ಬೆಂಗಳೂರು: ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಬಿಬಿಎಂಪಿ ಅದ್ದೂರಿಯಾಗಿ ಆಚರಿಸಿದೆ. ಬಿಬಿಎಂಪಿಯ ಗಾಜಿನ ಮನೆಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪಬ್ಲಿಕ್ ಟಿವಿ ಕಾರ್ಯನಿರ್ವಾಹಕ ಸಂಪಾದಕ ಸಿ ದಿವಾಕರ್ ಸೇರಿದಂತೆ ನೂರು ಮಂದಿ ಸಾಧಕರಿಗೆ ಸಿಎಂ ಯಡಿಯೂರಪ್ಪ ಮತ್ತು ಡಿಸಿಎಂ ಅಶ್ವಥ್‍ನಾರಾಯಣ್ ಪ್ರಶಸ್ತಿ ಪ್ರದಾನ ಮಾಡಿದರು.
ಮಾಜಿ ಸಚಿವೆ ಲೀಲಾದೇವಿ ಆರ್ ಪ್ರಸಾದ್, ಐಪಿಎಸ್ ಅಧಿಕಾರಿ ಡಿ.ರೂಪಾ, ಗಾಯಕಿ ಮಂಜುಳಾ ಗುರುರಾಜ್, ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಪ್ರಶಸ್ತಿ ಸ್ವೀಕರಿಸಿದ್ರು. ಇದೇ ವೇಳೆ, ಲಕ್ಷ್ಮಿದೇವಿ ಪ್ರಶಸ್ತಿ, ಶಿವಕುಮಾರ ಸ್ವಾಮೀಜಿ ಪ್ರಶಸ್ತಿಯನ್ನು ವಿತರಿಸಲಾಯ್ತು.
Advertisement
ಈ ಬಾರಿ ಶಿವೈಕ್ಯರಾದ ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ ಹೆಸರಿನಲ್ಲಿ 5 ಸಂಸ್ಥೆಗಳಿಗೆ ಪ್ರಶಸ್ತಿ ನೀಡಿದರೆ 10 ಮಂದಿ ಸಾಧಕಿಯರಿಗೆ ಕೆಂಪೇಗೌಡರ ಸೊಸೆ ಮಹಾತ್ಯಾಗಿ ಲಕ್ಷ್ಮೀದೇವಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.