ಬೆಂಗಳೂರು: ಬಿಬಿಎಂಪಿ ತ್ಯಾಜ್ಯ ವಿಲೇವಾರಿ ವಾಹನ (BBMP Garbage Truck )ಹಾಗೂ ದ್ಬಿಚಕ್ರ ವಾಹನದ ನಡುವೆ ಡಿಕ್ಕಿ (Road Accident) ಸಂಭವಿಸಿ, ವಾಹನ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್ ಸರ್ಕಲ್ ಬಳಿ ನಡೆದಿದೆ. ಭಾನುವಾರ (ಜು.28) ರಾತ್ರಿ 8.45 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.
ಮೃತರನ್ನ ಪ್ರಶಾಂತ್ (25), ಬಯ್ಯಣ್ಣಗಿರಿ ಶಿಲ್ಪ ಎಂದು ಗುರುತಿಸಲಾಗಿದೆ. ಬೆಂಗಳೂರಿನ ನಿವಾಸಿಯೇ ಆಗಿರುವ ಪ್ರಶಾಂತ್, ಶಿಲ್ಪಾ ಇಬ್ಬರೂ ಸ್ನೇಹಿತರಾಗಿದ್ದು, ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
- Advertisement
ಇಬ್ಬರೂ ಮೆಜೆಸ್ಟಿಕ್‌ನಿಂದ ಕೆ.ಆರ್ ಸರ್ಕಲ್ ಮಾರ್ಗವಾಗಿ ಬೈಕ್‌ನಲ್ಲಿ ಬರುತ್ತಿದ್ದರು. ಇದೇ ವೇಳೆ ಸಿಐಡಿ ಸಿಗ್ನಲ್ ಮಾರ್ಗದಿಂದ ಕೆ.ಆರ್ ವೃತ್ತದ ಮಾರ್ಗವಾಗಿ ಬಿಬಿಎಂಪಿ ಕಸದ ಲಾರಿ ವೇಗವಾಗಿ ಬರುತ್ತಿತ್ತು. ತಿರುವಿನ ಮಾರ್ಗದಲ್ಲೂ ವೇಗವಾಗಿ ಬಂದ ಲಾರಿ ಬೈಕ್‌ಗೆ ಡಿಕ್ಕಿಯೊಡೆದು ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.
- Advertisement
ಅಲ್ಲದೇ ಬೈಕ್‌ಗೆ ಡಿಕ್ಕಿ ಹೊಡೆದರೂ ಲಾರಿ ನಿಲ್ಲಿಸದೇ ಸುಮಾರು 10 ಮೀಟರ್‌ನಷ್ಟು ದೂರಕ್ಕೆ ಬೈಕ್ ಸವಾರರನ್ನ ಎಳೆದೊಯ್ದಿದೆ. ಇದರಿಂದ ರಕ್ತ ಹೆಚ್ಚಿನ ಪ್ರಮಾಣದಲ್ಲಿ ಹರಿದಿದೆ. ಕೂಡಲೇ ಅಪಘಾತಕ್ಕೀಡಾದವರನ್ನ ಆಸ್ಪತ್ರೆಗೆ ಸಾಗಿಸಲು ಮುಂದಾದರೂ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾರೆ. ಸದ್ಯ ಮೃತದೇಹಗಳನ್ನ ಸೆಂಟ್ ಮಾರ್ಥಸ್ ಶವಗಾರಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ ಉಪ್ಪಾರಪೇಟೆ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.