ಬೆಂಗಳೂರು: ಬಿಬಿಎಂಪಿ (BBMP) ಮುಖ್ಯ ಕಚೇರಿಯ ಆವರಣದ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೊತ್ತಿ ಉರಿದ ಬೆಂಕಿಯಿಂದಾಗಿ 9 ಮಂದಿ ಬಿಬಿಎಂಪಿ ನೌಕರರಿಗೆ ತೀವ್ರ ಗಾಯಗಳಾಗಿವೆ.
ಮುಖ್ಯ ಅಭಿಯಂತರರು ಶಿವಕುಮಾರ್, ಕಾರ್ಯಪಾಲಕ ಅಭಿಯಂತರರಾದ ಕಿರಣ್, ಸಂತೋಷ್ ಕುಮಾರ್, ವಿಜಯಮಾಲ, ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ರೀಧರ್, ಪ್ರಥಮ ದರ್ಜೆ ಸಹಾಯಕ ಸಿರಾಜ್, ಆಪರೇಟರ್ ಜ್ಯೋತಿ, ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ಶ್ರಿನಿವಾಸ್, ಗಣಕಯಂತ್ರ ನಿರ್ವಾಹಕ ಮನೋಜ್ ಗಾಯಗೊಂಡವರು. ಎಲ್ಲರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Advertisement
Advertisement
ಬಿಬಿಎಂಪಿಯ ಗುಣನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಇಬ್ಬರು ಮಹಿಳೆಯರು ಹಾಗೂ ಏಳು ಮಂದಿ ಪುರುಷರಿಗೆ ಸುಟ್ಟು ಗಾಯಗಳಾಗಿವೆ. ಘಟನೆ ನಡೆದು ಅರ್ಧ ಗಂಟೆ ಆದರೂ ಯಾವುದೇ ಅಗ್ನಿಶಾಮಕ ದಳ ಧಾವಿಸಿರಲಿಲ್ಲ. ಈ ವೇಳೆ ಸ್ಥಳಕ್ಕೆ ಬಿಬಿಎಂಪಿ ಕಮಿಷನರ್ ಭೇಟಿದರು. ನಂತರ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
Advertisement
Advertisement
ಗುಣನಿಯಂತ್ರಣ ವಿಭಾಗದಲ್ಲಿ ಇರುವ ದಾಖಲೆಗಳನ್ನು ಬಿಬಿಎಂಪಿ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ. ಚೀಫ್ ಇಂಜಿನಿಯರ್ ಶಿವಕುಮಾರ್ ಅವರಿಗೂ ಕೂಡ ಗಾಯಗಳಾಗಿವೆ. ಗ್ರೌಂಡ್ ಫ್ಲೋರ್‌ನ ಲ್ಯಾಬ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಡಾಂಬರ್ ಸ್ಯಾಂಪಲ್ ಬ್ಲಾಸ್ಟ್ ಆಗಿ ಏಕಾಏಕಿ ಬೆಂಕಿ ಬಿದ್ದಿದೆ. ಲ್ಯಾಬ್‌ನಲ್ಲಿ ಡಾಂಬರ್ ಸ್ಯಾಂಪಲ್ ಟೆಸ್ಟ್‌ಗೆ ಒಳಪಡಿಸಲಾಗುತ್ತಿತ್ತು. ಈ ವೇಳೆ ಏಕಾಏಕಿ ಡಾಂಬರ್ ಬ್ಲಾಸ್ಟ್ ಆಗಿದೆ. ಸ್ಥಳಕ್ಕೆ ಡಿಸಿಪಿ ಶ್ರೀನಿವಾಸ್‌ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ಮಾತನಾಡಿ, ಬೆಂಜಿನ್ ಕೆಮಿಕಲ್ ಟೆಸ್ಟ್ ಮಾಡುವ ವೇಳೆ ಬ್ಲಾಸ್ಟ್ ಆಗಿದೆ. ಕ್ವಾಲಿಟಿ ಕಂಟ್ರೋಲ್ ಲ್ಯಾಬ್ ಒಳಗೆ ಟೆಸ್ಟ್ ಮಾಡುತ್ತಿದ್ದರು. ಒಂದು ಓವನ್ ಬ್ಲಾಸ್ಟ್ ಆಗಿದೆ. ತನಿಖೆ ಬಳಿಕ ಎಲ್ಲಾ ಗೊತ್ತಾಗಲಿದೆ. ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ತಿಳಿಸಿದರು.
Web Stories