ಬೆಂಗಳೂರು: ಬಿಬಿಎಂಪಿ (BBMP) ಇ-ಖಾತಾ (E-Katha) ಶೀಘ್ರದಲ್ಲಿಯೇ ಪಡೆಯಲು ಬಿಬಿಎಂಪಿಯಿಂದ ವ್ಯವಸ್ಥೆ ಕಲ್ಪಿಸಲಾಗಿದ್ದು, ತುರ್ತಾಗಿ ಅಂತಿಮ ಇ-ಖಾತಾ ಪಡೆದುಕೊಳ್ಳುವ ಸಂಬಂಧ ಬಿಬಿಎಂಪಿ ಮಾರ್ಗಸೂಚಿ ನೀಡಿದೆ.
ಬಿಬಿಎಂಪಿಯಿಂದ ತುರ್ತಾಗಿ ಅಂತಿಮ ಇ-ಖಾತಾ ಪಡೆಯಬೇಕಾದರೆ ಅಗತ್ಯ ದಾಖಲೆಗಳನ್ನು ನೀಡುವ ಮೂಲಕ ನಿಯಮಾನುಸಾರ ಒಂದೇ ದಿನದಲ್ಲಿ ಪಡೆಯಬಹುದು. ಅಕ್ಟೋಬರ್ ತಿಂಗಳಲ್ಲಿಯೇ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ನೋಂದಣಿ ಮಾಡಿಕೊಳ್ಳುವ ಉದ್ದೇಶವಿರುವವರು ತುರ್ತಾಗಿ ಅಂತಿಮ ಇ-ಖಾತಾ ಪಡೆದುಕೊಳ್ಳಬಹುದಾಗಿದೆ.
ಬಿಬಿಎಂಪಿಯಿಂದ ಕರಡು ಇ-ಖಾತಾ ಮತ್ತು ಅಂತಿಮ ಇ-ಖಾತಾ ಪಡೆಯಲು ಅನುಸರಿಸಬೇಕಾದ ಕ್ರಮಗಳು, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಿಕೆ ಹಾಗೂ ಸಲ್ಲಿಸಬೇಕಾದ ದಾಖಲೆಗಳ ಕುರಿತು ಮಾರ್ಗಸೂಚಿ ಇಲ್ಲಿದೆ.ಇದನ್ನೂ ಓದಿ: ಮುಡಾದಲ್ಲಿ 1992ರ ಪ್ರಮುಖ ದಾಖಲೆಗಳೇ ನಾಪತ್ತೆ – ಇ.ಡಿ ಅಧಿಕಾರಿಗಳು ಶಾಕ್!
ಒಂದೇ ದಿನದಲ್ಲಿ ಅಂತಿಮ ಇ-ಖಾತಾ ಪಡೆಯೋದು ಹೇಗೆ? ಮಾರ್ಗಸೂಚಿ ಏನು?
1. ಆನ್‌ಲೈನ್ bbmpeaasthi.karnataka.gov.in ನಲ್ಲಿ ವಾರ್ಡ್‌ವಾರು ಇ-ಖಾತಾ ಪಟ್ಟಿಯಿಂದ ನಿಮ್ಮ ಕರಡು ಇ-ಖಾತಾ ಅನ್ನು ಡೌನ್‌ಲೋಡ್ ಮಾಡಿ.
2. ತಮ್ಮ ಸ್ವತ್ತಿನ ಆಸ್ತಿ ತೆರಿಗೆ ರಶೀದಿಯಿಂದ ನಿಮ್ಮ ವಾರ್ಡ್ ಹೆಸರು ಮತ್ತು ಸಂಖ್ಯೆಯನ್ನು ತಿಳಿದುಕೊಳ್ಳಬಹುದು.
