ನವದೆಹಲಿ/ ಬೆಂಗಳೂರು: ಮಧ್ಯಪ್ರದೇಶ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಿಂದ ಶೀಘ್ರವೇ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆಯಿದೆ.
ಮಧ್ಯಪ್ರದೇಶದಲ್ಲಿ ನಾನಾ ಕಾರಣಗಳಿಂದಾಗಿ ಕಳೆದ 2 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿರಲಿಲ್ಲ. ಈ ಬಗ್ಗೆ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ ಕೋರ್ಟ್ ಮಧ್ಯಪ್ರದೇಶದ 23 ಸಾವಿರ ಸ್ಥಳೀಯ ಸಂಸ್ಥೆಗಳಿಗೆ ಶೀಘ್ರವೇ ಚುನಾವಣೆ ನಡೆಸಬೇಕು ಎಂದು ಮಹತ್ವದ ತೀರ್ಪು ನೀಡಿದೆ.
Advertisement
ಈ ತೀರ್ಪು ಬೇರೆ ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಬಾಕಿ ಉಳಿದಿರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಅನ್ವಯ ಎಂದು ತನ್ನ ಆದೇಶದಲ್ಲಿ ತಿಳಿಸಿದ ಹಿನ್ನೆಲೆಯಲ್ಲಿ ಶೀಘ್ರವೇ ಬಿಬಿಎಂಪಿಯ 198 ವಾರ್ಡ್‌ಗಳಿಗೆ ಚುನಾವಣೆ ನಡೆಯುವ ಸಾಧ್ಯತೆಯಿದೆ. ಇದನ್ನೂ ಓದಿ: ಟೀಚರ್ಸ್ ಎಕ್ಸಾಂಗೆ ಟಫ್ ರೂಲ್ಸ್ ಜಾರಿ – ಯಾವುದಕ್ಕೆ ನಿಷೇಧ?
Advertisement
Advertisement
ಈಗಾಗಲೇ ಬಿಬಿಎಪಿ ಚುನಾವಣೆ ಸಂಬಂಧ ಸಲ್ಲಿಕೆಯಾಗಿದ್ದ ಪ್ರತ್ಯೇಕ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಲೇವಾರಿ ಆಗಬೇಕಿದೆ. ಬಿಬಿಎಂಪಿ 198 ವಾರ್ಡ್‌ಗಳನ್ನು ಪುನರ್ ವಿಂಗಡಿಸಿ 243 ವಾರ್ಡ್‌ಗಳಾಗಿ ಮಾಡಲು ಸರ್ಕಾರ ಮುಂದಾಗಿತ್ತು. ಆ ನೆಪದಲ್ಲಿ ಚುನಾವಣೆ ಕಾಲಮಿತಿಯಲ್ಲಿ ನಡೆಸಲು ಸಾಧ್ಯವಾಗಿರಲಿಲ್ಲ. ಇದನ್ನು ಪ್ರಶ್ನಿಸಿ ಮಾಜಿ ಪಾಲಿಕೆ ಸದಸ್ಯರು ಸುಪ್ರೀಂ ಮೆಟ್ಟಿಲು ಏರಿದ್ದರು.
Advertisement
ಇಂದಿನ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಕಂದಾಯ ಸಚಿವ ಅಶೋಕ್, ಸ್ಥಳೀಯ ಚುನಾವಣೆ ಸಂಬಂಧ ಸುಪ್ರೀಂ ಕೋರ್ಟ್ ಆದೇಶ ಕರ್ನಾಟಕ ಮಟ್ಟಿಗೆ ಮಹತ್ವದ ಬೆಳವಣಿಗೆ. ಕೇಸ್‌ನಲ್ಲಿ ಮೂರು ಪೀಠದ ನ್ಯಾಯಾಧೀಶರು ಮಹತ್ವದ ತೀರ್ಪು ನೀಡಿದ್ದಾರೆ. ಬಿಬಿಎಂಪಿ ಚುನಾವಣೆ ಸಂಬಂಧ ಪ್ರತ್ಯೇಕ ಕೇಸ್ ಇದ್ದು ಪಟ್ಟಿ ಆಗಲು ಮೂರು ತಿಂಗಳು ಇತ್ತು. ಮಧ್ಯಪ್ರದೇಶಕ್ಕೆ ನೀಡಿದ ಆದೇಶವಾದರೂ ಎಲ್ಲಾ ರಾಜ್ಯಕ್ಕೂ ಅನ್ವಯ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ: MBP ನನ್ನ ಸ್ನೇಹಿತರು, ಬೇಕೆಂದಾಗ ಭೇಟಿ ಮಾಡ್ತೀನಿ: ಡಿಕೆಶಿಗೆ ಅಶ್ವಥ್ ನಾರಾಯಣ ತಿರುಗೇಟು
ಎಲ್ಲಾ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಮಾಡಬೇಕು ಅಂತ ಹೇಳಿದೆ. ಕಳೆದ ಬಾರಿ ನಡೆದ ಚುನಾವಣೆ ಪ್ರಕಾರವೇ ನಡೆಸಲು ಸೂಚಿಸಿದೆ. ಬಿಬಿಎಂಪಿಯ 198 ವಾರ್ಡ್‌ಗಳಿಗೆ ಮೀಸಲಾತಿ ಪ್ರಕಾರ ಚುನಾವಣೆ ನಡೆಯಲಿದೆ. ಈ ಬಗ್ಗೆ ಸಿಎಂ ಜೊತೆ ಮಾತಾಡುತ್ತೇವೆ. ಕರ್ನಾಟಕ ಸರ್ಕಾರ ಚುನಾವಣೆ ಮಾಡಲು ತಯಾರಿದೆ ಎಂದು ಹೇಳಿದರು.
ಚುನಾವಣೆ ಯಾವಾಗ ಬಂದರೂ ಬಿಜೆಪಿ ಕೂಡ ತಯಾರಿದೆ. ಬಿಜೆಪಿ ಬೂತ್ ಮಟ್ಟದ ಕಾರ್ಯಕ್ರಮ, ಸಮಾವೇಶ ಮುಗಿದಿದೆ. ಅಭ್ಯರ್ಥಿಗಳ ಆಯ್ಕೆ ಮಾತ್ರ ಬಾಕಿ ಇದೆ ಎಂದು ತಿಳಿಸಿದರು.