ಬೆಂಗಳೂರು: ಹೊಸ ವರ್ಷ ಆಚರಣೆಗೆ (New Year) ದಿನಗಣನೆ ಶುರುವಾಗಿದೆ. ಸಂಭ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮವಹಿಸಲು ಬಿಬಿಎಂಪಿ (BBMP) ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಗೃಹ ಸಚಿವ ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲವು ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಲಾಗಿದೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಗೆ ಮಾಜಿ ಸಿಎಂ ಹೆಚ್‌ಡಿಕೆ ಕುಟುಂಬಕ್ಕೆ ಆಹ್ವಾನ
ಪಾಲಿಸಬೇಕಾದ ಅಂಶಗಳೇನು?
ಹೊಸ ವರ್ಷಾಚರಣೆ ಸಮಯದಲ್ಲಿ ಹೆಚ್ಚಿನ ಜನರು ಸೇರುವ ಸ್ಥಳಗಳಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕು. ಅಂತಹ ಸ್ಥಳಗಳಲ್ಲಿ ಲಭ್ಯವಿರುವ ಎಲ್ಲಾ ಅಂಬುಲೆನ್ಸ್‌ಗಳನ್ನು ಸದಾ ಸನ್ನದ್ಧ ಸ್ಥಿತಿಯಲ್ಲಿರುವಂತೆ ಅಗತ್ಯ ಕ್ರಮ ವಹಿಸಬೇಕು.
ಹೆಚ್ಚಿನ ಸಂಖ್ಯೆಯ ಜನರು ಸಂಚರಿಸುವ ಮಾರ್ಗಗಳು/ಸ್ಥಳಗಳಲ್ಲಿರುವ ಬೀದಿ ದೀಪಗಳನ್ನು ಸುಸ್ಥಿತಿಯಲ್ಲಿಡಬೇಕು ಹಾಗೂ ಹೆಚ್ಚುವರಿಯಾಗಿ ಫೆಡ್ ಲೈಟ್‌ಗಳನ್ನು ಅಳವಡಿಸಬೇಕು. ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಸಂಭ್ರಮ- ಮಾಲಾಧಾರಿಗಳಿಂದ ದತ್ತಪಾದುಕೆ ದರ್ಶನ
ರಸ್ತೆ ರಿಪೇರಿ ಕಾಮಗಾರಿಯ ನಡೆಯುತ್ತಿರುವ ಸ್ಥಳಗಳಲ್ಲಿ ಸೂಕ್ತ ರೀತಿಯಲ್ಲಿ ಬ್ಯಾರಿಕೇಡ್ ವ್ಯವಸ್ಥೆ, ರಿಫ್ಲೆಕ್ಟಿಂಗ್ ಸ್ಟಿಕ್ಕರ್ಸ್, ಸೂಚನಾ ಫಲಕಗಳನ್ನು ಅಳವಡಿಸಬೇಕು. ರಸ್ತೆ ಗುಂಡಿಗಳನ್ನು ಮುಚ್ಚುವುದು ಮತ್ತು ರಸ್ತೆ ಉಬ್ಬುಗಳು ಸ್ಪಷ್ಟವಾಗಿ ವಾಹನ ಚಾಲಕರಿಗೆ ಕಾಣುವಂತೆ ಅಗತ್ಯ ಕ್ರಮ ವಹಿಸಬೇಕು.
ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೇಂಟ್ ಮಾರ್ಕ್ ರಸ್ತೆ, ಕಬ್ಬನ್ ಪಾರ್ಕ್, ಟ್ರಿನಿಟಿ ಸರ್ಕಲ್, ಹಲಸೂರು ಕೆರೆ, ಫೀನಿಕ್ಸ್ ಮಾಲ್, ಕೋರಮಂಗಲ, ಸ್ಟಾರ್ ಹೋಟೆಲ್‌ಗಳು, ಕ್ಲಬ್ ಇತರೆ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಸೇರಲಿದ್ದು, ಜನರ ನಿಯಂತ್ರಣಕ್ಕಾಗಿ ಬ್ಯಾರಿಕೇಡ್ ವ್ಯವಸ್ಥೆ ಕಲ್ಪಿಸಬೇಕು ಎಂದು ಬಿಬಿಎಂಪಿ ತಿಳಿಸಿದೆ. ಇದನ್ನೂ ಓದಿ: ಲೀಟರ್ ಹಾಲಿಗೆ 1.50 ರೂ. ಇಳಿಸಿ ಮನ್ಮುಲ್ ಆದೇಶ