ಬೆಂಗಳೂರು: ಬಿಬಿಎಂಪಿ ಒಂದಿಲ್ಲೊಂದು ಅವಾಂತರ, ಯಡವಟ್ಟು ಮಾಡಿದ್ರೂ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಯೋಜನೆಗೆ ಮುಂದಾಗಿದೆ.
ಪಾಲಿಕೆಯ 198 ವಾರ್ಡ್‍ಗಳಲ್ಲಿ ಶಿಕ್ಷಣ ವಂಚಿತ ಮಕ್ಕಳಿಗೆ ರಾತ್ರಿ ಶಾಲೆ ಆರಂಭಿಸಲು ಪಾಲಿಕೆ ಚಿಂತನೆ ನಡೆಸಿದೆ. ಕೂಲಿ ಕಾರ್ಮಿಕರ ಮಕ್ಕಳು, ಬಡ ಕುಟುಂಬದ ಮಕ್ಕಳು ಶಾಲೆಗೆ ಬಾರದೆ ದಿನಗೂಲಿಗೆ ಹೋಗ್ತಿದ್ದಾರೆ. ಇಂತಹವರಿಗಾಗಿ ಬಿಬಿಎಂಪಿ ವಿಶೇಷ ಆಯುಕ್ತ ರಾಮ್ ಪ್ರಸಾದ್ ಮನೋಹರ್ ಹೊಸ ಶಿಕ್ಷಣ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ. ಇದನ್ನೂ ಓದಿ: ಸರಣಿ ಅಪಘಾತ: ಬಿಎಂಟಿಸಿ, ಟೆಂಪೋ ನಡುವೆ ಸಿಲುಕಿದ ಆಟೋ
Advertisement
Advertisement
ಈ ಹಿಂದೆ ಬಳ್ಳಾರಿ ಡಿಸಿಯಾಗಿ ಕಾರ್ಯ ನಿರ್ವಹಿಸಿದ ಮನೋಹರ್ ಅವರು ಬಳ್ಳಾರಿಯಲ್ಲಿ ರಾತ್ರಿ ಶಾಲೆ ಯೋಜನೆ ಜಾರಿಗೆ ತಂದು ಯಶಸ್ಸು ಕಂಡಿದ್ರು. ಪ್ರಸ್ತುತ ಬೆಂಗಳೂರಿನಲ್ಲೂ ಇದೇ ರೀತಿ ಯೋಜನೆ ರೂಪಿಸುತ್ತಿದ್ದಾರೆ. ರಾತ್ರಿ ಶಾಲೆ ಆರಂಭಿಸಲು ವಿನೂತನ ಯೋಜನೆಯ ಸಾಧಕ ಭಾದಕಗಳ ಬಗ್ಗೆ ಚರ್ಚೆ ನಡೆಸಿ ಸರ್ಕಾರಕ್ಕೆ ಪ್ರಸ್ತಾವನೆ ಮುಂದಿಡಲಿದ್ದಾರೆ. ಎಲ್ಲವೂ ನಿಗದಿಯಂತೆ ನಡೆದರೆ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದು ಯೋಜನೆಗೆ ಚಾಲನೆ ಸಿಗುವ ಸಾಧ್ಯತೆ ಇದೆ.
Advertisement
ಮಕ್ಕಳನ್ನು ಕೆಲಸಕ್ಕೆ ಕಳುಹಿಸಬಾರದು ಎಂದು ಸರ್ಕಾರದ ಕಾನೂನು ಇದ್ದರೂ ಪೋಷಕರು ಕಳುಹಿಸುತ್ತಿದ್ದಾರೆ. ಈ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಈಗ ರಾತ್ರಿ ಶಾಲೆ ನಡೆಸುವ ಯೋಜನೆಯನ್ನು ಮುಂದಿಟ್ಟಿದೆ.
Advertisement
ರಾತ್ರಿ ಶಾಲೆ ಹೇಗಿರುತ್ತೆ?
ಪ್ರತಿ ವಾರ್ಡ್‍ನ ಸರ್ಕಾರಿ, ಬಿಬಿಎಂಪಿ ಶಾಲೆಗಳಲ್ಲಿ ಕಲಿಕೆ, ಸಂಜೆ 6 ರಿಂದ 9 ಗಂಟೆವರೆಗೆ ಶಾಲೆ ವೇಳಾಪಟ್ಟಿ, ಉಚಿತ ಪಠ್ಯಪುಸ್ತಕ, ಲೇಖನಿ ಸಾಮಗ್ರಿಗಳು, ಸಮವಸ್ತ್ರ ವಿತರಣೆ, ನುರಿತ ಶಿಕ್ಷಕವೃಂದದಿಂದ ಬೋಧನೆ ನೀಡಲಾಗುತ್ತದೆ. ಇದನ್ನೂ ಓದಿ: ‘ತವಾ ಮಸಾಲಾ ಬೆಂಡೆಕಾಯಿ’ ಮಾಡುವ ಸೂಪರ್ ರೆಸಿಪಿ
ರಾತ್ರಿ ಶಾಲೆಗೆ ಬರುವ ಮಕ್ಕಳಿಗೆ ಉಚಿತ ಇಸ್ಕಾನ್ ಊಟ, ಮಕ್ಕಳಿಗೆ ರಾತ್ರಿ ವೇಳೆ ಮನೆಗೆ ತೆರಳಲು ಉಚಿತ ಬಸ್ ವ್ಯವಸ್ಥೆ, ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸೋದು ಮತ್ತು ವರ್ಷಕ್ಕೆ ಒಂದು ಬಾರಿ ಉಚಿತ ಶೈಕ್ಷಣಿಕ ಪ್ರವಾಸ ಮಾಡಿಸಲಾಗುತ್ತದೆ.