ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿರುವ ವಲಯವಾರು ಪಬ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ಬಿಬಿಎಂಪಿ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದರು. ನಿಯಮ ಪಾಲಿಸದ 12 ಪಬ್, ಬಾರ್‌ಗಳಿಗೆ ಬೀಗ ಜಡಿದರು.
ಪಾಲಿಕೆಯ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಇಂದು ತಪಾಸಣೆ ನಡೆಸಲಾಯಿತು. ನ್ಯೂನತೆಗಳು ಕಂಡುಬಂದಿರುವ ಉದ್ದಿಮೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಜೊತೆಗೆ ಪರವಾನಿಗೆ ನಿಯಮಾವಳಿ ಪಾಲಿಸದ ಉದ್ದಿಮೆಗಳನ್ನು ಸ್ಥಳದಲ್ಲೇ ಮುಚ್ಚಿಸಲಾಗಿದೆ. ಇದನ್ನೂ ಓದಿ: ನಿಷೇಧಾಜ್ಞೆ ನಡುವೆಯೂ ಮಹಿಷ ದಸರಾ ಆಚರಣೆ – ನೂರಾರು ದಲಿತ ಮುಖಂಡರು ವಶಕ್ಕೆ
Advertisement
Advertisement
ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 1,118 ಉದ್ದಿಮೆಗಳಿಗೆ ಪರವಾನಿಗೆ ನೀಡಲಾಗಿದ್ದು, ಈ ಪೈಕಿ ಇಂದು 232 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ 86 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಿ, 12 ಉದ್ದಿಮೆಗಳನ್ನು ಮುಚ್ಚಲಾಗಿದೆ.
Advertisement
Advertisement
ದಕ್ಷಿಣ, ಪಶ್ಚಿಮ, ಪೂರ್ವ, ರಾಜರಾಜೇಶ್ವರಿನಗರ, ದಾಸರಹಳ್ಳಿ, ಯಲಹಂಕ, ಮಹದೇವಪುರ, ಬೊಮ್ಮನಹಳ್ಳಿ ವಲಯದ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದರು. ಇದನ್ನೂ ಓದಿ: ಸಿಎಂಗೆ ಕ್ರಿಕೆಟ್ ಕ್ರೇಜ್ – ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ vs ಪಾಕಿಸ್ತಾನ ಮ್ಯಾಚ್ ವೀಕ್ಷಿಸಿದ ಸಿದ್ದರಾಮಯ್ಯ
Web Stories