ಬೆಂಗಳೂರು: ಪೈಥಾನ್ ಯಂತ್ರ ಬಳಸಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರದಲ್ಲಿ ಕಾಮಗಾರಿ ನಡೆಸಲು ಅಮೆರಿಕನ್ ರೋಡ್ ಟೆಕ್ನಾಲಜಿ ಸಲ್ಯೂಷನ್ಸ್ ಸಂಸ್ಥೆ ಜತೆ ಒಪ್ಪಂದ ಮಾಡಿಕೊಳ್ಳದ ಹಿನ್ನೆಲೆಯಲ್ಲಿ ಬಿಬಿಎಂಪಿಗೆ ಹೈಕೋರ್ಟ್ ಚಾಟಿ ಬೀಸಿದೆ.
ಕಾಮಗಾರಿ ನಡೆಸಲು ಅಮೆರಿಕನ್ ರೋಡ್ ಟೆಕ್ನಾಲಜಿ ಸಲ್ಯೂಷನ್ಸ್ ಸಂಸ್ಥೆ ಜತೆ ಒಪ್ಪಂದ ಮಾಡಿಕೊಳ್ಳದೇ ಈವರೆಗೂ ಕಾರ್ಯಾದೇಶ ಹೊರಡಿಸದ ಬಿಬಿಎಂಪಿಯನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆದುಕೊಂಡಿದೆ. ಇದನ್ನೂ ಓದಿ: ಬರ್ತ್‍ಡೇ ಪಾರ್ಟಿ ಹಣಕ್ಕೆ ಕಿತ್ತಾಟ – 3ನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿಗಳು, ಓರ್ವ ಸಾವು
Advertisement
Advertisement
ಸಾಕಷ್ಟು ಸಮಯಾವಕಾಶ ನೀಡಿದ್ದರೂ ಯಾವುದೇ ಕೆಲಸವಾಗಿಲ್ಲ. ಎಲ್ಲದಕ್ಕೂ ಮಿತಿ ಇರುತ್ತದೆ. ಇನ್ನು ಸಹಿಸಲು ಸಾಧ್ಯವಿಲ್ಲ. ರಸ್ತೆ ನಿರ್ವಹಣೆಯ ಕೆಲಸವನ್ನು ಮಿಲಿಟರಿ ಏಜೆನ್ಸಿ ಅಥವಾ ಬೇರೆ ಯಾವುದಾದರೂ ಸಂಸ್ಥೆಗೆ ವಹಿಸುತ್ತೇವೆ. ಇದರೊಂದಿಗೆ ಪಾಲಿಕೆ ಮುಖ್ಯ ಆಯುಕ್ತರು, ಅಧಿಕಾರಿಗಳ ಅಮಾನತಿಗೆ ಸರ್ಕಾರಕ್ಕೆ ಆದೇಶಿಸುತ್ತೇವೆ ಎಂದು ಮುಖ್ಯ ಕೋರ್ಟ್ ಬಿಸಿ ಮುಟ್ಟಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಈಗ ಎಲ್ಲರೂ ಸಿಎಂ ಅಭ್ಯರ್ಥಿಗಳೆ: ಬಿಜೆಪಿ ವ್ಯಂಗ್ಯ
Advertisement
Advertisement
ಅಂತಿಮವಾಗಿ ಒಂದು ದಿನ ಕಾಲಾವಕಾಶ ನೀಡುತ್ತೇವೆ. ಅಷ್ಟರೊಳಗೆ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡು, ಕಾರ್ಯಾದೇಶ ಹೊರಡಿಸಿ ಕೋರ್ಟ್‌ಗೆ ದಾಖಲೆಗಳನ್ನು ಸಲ್ಲಿಸಬೇಕು. ಇಲ್ಲವಾದರೆ ಬಿಬಿಎಂಪಿ ವಿರುದ್ಧ ಕಠಿಣ ಆದೇಶ ಹೊರಡಿಸಲು ನ್ಯಾಯಾಲಯ ಹಿಂಜರಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದೆ. ಮುಂದಿನ ವಿಚಾರಣೆಯನ್ನು ಜೂನ್ 30ಕ್ಕೆ ಮುಂದೂಡಲಾಗಿದೆ.