ಬೆಂಗಳೂರು: ಬಿಬಿಎಂಪಿ ಮೇಯರ್ ಚುನಾವಣೆಗೆ ಗೈರಾಗಿದ್ದ ಮಾಜಿ ಸಚಿವ ರೋಷನ್ ಬೇಗ್, ಸೇರಿದಂತೆ ಪಾಲಿಕೆಯ ಇಬ್ಬರು ಕಾಂಗ್ರೆಸ್ ಸದಸ್ಯರಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.
ನೋಟಿಸ್ ನೀಡಿರುವ ಕುರಿತ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಚುನಾವಣೆಯಲ್ಲಿ ಎಲ್ಲರೂ ಭಾಗವಹಿಸಬೇಕು ಅಂತ ಮೊದಲೇ ತಿಳಿಸಲಾಗಿತ್ತು. ಆದರೂ ಏಕೆ ಗೈರಾಗಿರುವಿರಿ, ಉತ್ತರಿಸವಂತೆ ನೋಟಿಸ್ ನೀಡಿ, ಒಂದು ವಾರದೊಳಗೆ ಪ್ರತಿಕ್ರಿಯಿಸುವಂತೆ ಕಾಲಾವಕಾಶ ಕೊಟ್ಟಿದ್ದೇವೆ. ಅವರಿಂದ ವಿವರಣೆ ಬಂದ ನಂತರ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದ ಅವರು, ಇದೊಂದು ಪಕ್ಷದ ಆಂತರಿಕ ವಿಚಾರ ಅಂತಾ ಜಾರಿಕೊಂಡರು.
Advertisement
Advertisement
ಮೇಯರ್ ಚುನಾವಣೆಗೆ ಪಾಲಿಕೆಯ ಕಾಂಗ್ರೆಸ್ ಸದಸ್ಯರಾದ ಆಶಾ ಸುರೇಶ್ ಹಾಗೂ ಲಲಿತಾ ತಿಮ್ಮನಂಜಯ್ಯ ಕೂಡಾ ಗೈರಾಗಿದ್ದರು. ಅವರಿಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೋಟಿಸ್ ನೀಡಿದ್ದಾರೆ.
Advertisement
ಇಂದಿನ ಬಿಬಿಎಂಪಿ ಚುನಾಣೆಯಲ್ಲಿ ಜೆಡಿಎಸ್ ಸದಸ್ಯ ನಾಜಿಮ್ ಖಾನಮ್, ಕೇಂದ್ರ ಸಚಿವರಾದ ಅನಂತ್ ಕುಮಾರ್, ನಿರ್ಮಲಾ ಸೀತಾರಾಮನ್ ಗೈರಾಗಿದ್ದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv