ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಸಿದ್ದರಾಮಯ್ಯ ನಿಮಗೆ ಕಾಳಜಿ ಇಲ್ಲವೇ?: ಬಿಸಿ ನಾಗೇಶ್

Public TV
3 Min Read
bc nagesh 1

ಬೆಂಗಳೂರು: ಖಾಸಗಿ ಶಾಲೆಗಳ ಅಕ್ರಮವು ಸಿದ್ದರಾಮಯ್ಯ ನೇತೃತ್ವದ ಸರ್ಕಾರವಿದ್ದ ಕಾಲದಲ್ಲಿ ನಡೆದಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್(BC Nagesh) ತಿರುಗೇಟು ನೀಡಿದರು.

ಸಿದ್ದರಾಮಯ್ಯ(Siddaramaiah) ವಿರುದ್ಧ ಮತ್ತೆ ಕಿಡಿಕಾರಿದ ಸಚಿವರು, ಭ್ರಷ್ಟ ಕಾಂಗ್ರೆಸ್(Congress) ಎಂದು ಸರಣಿ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಖಾಸಗಿ ಶಾಲೆಗಳ ಅಕ್ರಮ ಸಿದ್ದರಾಮಯ್ಯ ಕಾಲದಲ್ಲಿ ನಡೆದಿರೋದು ಎಂದು ತಿರುಗೇಟು ನೀಡಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ನಿಮ್ಮ ಸರ್ಕಾರದ ಅವಧಿಯಲ್ಲಿ ಖಾಸಗಿ ಸಿಬಿಎಸ್‍ಸಿ ಶಾಲೆಗಳ(School) ಆರಂಭಕ್ಕೆ ಎನ್‍ಒಸಿ ನೀಡಲು ನಿಯಮಗಳನ್ನೇ ರೂಪಿಸದೆ, ಅನಧಿಕೃತವಾಗಿ ಹಲವು ಶಾಲೆಗಳನ್ನು ಆರಂಭಿಸಲು ಅವಕಾಶ ಮಾಡಿಕೊಟ್ಟು, ಅಕ್ರಮಕ್ಕೆ ಕುಮ್ಮಕ್ಕು ನೀಡಿರುವುದರಲ್ಲಿ ಸಿದ್ದರಾಮಯ್ಯ ಪಾತ್ರ ಏನು?

ಪಾರದರ್ಶಕ, ಪ್ರಾಮಾಣಿಕ, ಸುರಕ್ಷಿತ ಶೈಕ್ಷಣಿಕ ವಾತಾವರಣ ನಿರ್ಮಿಸಲು ಹೊರಟ ಬಿಜೆಪಿ ಸರ್ಕಾರದ ವಿರುದ್ಧ, ಕ್ರಿಮಿನಲ್ ಕೇಸ್ ಸೇರಿ ಹಲವು ಆರೋಪಗಳಿರುವ ಬೆಂಬಲಿಗನ ಮೂಲಕ ಆಧಾರರಹಿತ ಆರೋಪಗಳನ್ನು ಮಾಡಿಸಿ, ನಿಯಮಬಾಹಿರ ಕೆಲಸಗಳಿಗೆ ಕುಮ್ಮಕ್ಕು ನೀಡುತ್ತಿರುವ ನಿಮಗೆ ಮಾತನಾಡಲು ಯಾವ ನೈತಿಕತೆ ಇದೆ? ನಿಯಮಬಾಹಿರ ಕೆಲಸಗಳಲ್ಲಿ ನಿಮ್ಮ ಪಾಲೆಷ್ಟು? ಇದನ್ನೂ ಓದಿ: ಕ್ಷುಲಕ ವಿಚಾರಕ್ಕೆ ಯುವಕನಿಗೆ ಥಳಿಸಿದ ಬಿಜೆಪಿ ಪುರಸಭಾ ಸದಸ್ಯ, ಪತ್ನಿ

2004ರಲ್ಲಿ ತಮಿಳುನಾಡಿನ ಕುಂಭಕೋಣಂನ ಶಾಲೆಯೊಂದರಲ್ಲಿ ನಡೆದ ಅಗ್ನಿದುರಂತದ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸುಪ್ರೀಂಕೋರ್ಟ್ ಆದೇಶದ ಅನುಸಾರ ರೂಪಿಸಿರುವ ನಿಯಮಗಳು, ಮಾರ್ಗಸೂಚಿಗಳನ್ನೇ ನೀವು ಪ್ರಶ್ನಿಸುತ್ತಿದ್ದೀರಿ! ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಸಿದ್ದರಾಮಯ್ಯ ನಿಮಗೆ ಕಾಳಜಿ ಇಲ್ಲವೇ? ಇದನ್ನೂ ಓದಿ: ಗಣೇಶ ವಿಸರ್ಜನೆಯಲ್ಲಿ ಗಲಾಟೆ- ಯುವಕನ ಕೊಲೆಯಲ್ಲಿ ಅಂತ್ಯ

ಖಾಸಗಿ ಶಾಲೆ ಪ್ರಥಮ ಮಾನ್ಯತೆ ಮತ್ತು ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಆನ್‍ಲೈನ್‍ಗೊಳಿಸಿ, ಪಾರದರ್ಶಕ ವ್ಯವಸ್ಥೆಯನ್ನು ನಮ್ಮ ಸರ್ಕಾರ ಅನುಷ್ಠಾನಗೊಳಿಸಿದೆ. ಆದರೆ, ಶಿಸ್ತುಬದ್ಧ ವ್ಯವಸ್ಥೆಯ ಅನುಷ್ಠಾನದ ವಿರುದ್ಧವೇ ನಿಂತು, ಸಂಘಟನೆಯ ಅಧ್ಯಕ್ಷನೆಂದು ಹೇಳಿಕೊಂಡು ಓಡಾಡುವ ಬೂಟಾಟಿಕೆಯ ವ್ಯಕ್ತಿಯ ಅಕ್ರಮದಲ್ಲಿ ಸಿದ್ದರಾಮಯ್ಯನ ಪಾಲೆಷ್ಟು ಎಂದು ಕಿಡಿಕಾರಿದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *