ಹುಬ್ಬಳ್ಳಿ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಂಪಿ ಸೂಪರಿಂಟೆಂಡೆಂಟ್ ಎಂಜಿನಿಯರ್ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ.
ರಂಗರಾಜು ಎಸ್‌ಎ (59) ಸಾವನ್ನಪ್ಪಿದ ಸೂಪರಿಂಟೆಂಡೆಂಟ್ ಎಂಜಿನಿಯರ್. ಬಿಬಿಎಂಪಿಯ ಕೆಆರ್‌ಐಡಿಎಲ್ ವಿಭಾಗದಲ್ಲಿ ಸೂಪರಿಂಟೆಂಡೆಂಟ್ ಎಂಜಿನಿಯರ್ ಆಗಿ ರಂಗರಾಜು ಕೆಲಸ ಮಾಡುತ್ತಿದ್ದರು. ಭಾನುವಾರ ರಾತ್ರಿ 11.30ರ ಸುಮಾರಿಗೆ ರಂಗರಾಜು ಬೆಂಗಳೂರಿಗೆ ಹೋಗುವಾಗ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಸಲಿಂಗಕಾಮಿ ಜೋಡಿ
ರಂಗರಾಜು ಅವರು ಹುಬ್ಬಳ್ಳಿ – ಬೆಂಗಳೂರು ರೈಲಿಗೆ ಹತ್ತಬೇಕಿತ್ತು. ಆದರೆ ಬೆಳಗಾವಿ-ಬೆಂಗಳೂರು ರೈಲಿಗೆ ಹತ್ತಿದ್ದರು. ಬೇರೆ ರೈಲನ್ನು ಹತ್ತಿದ್ದೇನೆ ಎಂದು ಗೊತ್ತಾದಾಗ ರಂಗರಾಜು ಚಲಿಸುತ್ತಿರುವ ರೈಲಿನಿಂದ ಇಳಿಯಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಪ್ಲಾಟ್ ಫಾರ್‌ಂನಲ್ಲಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: MESಗೆ ಪಾಠ ಕಲಿಸಲು ಕಾರ್ಮಿಕ ಸಂಘಟನೆ ಪ್ಲ್ಯಾನ್- ಇಂದಿನಿಂದ್ಲೇ ಮಹಾರಾಷ್ಟ್ರ ವಸ್ತುಗಳು ಬ್ಯಾನ್