಕಿತರಿಗೆ ಬೆಡ್ ಮೀಸಲಿಡಲಾಗಿದೆ. ಓಮಿಕ್ರಾನ್ ಸೋಂಕಿತರು ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದುಕೊಂಡಿದ್ದಾರೆ. ಅವರ ಸಂಪರ್ಕದಲ್ಲಿದ್ದು, ಕೋವಿಡ್ ಪಾಸಿಟಿವ್ ಬಂದವರ ಸ್ವಾಬ್ ಅನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ತಿಳಿಸಿದರು.