Bengaluru CityCrimeDistrictsKarnatakaLatestMain Post

ಹೆಬ್ಬಾಳದಲ್ಲಿ ಸರಣಿ ಅಪಘಾತ – ಬಿಬಿಎಂಪಿ ಕಸದ ಲಾರಿಗೆ ಬಾಲಕಿ ಬಲಿ

Advertisements

– ಪೊಲೀಸರು ದೂರು ನೀಡಿದ್ದರೂ ಸ್ಪಂದಿಸದ ಬಿಬಿಎಂಪಿ
– ಹೆಬ್ಬಾಳ ಅಂಡರ್‍ಪಾಸ್‍ನಲ್ಲಿ ನೀರು

ಬೆಂಗಳೂರು:  ಶಾಲಾ ಬಾಲಕಿಯೊಬ್ಬಳು ಡಿವೈಡರ್ ದಾಟುತ್ತಿದ್ದ ವೇಳೆ ಬಿಬಿಎಂಪಿ ಕಸದ ಲಾರಿ ಬಂದು ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಹೆಬ್ಬಾಳದ ಫ್ಲೈ ಓವರ್ ಬಳಿ ನಡೆದಿದೆ.

ಸದಾಶಿವನಗರದ ಸ್ಟೇಲಾ ಮೇರಿಸ್ ಸ್ಕೂಲ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಕ್ಷಯ (15) ಸಾವನ್ನಪ್ಪಿದ್ದು, 8 ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ. ಹೆಬ್ಬಾಳ ಸಂಚಾರಿ  ಪೊಲೀಸರ ದೌಡಾಯಿಸಿ ಸ್ಥಳ ಪರಿಶೀಲನೆ ಮಾಡುತ್ತಿದ್ದಾರೆ.

ಆಗಿದ್ದು ಏನು?: ಅಂಡರ್ ಪಾಸ್‍ನಲ್ಲಿ ನೀರು ತುಂಬಿದ್ದ ಪರಿಣಾಮ ಪಾದಚಾರಿಗಳು ರಸ್ತೆ ಮೇಲೆ ಓಡಾಡುತ್ತಾ ರಸ್ತೆ ದಾಟುತ್ತಿದ್ದರು. ಮಧ್ಯಾಹ್ನ 12:30ರ ವೇಳೆಗೆ ಬಸ್ ಇಳಿದ ಬಾಲಕಿ ಅಂಡರ್ ಪಾಸ್‍ನಲ್ಲಿ ನೀರು ತುಂಬಿರುವುದನ್ನು ನೋಡಿ, ಡಿವೈಡರ್ ದಾಟಿ ರಸ್ತೆ ಕ್ರಾಸ್ ಮಾಡುತ್ತಿದ್ದಳು. ಐದು ಜನ ವಿದ್ಯಾರ್ಥಿಗಳು ಒಟ್ಟಿಗೆ ಡೈವಡರ್ ಜಂಪ್ ಮಾಡಿ ರಸ್ತೆ ದಾಟುತ್ತಿದ್ದರು. ಈ ವೇಳೆ ಕಾರು ಮತ್ತು ಬೈಕ್ ಸಡನ್ ಆಗಿ ಬ್ರೇಕ್ ಹಾಕಿದ್ದಾರೆ. ಆದರೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಬಿಬಿಎಂಪಿ ಕಸದ ಲಾರಿ, ಕಾರು, ಬೈಕ್‍ಗೆ ಡಿಕ್ಕಿಯಾಗಿ ಬಾಲಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ಸಾವನ್ನಪ್ಪಿದ್ದು, ಇತರೇ ಎಂಟು ಜನರಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: 133 ಪ್ರಯಾಣಿಕರಿದ್ದ ಚೀನಾ ವಿಮಾನ ಪತನ

ಅಂಡರ್ ಪಾಸ್‍ನಲ್ಲಿ ನೀರು ತುಂಬಿರೊ ಬಗ್ಗೆ ಪೊಲೀಸರು ಬೆಳಗ್ಗೆನೇ ಬಿಬಿಎಂಪಿಗೆ ಮಾಹಿತಿ ನೀಡಿದ್ದಾರೆ. ಆದರೆ ಇಲ್ಲಿವರೆಗೂ ಯಾವುದೇ ಸಿಬ್ಬಂದಿ ನೀರು ತೆಗೆಯುವ ಕೆಲಸ ಮಾಡಿಲ್ಲ. ಹೀಗಾಗಿ ಸಾರ್ವಜನಿಕರೆಲ್ಲಾ ಡಿವೈಡರ್ ಹತ್ತಿ ರಸ್ತೆ ದಾಟುತ್ತಿದ್ದರು. ಇದನ್ನೂ ಓದಿ: ಕಚ್ಚಾತೈಲ ಬೆಲೆ ಮತ್ತೆ ಶೇ.3 ಏರಿಕೆ; ಮಾರುಕಟ್ಟೆಯಿಂದ ಹೊರಬೀಳಲಿದೆಯಾ ರಷ್ಯಾ ತೈಲ

ಈ ಅಪಘಾತದಲ್ಲಿ ಬೈಕ್ ಸವಾರನಿಗೆ ಕಾಲು ಮುರಿದಿದೆ. ಬೇರೆ ಯಾರಿಗೂ ಗಾಯವಾಗಿಲ್ಲ. ಲಾರಿ ಡ್ರೈವರ್ ಸದ್ಯ ಪೊಲೀಸರ ವಶದಲ್ಲಿದ್ದು, ಆರ್‌ಟಿ ನಗರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಂಡರ್‍ಪಾಸ್‍ನಲ್ಲಿ ನಿಂತಿರುವ ನೀರನ್ನು ತೆಗೆಯುವಂತೆ ಪೊಲೀಸರು ಬಿಬಿಎಂಪಿಗೆ ಬೆಳಗ್ಗೆ ಕರೆ ಮಾಡಿ ತಿಳಿಸಿದ್ದಾರೆ. ರಸ್ತೆ ದಾಟುವ ವೇಳೆ ಸಮಸ್ಯೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಪದೇ ಪದೇ ಕರೆ ಮಾಡಿದರೂ ಬಿಬಿಎಂಪಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ ಈ ಅಪಘಾತ ನಡೆದ ಒಂದು ಗಂಟೆಯಲ್ಲಿ ನೀರನ್ನು ಖಾಲಿ ಮಾಡಿ ಜನರ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

 

Leave a Reply

Your email address will not be published.

Back to top button