ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿಕೆಯ ನಂತರ ಬೆಂಗಳೂರಿನ ಯಾವುದಾರೂ ರಸ್ತೆಗೆ ಪುನೀತ್ ಹೆಸರು ಇಡಬೇಕು ಎಂಬ ಕೂಗು ಕೇಳಿ ಬರುತ್ತಿತ್ತು. ಅದಕ್ಕಿಗ ಕಾಲ ಕೂಡಿ ಬಂದಿದೆ. 12.ಕಿಲೋ ಮೀಟರ್ ಉದ್ದದ ರಸ್ತೆಗೆ ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್ ಎಂದು ನಾಮಫಲಕ ಅಳವಡಿಸಲಾಗಿದೆ.
Advertisement
ಅಪ್ಪು ಅಗಲಿಕೆಯ ನಂತರ ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರಮುಖ ರಸ್ತೆಗಳಿಗೆ ಪುನೀತ್ ಹೆಸರನ್ನೇ ಇಡಿಬೇಕು ಎಂಬ ಕೂಗು ಅಭಿಮಾನಿಗಳಿಂದ ಕೇಳಿ ಬರುತ್ತಿತ್ತು. ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್‌ಆರ್ ರಮೇಶ್ ಬಿಬಿಎಂಪಿ ಆಯುಕ್ತರಿಗೆ ಈ ಬಗ್ಗೆ ಮನವಿ ಮಾಡಿದ್ದರು. ಈ ಬೆನ್ನಲ್ಲೇ 12 ಕಿಲೋ ಮೀಟರ್ ಉದ್ದದ ರಸ್ತೆಗೆ ಬಿಬಿಎಂಪಿ ಅಧಿಕಾರುಗಳು ಪುನೀತ್ ಹೆಸರಿನ ನಾಮಫಲಕ ಇಡಲು ಗ್ರೀನ್ ಕೊಟ್ಟಿದ್ದರು. ಈಗ ಅದರಂತೆಯೇ ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್ ಎಂದು ನಾಮಫಲಕ ಅಳವಡಿಸಲಾಗಿದೆ.
Advertisement
Advertisement
ಕಳೆದ ವರ್ಷ ಡಿಸೆಂಬರ್ ತಿಂಗಳಿನಲ್ಲಿಯೇ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಹೆಸರನ್ನು ಇಡುವ ಬಗ್ಗೆ ಅನುಮೋದನೆ ನೀಡಲಾಗಿತ್ತು. ಅದರಂತೆಯೇ ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್‌ನಿಂದ ಬನ್ನೇರುಘಟ್ಟ ರಸ್ತೆಯ ವೆಗಾ ಸಿಟಿ ಮಾಲ್ ಜಂಕ್ಷನ್‌ವರೆಗಿನ 12 ಕಿ.ಮೀ ಉದ್ದದ ರಸ್ತೆಗೆ `ಕರ್ನಾಟಕ ರತ್ನ ಡಾಟಟ ಪುನೀತ್ ರಾಜ್‌ಕುಮಾರ್ ರಸ್ತೆ’ ಎಂದು ನಾಮಕರಣ ಮಾಡಲಾಗಿದೆ. ಇದನ್ನೂ ಓದಿ: ಹಾಲಿವುಡ್ ಖ್ಯಾತ ನಟ ರೇ ಲಿಯೊಟ್ಟಾ ಮಲಗಿದ್ದಾಗಲೇ ನಿಧನ
Advertisement
ಇನ್ನು ಈ ಸುದ್ದಿ ತಿಳಿದ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಬೆಂಗಳೂರಿನ ರಸ್ತೆಗೆ ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್ ಎಂದು ನಾಮಫಲಕ ಅಳವಡಿಸಿರೋದಕ್ಕೆ ಅಪ್ಪು ಫ್ಯಾನ್ಸ್ ದಿಲ್ ಖುಷ್ ಆಗಿದ್ದಾರೆ.