ಮಡಿಕೇರಿ: ರಾಜ್ಯದಲ್ಲಿರುವ ಎಲ್ಲ ಅರೇಬಿಕ್ ಶಾಲೆಗಳ (Arabic School) ಮಕ್ಕಳು (Students) ಬೇರೆ ಶಾಲೆಗಳ ಮಕ್ಕಳಂತೆ ಉತ್ತಮ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಅರೇಬಿಕ್ ಶಾಲೆಗಳ ಬೋಧನೆ ಕುರಿತು ವರದಿ ಕೇಳಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ತಿಳಿಸಿದರು.
ಮಡಿಕೇರಿಯಲ್ಲಿ (Madikeri) ಮಾತನಾಡಿದ ಅವರು, ರಾಜ್ಯದಲ್ಲಿ 106 ಅನುದಾನಿತ ಅರೇಬಿಕ್ ಶಾಲೆಗಳು ಇವೆ. 80 ಅನುದಾನ ರಹಿತ ಶಾಲೆಗಳಿವೆ. ಇಲ್ಲಿ ಶಿಕ್ಷಣ ಇಲಾಖೆಯ ಪಠ್ಯಕ್ರಮದ ಅನುಸಾರ ಬೋಧನೆ ನಡೆಯುತ್ತಿಲ್ಲ ಎಂಬ ಆರೋಪಗಳಿವೆ. ಹೀಗಾಗಿ, ಈ ಕುರಿತು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.
ಬೇರೆ ಅನುದಾನಿತ ಶಾಲೆಗಳ ರೀತಿಯಲ್ಲಿ ಅರೇಬಿಕ್ ಶಾಲೆಗಳು ಶಿಕ್ಷಣ ನೀಡಬೇಕು. ಆದರೆ, ಬಹಳಷ್ಟು ಶಾಲೆಗಳಲ್ಲಿ ಭಾಷೆ ಮತ್ತು ವಿಜ್ಞಾನದ ಕಲಿಕೆ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ವಿಧಾನಸಭೆ ಚುನಾವಣೆ – ನವೆಂಬರ್ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ?
ರಾಜ್ಯದಲ್ಲಿ ಇಂತಹ ಶಾಲೆಗಳಿಗೆ ಪ್ರತಿವರ್ಷ ಸುಮಾರು 27 ಸಾವಿರ ಸಂಖ್ಯೆ ಮಕ್ಕಳು ಸೇರುತ್ತಾರೆ. ಆದರೆ, ಎಸ್‍ಎಸ್‍ಎಲ್‍ಸಿಯಲ್ಲಿ ಕೇವಲ 2 ಸಾವಿರ ವಿದ್ಯಾರ್ಥಿಗಳು ಮಾತ್ರವೇ ಇರುತ್ತಾರೆ. ಬಹಳಷ್ಟು ಶಾಲೆಗಳಲ್ಲಿ ನೋಂದಣಿಯಾದ ವಿದ್ಯಾರ್ಥಿಗಳಿಗೂ, ತರಗತಿಗಳಿಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೂ ಭಾರೀ ವ್ಯತ್ಯಾಸ ಇದೆ. ಅಂದರೆ ಒಂದು ನಿರ್ದಿಷ್ಟ ಧರ್ಮದ ಮಕ್ಕಳು ಶಾಲೆಗಳಿಂದ ಹೊರಗುಳಿಯುತ್ತಿದ್ದಾರೆ. ಇದು ಆಗಬಾರದು, ಎಲ್ಲರಿಗೂ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉತ್ತಮ ಶಿಕ್ಷಣ ದೊರಕಬೇಕು ಎಂದರು. ಇದನ್ನೂ ಓದಿ: JDS ಅಧಿಕಾರಕ್ಕೆ ಬಂದ್ರೆ ಉಚಿತ ಶಿಕ್ಷಣ, ಉದ್ಯೋಗ, ಕುಟುಂಬಕ್ಕೊಂದು ಮನೆ- HDK ಆಶ್ವಾಸನೆ