ಬೆಂಗಳೂರು: ಬಿಬಿಎಂಪಿ ಟ್ಯಾಕ್ಸ್ ಇನ್ಸ್‌ಪೆಕ್ಟರ್‌ಗೆ 5 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಚಿಕ್ಕಪೇಟೆ ವಾರ್ಡ್ ಟ್ಯಾಕ್ಸ್ ಇನ್ಸ್‌ಪೆಕ್ಟರ್ ನಾಗೇಂದ್ರ ಜೈಲು ಶಿಕ್ಷೆಗೆ ಒಳಗಾದ ಅಧಿಕಾರಿ. 2017 ರಲ್ಲಿ 20 ಸಾವಿರ ರೂ. ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದ. ಇದನ್ನೂ ಓದಿ: ಭಾರತದೊಂದಿಗೆ ಶಾಂತಿಯುತ, ಸಹಕಾರಿ ಬಾಂಧವ್ಯ ಬಯಸುತ್ತೇವೆ: ಮೋದಿಗೆ ಪಾಕ್ ಪ್ರಧಾನಿ ಪ್ರತಿಕ್ರಿಯೆ
ನಾಗೇಂದ್ರ ಬೇಗೂರಿನಲ್ಲಿ ಕರ್ತವ್ಯ ನಿರ್ವಹಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದನು. ಬಿಬಿಎಂಪಿ ಖಾತೆ ಮಾಡಿಸಲು ವ್ಯಕ್ತಿಯೊಬ್ಬರಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದ. ಈ ಹಿನ್ನೆಲೆ ವ್ಯಕ್ತಿ ಎಸಿಬಿಗೆ ದೂರು ನೀಡಿದ್ದರು.
20 ಸಾವಿರ ಲಂಚ ಪಡೆಯುವಾಗ ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿತ್ತು. ಆರೋಪ ಸಾಬೀತಾದ ಹಿನ್ನಲೆ ನ್ಯಾಯಾಲಯವು ನಾಗೇಂದ್ರನಿಗೆ ಐದು ವರ್ಷ ಜೈಲು ಶಿಕ್ಷೆ ಹಾಗೂ 40 ಸಾವಿರ ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ. ಇದನ್ನೂ ಓದಿ: ಪಾಕಿಸ್ತಾನದ ನೂತನ ಪ್ರಧಾನಿಗೆ ಮೋದಿ ಅಭಿನಂದನೆ