ಬೆಂಗಳೂರು: ಬಿಬಿಎಂಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತವನ್ನು ಮಾಡಲಾಗಿದೆ.
ಬಸವನಗುಡಿಯ ಎನ್‍ಆರ್ ಕಾಲೋನಿಯ ಪಾಲಿಕೆ ಹೆರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 60 ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಇದನ್ನೂ ಓದಿ: ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ – ಶನಿವಾರ, ಭಾನುವಾರ ಕಂಪ್ಲೀಟ್ ಬಂದ್
ಕಟ್ಟೆ ಸತ್ಯ ಫೌಂಡೇಷನ್ ಮತ್ತು ರಾಧಕೃಷ್ಣ ಆಸ್ಪತ್ರೆ ಸಹಯೋಗದೊಂದಿಗೆ ಡಾ.ಸಿ ಅಶ್ವಥ್ ಕಲಾ ಭವನನಲ್ಲಿನಡೆದ ಕಾರ್ಯಕ್ರಮವನ್ನ ನಟಿ ಸುಧಾರಣಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ನಟಿ ಸುಧಾರಾಣಿ, ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಸಂತೋಷವಾಗುತ್ತಿದೆ. ಎಷ್ಟೋ ಹೆಣ್ಣು ಮಕ್ಕಳಿಗೆ ಸೀಮಂತದ ಕ್ಷಣಗಳನ್ನ ಆನಂದಿಸೋಕೆ ಸಾಧ್ಯವಾಗುವುದಿಲ್ಲ. ಇಂತಹ ಕಾರ್ಯಕ್ರಮಗಳ ಮೂಲಕ ಸಾಧ್ಯವಾಗದ ಗರ್ಭಿಣಿಯರಿಗೆ ಸೀಮಂತ ಮಾಡುತ್ತಿರುವುದು ಬಹಳ ಸಂತೋಷ ಎಂದಿದ್ದಾರೆ. ಇದನ್ನೂ ಓದಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‍ಗೆ ಕೊರೊನಾ
ಹೆಣ್ಣು ಮಕ್ಕಳಿಗೆ ತಾಯ್ತನದ ಹಂತ ಬಹಳ ಶ್ರೇಷ್ಠವಾದದ್ದು. ಇಂತಹ ಸಂಧರ್ಭದಲ್ಲಿ ಸಂತೋಷದಿಂದ ಮತ್ತು ಎಚ್ಚರದಿಂದಿರಬೇಕು. ನಿಮ್ಮೆಲ್ಲರಿಗೂ ಒಳ್ಳೆಯದಾಗಲಿ, ನಿಮ್ಮ ತಾಯಿ ತನದ ದಿನಗಳನ್ನ ಆರೋಗ್ಯದಿಂದ ಆನಂದಿಸಿ ಎಂದು ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಮೇಯರ್ ಸತ್ಯನಾರಾಯಣ, ಶಾಸಕ ರವಿ ಸುಬ್ರಹ್ಮಣ್ಯ, ಫೌಂಡೇಶನ್ ಅಧ್ಯಕ್ಷ ಸುಧೀಂದ್ರ ಭಾಗಿಯಾಗಿದ್ದರು.