3. ಅಂತಿಮ ಇ-ಖಾತಾ ಪಡೆಯಲು ಕೆಳಗಿನ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ನಮೂದಿಸಿ/ಅಪ್‌ಲೋಡ್ ಮಾಡಿ:
(a) ತಮ್ಮ ಸ್ವತ್ತಿನ ಆಸ್ತಿ ತೆರಿಗೆ ಅರ್ಜಿ ಸಂಖ್ಯೆಯ 10-ಅಂಕಿಗಳು.
(b) ಮಾಲೀಕರ ಆಧಾರ್ ಆಧಾರಿತ E-KYC (ಇ-ಖಾತಾ ನಲ್ಲಿರುವ ಎಲ್ಲಾ ಮಾಲೀಕರು E-KYC ಮಾಡಬೇಕಾಗಿದೆ – ಯಾವುದೇ ಮಾಲೀಕರು ಆಧಾರ್ ಹೊಂದಿಲ್ಲದಿದ್ದರೆ, ಸಹಾಯಕ ಕಂದಾಯ ಅಧಿಕಾರಿ ಕಚೇರಿಗೆ ಭೇಟಿ ನೀಡಿ, ಪಾಸ್‌ಪೋರ್ಟ್, ವೋಟರ್ ಐಡಿ ಅಥವಾ ಡ್ರೈವಿಂಗ್ ಲೈಸೆನ್ಸ್ ಅನ್ನು ಬಳಸಿ ದೃಢೀಕರಿಸಿ).
(c) ಮಾಲೀಕರು ಆಸ್ತಿಯನ್ನು ಪಡೆದ ನೋಂದಾಯಿತ ಪತ್ರ ಸಂಖ್ಯೆ (ಕ್ರಯ/ದಾನ ಪತ್ರ ಇತ್ಯಾದಿ) (ಕಾವೇರಿ ತಂತ್ರಾಂಶದಿಂದ ನೋಂದಾಯಿತ ಪತ್ರ ಮಾಹಿತಿಯನ್ನು ಪಡೆಯಲಾಗುವುದು)
(d) ಆಸ್ತಿಯ ಹಕ್ಕು ನಿರೂಪಿಸುವ ನೋಂದಾಯಿತ ಪತ್ರವು, ನೋಂದಣಿ ದಿನಾಂಕದ ಒಂದು ದಿನದ ಹಿಂದಿನಿಂದ ದಿ:18.10.2024 ರವರೆಗೆ ಆಸ್ತಿಯ ಋಣಭಾರ ಪ್ರಮಾಣಪತ್ರ
.
(e) ಆಸ್ತಿಯ ಮಾಲೀಕರು, ಆಸ್ತಿಯ ಹೊರಗೆ ಹಾಗೂ ಮುಂದೆ ನಿಂತಿರುವ ಆಸ್ತಿಯ ಛಾಯಾಚಿತ್ರ.
(f) ಬೆಸ್ಕಾಂ 10-ಅಂಕಿಯ ಎಸಿಸಿ ಐಡಿ (ಬೆಸ್ಕಾಂ ಬಿಲ್ ನೋಡಿ & ಖಾಲಿ ಭೂಮಿಗೆ ಕಡ್ಡಾಯವಲ್ಲ).
(g) BWSSB (ಐಚ್ಛಿಕ).
4. ಮೇಲೆ ತಿಳಿಸಿರುವಂತೆ ಮಾಹಿತಿ ಹಾಗೂ ದಾಖಲೆಗಳು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿ, ಸಲ್ಲಿಸಿದ ನಂತರ, ಎಲ್ಲವೂ ಕ್ರಮದಲ್ಲಿದ್ದರೆ, ಒಂದೇ-ದಿನದಲ್ಲಿ ಅಂತಿಮ ಇ-ಖಾತಾವನ್ನು ಪಡೆಯಬಹುದಾಗಿದ್ದು, ಸಂಬಂಧಪಟ್ಟ ಸಹಾಯಕ ಕಂದಾಯ ಅಧಿಕಾರಿ ಅವರನ್ನು ಭೇಟಿ ಮಾಡತಕ್ಕದ್ದು.
