ಬೆಂಗಳೂರು: ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಸುಳ್ಳಿನ ಸರದಾರರಾಗಿದ್ದು, ಅವರಿಗೆ ತಾಕತ್ತು ಇದ್ದರೆ ಶ್ವೇತಪತ್ರ ಬಿಬಿಎಂಪಿ ಸಾಲದ ಬಗ್ಗೆ ಬಿಡುಗಡೆ ಮಾಡಲಿ ಎಂದು ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ ಸವಾಲು ಹಾಕಿದ್ದಾರೆ.
ಬಿಬಿಎಂಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪದ್ಮಾನಾಭ ರೆಡ್ಡಿ, ಬೆಂಗಳೂರಿನ ಅಭಿವೃದ್ಧಿ ಸಚಿವರು ಮತ್ತು ಉಪಮುಖ್ಯಮಂತ್ರಿಗಳು ನಿನ್ನೆ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಅಡವಿಟ್ಟಿದ್ದ ಪುರಾತನ ಕಟ್ಟಡಗಳನ್ನ ಬಿಡಿಸಿಕೊಂಡಿದ್ದೇವೆ ಎಂದು ಹೇಳಿ ನಮ್ಮ ಪಕ್ಷದ ವಿರುದ್ಧ ಟೀಕೆ ಮಾಡಿದ್ದಾರೆ. ಆದರೆ ಬಿಬಿಎಂಪಿ ಆಡಳಿತ ನಡೆಸಿದ ಅವಧಿಯಲ್ಲಿ ಪಾಲಿಕೆಯ ಆಸ್ತಿಗಳನ್ನ ಅಡವಿಟ್ಟ ಕುರಿತು ಹಾಗೂ ಸಾಲ ಪಡೆದಿರುವ ಕುರಿತು ನಿಮಗೆ ತಾಕತ್ತಿದ್ದರೆ ಶ್ವೇತಪತ್ರ ಹೊರಡಿಸಿ ಎಂದು ಸವಾಲು ಎಸೆದರು.
Advertisement
Advertisement
ಸಿದ್ದರಾಮಯ್ಯ ಅವರು ಬಿಬಿಎಂಪಿ ಗೆ 7 ಸಾವಿರ ಕೋಟಿ ರೂ. ಬಿಡುಗಡೆ ಮಾಡಿದರು ಎಂದು ಹೇಳಿ ಸುಮ್ಮನೆ ಪ್ರಚಾರ ಪಡೆದುಕೊಳ್ಳುತ್ತಿದ್ದೀರಾ. ಆದರೆ ಕಾಂಗ್ರೆಸ್ ಅಧಿಕಾರದಲ್ಲಿ ಬಿಬಿಎಂಪಿಯಲ್ಲಿ ಹೆಚ್ಚಿನ ಸಾಲ ಮಾಡಿದ್ದು, ಆ ಸಾಲ ತೀರಿಸಲು ಕಟ್ಟಡಗಳ ಅಡ ಇಡಬೇಕಾಯಿತು. ಹೀಗೆ ಇಲ್ಲ ಸಲ್ಲದ ಆರೋಪ ಮಾಡಿ ಟೀಕೆ ಮಾಡುತ್ತಿದ್ದಾರೆ ಎಂದು ಡಿಸಿಎಂ ಪರಮೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದರು.
Advertisement
ಬಿಬಿಎಂಪಿಯಲ್ಲಿ 1,800 ಕೋಟಿ ರೂ.ಗೂ ಹೆಚ್ಚಿನ ಪೆಂಡಿಂಗ್ ಬಿಲ್ ಇವೆ. ಸಿದ್ದರಾಮಯ್ಯ ಅವರ ಆಡಳಿತ ಬಂದಾಗಿನಿಂದ ಕಸ ವಿಲೇವಾರಿಗೆ ಟೆಂಡರ್ ಕರೆಯದೆ 1 ಸಾವಿರ ಕೋಟಿ ರೂ.ಗೂ ಹೆಚ್ಚಿನ ಕಾಮಗಾರಿ ನಡೆದಿದೆ. ಕಸ ವಿಲೇವಾರಿ ಸಂಸ್ಕರಣಾ ಘಟಕಗಳಿಗೆ ಸುಮಾರು 500 ಕೋಟಿ ರೂ. ಸಾರ್ವಜನಿಕ ಹಣವನ್ನು ಖರ್ಚು ಮಾಡಿದ್ರೂ ಕೂಡ ಸರಿಯಾಗಿ ನಿರ್ವಹಣೆಯಾಗಿಲ್ಲ. ಬಿಬಿಎಂಪಿಯಲ್ಲಿ ಗುತ್ತಿಗೆದಾರರಿಗೆ ಬಿಲ್ ಪಾವತಿಯಾಗಿಲ್ಲ. ಬಿಜೆಪಿ ಪಕ್ಷದ ಆಡಳಿತದಲ್ಲಿ ಆದ ಅಭಿವೃದ್ಧಿ ಕಾರ್ಯಗಳನ್ನ ನಿಮ್ಮ ಸರ್ಕಾರದ ಹುಳುಕನ್ನು ಮುಚ್ಚಿಕೊಳ್ಳಲು ಟೀಕೆ ಮಾಡುತ್ತಿದ್ದೀರಾ. ನಿಮಗೆ ತಾಕತ್ತಿದ್ದರೆ 1989 ರಿಂದ ಇಲ್ಲಿಯವರೆಗೂ ಬಿಜೆಪಿ ಅವಧಿಯಲ್ಲಿ ಎಷ್ಟು ಸಾಲ ಮಾಡಿದ್ದೇವೆ ಎಂದು ಶ್ವೇತಾ ಪತ್ರ ಹೊರಡಿಸಿ ಎಂದರು. ಅಲ್ಲದೇ ಈ ಕುರಿತು ಡಿಸಿಎಂ ಅವರಿಗೆ ನೇರ ಪತ್ರ ಬರೆದು ನನ್ನ ಪ್ರಶ್ನೆಗಳಿಗೆ ಉತ್ತರಿಸುವಂತೆ ಹೇಳುವುದಾಗಿ ತಿಳಿಸಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews