ಬೆಂಗಳೂರು: ಸ್ಯಾಂಡಲ್‍ವುಡ್ ನಟ ದೊಡ್ಮನೆ ಹುಡುಗ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಿಧನದ ಬಳಿಕ ಅವರ ಹೆಸರನ್ನು ರೋಡ್, ಪಾರ್ಕ್, ಮೆಟ್ರೋ ಹಾಗೂ ಬಸ್ ನಿಲ್ದಾಣಗಳಿಗೆ ಇಡುವ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ.
ನಗರದ ಪ್ರಮುಖ ರಸ್ತೆ, ಪಾರ್ಕ್, ಮೆಟ್ರೋ ಹಾಗೂ ಬಸ್ ನಿಲ್ದಾಣಗಳಿಗೆ ಪವರ್ ಸ್ಟಾರ್ ಹೆಸರಿಡಲು ಬೆಂಗಳೂರು ಮಹಾನನಗರ ಪಾಲಿಕೆ ವತಿಯಿಂದ ಅಭಿಪ್ರಾಯ ವ್ಯಕ್ತವಾಗಿದೆ. ಪುನೀತ್ ಅಭಿಮಾನಿಗಳ ಒತ್ತಾಸೆಯ ಬೆನ್ನಲ್ಲೇ ಬಿಬಿಎಂಪಿ ಈ ನಿರ್ಧಾರ ಕೈಗೊಂಡಿದ್ದು, ನಗರದ ಮುಖ್ಯ ರಸ್ತೆಯೊಂದಕ್ಕೆ ಪುನೀತ್ ಹೆಸರಿಡಲು ಚರ್ಚೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಪುನೀತ್ ಸಾವಿಗೂ 46 ಸಂಖ್ಯೆಗೂ ಸಂಬಂಧವೇನು?
ಈಗಾಗಲೇ ರಾಜಾಜಿನಗರ ಮುಖ್ಯ ರಸ್ತೆಗೆ ಪುನೀತ್ ಹೆಸರಿಡಲಾಗಿದ್ದು, ಪಕ್ಕದ ವೆಸ್ಟ್ ಆಫ್ ಕಾರ್ಡ್ ರೋಡ್‍ಗೆ ಕೂಡ ಪುನೀತ್ ನಾಮಕರಣ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಈ ಬಗ್ಗೆ ಮೊದಲು ಪುನೀತ್ ರಾಜ್‍ಕುಮಾರ್ ಅವರ ಕುಟುಂಬಸ್ಥರೊಂದಿಗೆ ಚರ್ಚಿಸಿ, ನಂತರ ಸರ್ಕಾರದ ಮುಂದೆ ಈ ವಿಚಾರ ಪ್ರಸ್ತಾಪಿಸಲಾಗುತ್ತದೆ. ಇದನ್ನೂ ಓದಿ: ಪುನೀತ್ ಸಾವಿನ ಬೆನ್ನಲ್ಲೇ ಹೆಚ್ಚಾಯ್ತು ಇಸಿಜಿ, ಹೃದಯಸಂಬಂಧಿ ಟೆಸ್ಟ್‌ಗಳು
ನಗರದ ಪ್ರತಿಷ್ಠಿತ ಪಾರ್ಕ್, ಆಟದ ಮೈದಾನ, ಮೆಟ್ರೋ ಹಾಗೂ ಬಸ್ ನಿಲ್ದಾಣಕ್ಕೂ ಅಪ್ಪು ಹೆಸರಿಡಲು ಚಿಂತನೆ ನಡೆಸಲಾಗಿದೆ. ಆದರೆ ಈ ವಿಚಾರವಾಗಿ ಅಂತಿಮವಾಗಿ ಸರ್ಕಾರ ನಿರ್ಧರಿಸಬೇಕಾಗಿದೆ.