5. ಮೇಲಿನ ವಿಧಾನವನ್ನು ಪೂರ್ಣಗೊಳಿಸಲು ಯಾವುದೇ ಸವಾಲುಗಳಿದ್ದಲ್ಲಿ ಸಹಾಯಕ ಕಂದಾಯ ಅಧಿಕಾರಿ ಕಚೇರಿಗೆ ಭೇಟಿ ಸಹಾಯವನ್ನು ಪಡೆಯಬಹುದು. ನೀವು ತುರ್ತು ನೋಂದಣಿಯನ್ನು ಹೊಂದಿದ್ದರೆ, ನೀವು ತಮ್ಮ ಎಲ್ಲಾ ದಾಖಲೆಗಳು ಮತ್ತು ತಹಲ್‌ವರೆಗಿನ ಋಣಭಾರ ಪ್ರಮಾಣಪತ್ರವನ್ನು ಸಂಬಂಧಪಟ್ಟ ಸಹಾಯಕ ಕಂದಾಯ ಅಧಿಕಾರಿ ಕಚೇರಿಗೆ ಭೇಟಿ ನೀಡಿ, ಅಲ್ಲಿ ಸಹಾಯ ಫಲಕದ ಸಿಬ್ಬಂದಿಯು ತಮಗೆ ಮಾಹಿತಿಯನ್ನು ಅಪ್‌ಲೋಡ್ ಮಾಡಲು ಮತ್ತು ಒಂದು ದಿನದಲ್ಲಿ ನಿಯಮಗಳ ಪ್ರಕಾರ ನಿಮಗೆ ಅಂತಿಮ ಇ-ಖಾತಾಯನ್ನು ಹೊಂದಲು ಸಹಾಯವನ್ನು ಪಡೆಯಬಹುದು.
6. ಉಪ-ನೋಂದಣಾಧಿಕಾರಿ ಕಛೇರಿಯಲ್ಲಿ ತುರ್ತು ಆಸ್ತಿ ನೋಂದಣಿಯನ್ನು ಹೊಂದಿರದ ನಾಗರಿಕರು, ಬಿಬಿಎಂಪಿ ಹಿಂಬರಹದ ಮೂಲಕ ನಿರ್ದಿಷ್ಟವಾಗಿ ಸೂಚನೆಯ ಹೊರತು ಅಂತಿಮ ಇ-ಖಾತಾವನ್ನು ಪಡೆಯಲು ಸಹಾಯಕ ಕಂದಾಯ ಅಧಿಕಾರಿ ಕಚೇರಿಗೆ ಹೋಗದಂತೆ ವಿನಂತಿಸಲಾಗಿದೆ.
ಅಂತಹ ಪ್ರಕರಣಗಳಲ್ಲಿ ತಮ್ಮ ಅಗತ್ಯಕ್ಕೆ, ಅನುಕೂಲದ ಸಮಯದಲ್ಲಿ ತಮ್ಮ ಅಂತಿಮ ಇ-ಖಾತಾವನ್ನು ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಬಹುದು ಎಂಬುದನ್ನು ದಯವಿಟ್ಟು ಗಮನಿಸಿ. ಅಂತಹ ಸಂದರ್ಭಗಳಲ್ಲಿ ಋಣಭಾರ ಪ್ರಮಾಣಪತ್ರ (ಇಸಿ) ಅಗತ್ಯವನ್ನು ಕೈಬಿಡಲಾಗಿದೆ.
7. ಯಾವುದೇ ಪ್ರಶ್ನೆಗಳು ಅಥವಾ ಸಮಸ್ಯೆಗಳಿಗಾಗಿ 1533 ಗೆ ಕರೆ ಮಾಡಿ ಅಥವಾ bbmpekhata@gmail.comಗೆ ಇಮೇಲ್ ಮಾಡಿ.ಇದನ್ನೂ ಓದಿ: ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ – ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