ಬೆಂಗಳೂರು: ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಸೋತಿದ್ದಕ್ಕೆ ಶಾಸಕ ಆರ್. ಅಶೋಕ್ ವಿರುದ್ಧ ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಫೇಸ್ಬುಕ್ ಮೂಲಕ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರಾ ಎನ್ನುವ ಪ್ರಶ್ನೆ ಎದ್ದಿದೆ.
ಬಿ.ಎಲ್.ಸಂತೋಷ್‍ರವರು ತಮ್ಮ ಫೇಸ್ಬುಕ್‍ನಲ್ಲಿ “ತಂಡ ಸ್ಫೂರ್ತಿ ಇಲ್ಲದವರು ಹಾಗೂ ಗೆಲುವಿನ ಕೀರ್ತಿ ಹಂಚಿಕೊಳ್ಳಲು ಸಿದ್ಧರಿಲ್ಲದವರು ಎಂದಿಗೂ ಗೆಲುವು ಸಾಧಿಸಲಾರರು” ಎಂಬ ಚಾಣಾಕ್ಯನ ವಾಕ್ಯವನ್ನು ಪೋಸ್ಟ್ ಮಾಡುವ ಮೂಲಕ ಅಸಮಾಧಾನವನ್ನು ಹೊರಹಾಕಿದ್ದಾರೆ.
Advertisement
Advertisement
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರ‍್ಯಾಲಿ ಸಿದ್ದತೆಗೂ ಯಾರನ್ನು ಅಶೋಕ್ ವಿಶ್ವಾಸಕ್ಕೆ ತಗೆದುಕೊಳ್ಳಲಿಲ್ಲ ಎನ್ನುವ ಮಾತು ಕೇಳಿ ಬಂದಿತ್ತು. ಈಗ ಮೇಯರ್ ಚುನಾವಣೆಯಲ್ಲಿ ಬೆಂಗಳೂರು ನಾಯಕರನ್ನು ಆರ್.ಅಶೋಕ್ ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ ಎನ್ನುವ ಮಾತು ಕೇಳಿ ಬಂದಿದೆ.
Advertisement
ಅಶೋಕ್ ನಾಯಕತ್ವದ ವಿರುದ್ಧ ಅಪಸ್ವರ ಕೇಳಿಬರುತ್ತಿರುವ ಬೆನ್ನಲ್ಲೇ ಸಂತೋಷ್ ಗರಂ ಆಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಅಮಿತ್ ಶಾ ಗೆ ಆಪ್ತರಾಗಿರುವ ಸಂತೋಷ್ ಎಂಟ್ರಿ ಬೆಂಗಳೂರು ಬಿಜೆಪಿ ಘಟಕದಲ್ಲಿ ಬದಲಾವಣೆಗೆ ಮುನ್ನುಡಿ ಆಗುತ್ತಾ ಎನ್ನುವ ಕುತೂಹಲ ಈಗ ಹೆಚ್ಚಾಗಿದೆ. ಇದನ್ನೂ ಓದಿ: ಬಿಜೆಪಿಯಲ್ಲೂ ಇಬ್ಬರು ನಾಯಕರ ನಡುವೆ ಗುದ್ದಾಟ- ಬಿಎಸ್‍ವೈ ಗೆ ಸಂಕಟ
Advertisement
ಮೇಯರ್ ಆಯ್ಕೆ ಪ್ರಕ್ರಿಯೆಯಲ್ಲಿ ಕೇಂದ್ರ ಸಚಿವ ಸದಾನಂದ ಗೌಡರನ್ನು ಲೆಕ್ಕಕ್ಕೆ ತೆಗೆದುಕೊಳ್ಳದೇ ಅಶೋಕ್ ಕೆಲಸ ಮಾಡಿದ್ದರಿಂದ ಅಂತಿಮವಾಗಿ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಶಸ್ತ್ರತ್ಯಾಗ ಮಾಡಬೇಕಾಯಿತು ಎಂದು ಕೆಲವರು ಗಂಭೀರವಾಗಿ ಆರೋಪಿಸಿದ್ದಾರೆ.
ಕಳೆದ ಶುಕ್ರವಾರ ನಡೆದ ಬಿಬಿಎಂಪಿ ಮೇಯರ್ ಹಾಗೂ ಉಪಚುನಾವಣೆಯಲ್ಲಿ ಭಾರೀ ಹೈಡ್ರಾಮ ನಡೆದಿದ್ದು, ಕೊನೆ ಕ್ಷಣದಲ್ಲಿ ಕಾಂಗ್ರೆಸ್‍ನ ಗಂಗಾಬಿಕೆ ಮೇಯರ್ ಆಗಿ ಆಯ್ಕೆಗೊಂಡಿದ್ದರೆ, ಉಪಮೇಯರ್ ಆಗಿ ಜೆಡಿಎಸ್ಸಿನ ರಮೀಳ ಉಪ ಮೇಯರ್ ಆಗಿ ಆಯ್ಕೆಗೊಂಡಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv