ನವದೆಹಲಿ: ಬಿಬಿಎಂಪಿಗೆ ಚುನಾವಣೆ ನಡೆಸುವ ವಿಚಾರವಾಗಿ ಇಂದು ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಕೊನೆಗೂ ಬಿಬಿಎಂಪಿ ಚುನಾವಣೆ ಫಿಕ್ಸ್ ಆಗಿದೆ. 9 ವಾರಗಳ ಬಳಿಕ ಚುನಾವಣೆ ನಡೆಸಲು ಸೂಚಿಸಲಾಗಿದೆ.
ನ್ಯಾ. ಕಾನ್ವಿಲ್ಕರ್ ನೇತೃತ್ವದ ದ್ವಿ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ವಾರ್ಡ್‌ಗಳ ಪುನರ್ ವಿಂಗಡಣೆ ಮತ್ತು ಓಬಿಸಿ ಸೀಟುಗಳ ನಿರ್ಣಯಕ್ಕೆ ಎಂಟು ವಾರಗಳ ಸಮಯ ಬೇಕು ಎಂದು ಸುಪ್ರೀಂ ಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿತು. ಸರ್ಕಾರದ ವಾದ ಪುರಸ್ಕರಿಸಿದ ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರದ ತಯಾರಿಯ ಒಂದು ವಾರದ ಬಳಿಕ ಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. ಇದನ್ನೂ ಓದಿ: ನಿನ್ನೆ ರಾತ್ರಿ ರಹಸ್ಯ ಸಭೆ- ಇಂದು ದಿಢೀರ್ ದೆಹಲಿಗೆ ಹೊರಟ ಸಿಎಂ
Advertisement
Advertisement
ಶೀಘ್ರದಲ್ಲೇ ಚುನಾವಣೆ ನಡೆಸಲು ಆಡಳಿತ ಪಕ್ಷದ ಮಾಜಿ ನಾಯಕರಾದ ಎಮ್.ಶಿವರಾಜು ಸಲ್ಲಿಸಿದ್ದರು. ಈ ಸಂಬಂಧ ಇಂದು ಸುಪ್ರೀಂ ಕೋರ್ಟ್‌ನಲ್ಲಿ ಇಂದು ಅರ್ಜಿ ವಿಚಾರಣೆ ನಡೆಯಿತು.
Advertisement
ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಈ ಹಿಂದೆ ಗ್ರೀನ್ ಸಿಗ್ನಲ್ ನೀಡಿತ್ತು. ಮಧ್ಯಪ್ರದೇಶದ ಪ್ರಕರಣದಲ್ಲಿ ಚುನಾವಣೆ ಮುಂದೂಡದಂತೆ ಸೂಚನೆ ನೀಡಿತ್ತು. ದೇಶದ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸುಪ್ರೀಂ ಸೂಚಿಸಿತ್ತು. ಎರಡು ವಾರದಲ್ಲಿ ಅಧಿಸೂಚನೆ ಹೊರಡಿಸಿ, ಚುನಾವಣೆ ನಡೆಸುವಂತೆ ಆದೇಶಿಸಿತು. ಮಧ್ಯಪ್ರದೇಶ ಸರ್ಕಾರ ಸುಪ್ರೀಂಗೆ ಆದೇಶ ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು. ಆದರೆ ಸುಪ್ರೀಂ ಮೇ 18ರಂದು ವಿಚಾರಣೆ ವೇಳೆ ಹಳೆ ಆದೇಶ ಎತ್ತಿ ಹಿಡಿದಿತ್ತು. ಇದನ್ನೂ ಓದಿ: ಬಿಪಿಎಲ್ ಇರಲಿ ಯಾವುದೇ ಕಾರ್ಡ್ ಇದ್ರೂ ಸರ್ಕಾರ ಪರಿಹಾರ ಕೊಡ್ಬೇಕು: ಸಿದ್ದರಾಮಯ್ಯ