ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Case) ಕಿಡ್ನಾಪ್ ಹಾಗೂ ಕೊಲೆ ಪ್ರಕರಣದ ಬಳಿಕ ಪಟ್ಟಣಗೆರೆ ಶೆಡ್ (Pattanagere Shed) ಮುನ್ನೆಲೆಗೆ ಬಂತು. ಈ ಬೆನ್ನಲ್ಲೇ ಪಟ್ಟಣಗೆರೆ ಶೆಡ್‍ಗೆ ಬಿಬಿಎಂಪಿ ಶಾಕ್ ಕೊಟ್ಟಿದೆ.
ಹೌದು. ರೇಣುಕಾ ಸ್ವಾಮಿಯನ್ನ ಹತ್ಯೆ ಮಾಡಿದ ಪಟ್ಟಣಗೆರೆ ಶೆಡ್ ಮಾಲೀಕರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನೋಟಿಸ್ ನೀಡಿದೆ. 2008 – 09 ರಿಂದ ಆಸ್ತಿ ತೆರಿಗೆ ಪಾವತಿ ಆಗಿಲ್ಲ ಎಂದು ಕೆಂಗೇರಿ ಉಪ ವಲಯದಲ್ಲಿ ಸಹಾಯಕ ಕಂದಾಯ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ನೊಡಿಸ್‍ನಲ್ಲಿ 15 ದಿನಗಳ ಒಳಗೆ ಆಸ್ತಿ ತಮ್ಮದೇ ಅಂತಾ ಘೋಷಿಸಿಕೊಂಡು ತೆರಿಗೆ ಪಾವತಿಸುವಂತೆ ಸೂಚನೆ ಕೊಟ್ಟಿದ್ದಾರೆ. ಒಂದು ವೇಳೆ 15 ದಿನಗಳ ಒಳಗೆ ತೆರಿಗೆ ಪಾವತಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ಕೂಡ ನೀಡಿದ್ದಾರೆ. ಇದನ್ನೂ ಓದಿ: ದರ್ಶನ್ ಪರ ಜಾಮೀನು ಅರ್ಜಿ ಸಲ್ಲಿಸಿಲ್ಲವೇ? – ವಕೀಲರು ಕೊಟ್ಟ ಉತ್ತರವೇನು?
ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಮಾಡಿದ ಆರೋಪದ ಮೇಲೆ ದರ್ಶನ್ ಹಾಗೂ ಗ್ಯಾಂಗ್ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಬೆಂಗಳೂರಿಗೆ ಕರೆತಂದಿತ್ತು. ಬಳಿಕ ಆರ್ ಆರ್ ನಗರದಲ್ಲಿರುವ ಪಟ್ಟಣಗೆರೆ ಶೆಡ್‍ಗೆ ಕರೆದೊಯ್ದು ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಲಾಗಿತ್ತು.