ಬೆಂಗಳೂರು: ಕೊರೊನಾ ಪ್ರಕರಣಗಳ ವಾಸ್ತವವನ್ನು ನೋಡಿಕೊಂಡು ರಾಜ್ಯದಲ್ಲಿ ಶಾಲೆಗಳನ್ನು ನಡೆಸಲು ತೀರ್ಮಾನ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಮಾಹಿತಿ ನೀಡಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಪ್ರತಿ ದಿನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಜತೆ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದಾರೆ. ಕೋವಿಡ್ ಪಾಸಿಟಿವಿಟಿ ರೇಟ್‍ನಲ್ಲಿ ಮಕ್ಕಳ ಆರೋಗ್ಯ ನೋಡಿಕೊಂಡು ತೀರ್ಮಾನ ಕೈಗೊಳ್ಳಲು ಸೂಚಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಪುಷ್ಪ ಸಿನಿಮಾ ಮಾದರಿಯಲ್ಲಿ ದರೋಡೆ – ಇಬ್ಬರು ಹೆಡ್ ಕಾನ್‍ಸ್ಟೇಬಲ್ ಸಸ್ಪೆಂಡ್
ಒಂದೂವರೆ ವರ್ಷದಿಂದ ರಾಜ್ಯದಲ್ಲಿ ಶಾಲೆಗಳನ್ನು ಮುಚ್ಚಿದ ಕಾರಣ ಸಾಕಷ್ಟು ಸಮಸ್ಯೆ ಉಂಟಾಗಿದೆ. ಆದರೂ ಕಳೆದ 4 ತಿಂಗಳಿನಿಂದ ಸತತ ಪ್ರಯತ್ನ ನಡೆಸಿ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ. ಶಾಲೆಗಳನ್ನು ನಡೆಸುವ ತೀರ್ಮಾನ ಇದೆ. ಆದರೆ ಕೊರೊನಾ 3ನೇ ಅಲೆಯಿಂದ ಮಕ್ಕಳ ಮೇಲೆ ಯಾವುದೇ ಪರಿಣಾಮ ಬೀರಬಾರದು. ಶಿಕ್ಷಣ ಇಲಾಖೆ 1, 2ನೇ ಅಲೆಯ ಪಾಸಿಟಿವಿಟಿ ರೇಟ್ ರಿವ್ಯೂ ಮಾಡಿದಾಗ ಸಾಕಷ್ಟು ತಾಲೂಕಿನಲ್ಲಿ ಪಾಸಿಟಿವಿಟಿ ರೇಟ್ ಕಮ್ಮಿ ಇದೆ ಎಂದು ಹೇಳಿದರು.
117 ತಾಲೂಕುಗಳಲ್ಲಿ ಪಾಸಿಟಿವಿಟಿ ರೇಟ್ ಶೇ. 1ಕ್ಕಿಂತ ಕಮ್ಮಿ ಇದೆ. ಜಿಲ್ಲಾಧಿಕಾರಿಗೆ ಪಾಸಿಟಿವಿಟಿ ರೇಟ್ ನೋಡಿಕೊಂಡು, ಪರಿಸ್ಥಿತಿಗೆ ಅನುಗುಣವಾಗಿ ಶಾಲೆಗಳನ್ನು ಬಂದ್ ಮಾಡುವ ಜವಾಬ್ದಾರಿ ನೀಡಲಾಗಿದೆ. ಬೆಂಗಳೂರಿನಲ್ಲಿ 10 ಸಾವಿರ ಕೇಸ್ ಗಳಿವೆ. 10, 11, 12 ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ ಮಾಡಬೇಕು. ಹೀಗಾಗಿ ಎಚ್ಚರಿಕೆ ವಹಿಸಿ ಶಾಲೆ ನಡೆಸಲಾಗುತ್ತದೆ ಎಂದು ನುಡಿದರು. ಇದನ್ನೂ ಓದಿ: ವೊಡಾಫೋನ್ ಐಡಿಯಾದಲ್ಲಿ ಈಗ ಭಾರತ ಸರ್ಕಾರವೇ ಅತಿ ದೊಡ್ಡ ಪಾಲುದಾರ
ಈ ತನಕ ಮಕ್ಕಳಿಗೆ ಪಾಸಿಟಿವ್ ತಗುಲಿಲ್ಲ. ಬೆಂಗಳೂರಿನಲ್ಲಿ ಜನವರಿ 19 ರ ನಂತರ 1 ರಿಂದ 9 ನೇ ತರಗತಿ ಮಕ್ಕಳಿಗೆ ರಜೆ ಮುಂದುವರೆಸುವ ತೀರ್ಮಾನ ಕೈಗೊಳ್ಳಲಾಗುತ್ತದೆ. ನಿನ್ನೆ ತನಕ 1 ಸಾವಿರ ಮಕ್ಕಳಿಗೆ ಕೋವಿಡ್ ಸೋಂಕು ತಗುಲಿದೆ. ಈಗಾಗಲೇ ರಾಜಧಾನಿಯಲ್ಲಿ ಅತಿ ಹೆಚ್ಚು ಮಕ್ಕಳಿಗೆ ಸೋಂಕು ತಗುಲಿದೆ. ಬೆಳಗಾವಿ, ಮಂಗಳೂರಿನಲ್ಲೂ ಮಕ್ಕಳಿಗೆ ಕೋವಿಡ್ ತಗಲಿರುವುದು ತಿಳಿದು ಬಂದಿದೆ. ಹೀಗಾಗಿ ಬೆಂಗಳೂರಿನಲ್ಲಿ ರಜೆ ವಿಸ್ತರಣೆಯಾಗುವ ಸಾಧ್ಯತೆಯಿದೆ. ಇದನ್ನು ತಾಂತ್ರಿಕ ಸಲಹಾ ಸಮಿತಿ ನಿರ್ಧಾರವನ್ನು ಸರ್ಕಾರಕ್ಕೆ ತಿಳಿಸಲಿದೆ ಎಂದರು.