ತುಮಕೂರು: ಕೋವಿಡ್ ಮೂರನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಶಾಲೆ-ಕಾಲೇಜುಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಮತ್ತು ಚಾಮರಾಜನಗರಗಳಲ್ಲಿ ವಿಶೇಷ ಗಮನ ಹರಿಸಿದ್ದು, ಅಲ್ಲಿ ಯಾವುದೇ ಪಾಸಿಟಿವ್ ಪ್ರಕರಣ ಕಂಡುಬಂದಿಲ್ಲ. ಹಾಗಾಗಿ ಪೋಷಕರು ಆತಂಕಪಡುವ ಅಗತ್ಯ ಇಲ್ಲ ಎಂದು ಪ್ರತಿಕ್ರಿಯಿಸಿದರು.
Advertisement
ಉತ್ತಮ ಮಳೆಯಿಂದ ತುಂಬಿರುವ ತಿಪಟೂರು ತಾಲೂಕಿನ ಕರಡಿ ಕೆರೆಗೆ ಹಾಗೂ ಚಿಕ್ಕ ಮಾರ್ಪನಹಳ್ಳಿ ಕೆರೆಗೆ ಗ್ರಾಮಸ್ಥರ ಜೊತೆ ಬಾಗಿನ ಅರ್ಪಿಸಲಾಯಿತು. pic.twitter.com/2ghVOaUsQl
— B.C Nagesh (@BCNagesh_bjp) November 29, 2021
Advertisement
ರಾಜ್ಯದ ಎರಡು ಮೂರು ಶಾಲಾ ಕಾಲೇಜುಗಳಲ್ಲಷ್ಟೇ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ಧಾರವಾಡದ ಎಸ್‍ಡಿಎಮ್ ಕಾಲೇಜು, ಬೆಂಗಳೂರಿನ ಒಂದು ಶಾಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಿದ್ದರೆ ಮೈಸೂರಿನ ಪಿಯು ಕಾಲೇಜಿನಲ್ಲಿ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ. ಉಳಿದಂತೆ ಯಾರಿಗೂ ಪಾಸಿಟಿವ್ ಬಂದಿಲ್ಲ ಎಂದು ಹೇಳಿದರು.
Advertisement
ಕೋವಿಡ್ ನ ಹೊಸ ರೂಪಾಂತರಿ ಓಮಿಕ್ರಾನ್ ವೈರಾಣು 12 ದೇಶಗಳಲ್ಲಿ ಪತ್ತೆಯಾಗಿದೆ. ರಾಜ್ಯದಲ್ಲಿ ವಿಮಾನ ನಿಲ್ದಾಣ ಸೇರಿದಂತೆ ವಿವಿಧೆಡೆ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ. ಕಳೆದ 12-13 ದಿನಗಳಲ್ಲಿ ನಿರ್ದಿಷ್ಟ ದೇಶಗಳಿಂದ ಬಂದವರ ಮೇಲೆ ನಿಗಾ ಇರಿಸಿ, ಅವರ ಸಂಪರ್ಕಿತರ ಪತ್ತೆ ಹಚ್ಚಲಾಗುತ್ತಿದೆ. (1/2)@BSBommai
— Dr Sudhakar K (@mla_sudhakar) November 29, 2021
Advertisement
ಕೊರೊನಾ ಕುರಿತಾಗಿ ಸಿಎಂ ನೇತೃತ್ವದಲ್ಲಿ ಸಭೆ ನಡೆದಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಹಾಗಾಗಿ ಪೋಷಕರಿಗೆ ಯಾವುದೇ ರೀತಿಯ ಆತಂಕ ಬೇಡ. ಪ್ರತಿ ಅರ್ಧ ಗಂಟೆಗೊಮ್ಮೆ ಶಾಲೆಗಳಿಂದ ಮಾಹಿತಿ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ. ಶಾಲಾ ಅವಧಿಯಲ್ಲಿ ಸಂಪೂರ್ಣ ಮಾಸ್ಕ್ ಧರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಸಿಎಂ ಬಸವರಾಜ ಬೊಮ್ಮಾಯಿಯವರಿಂದ ಉತ್ತಮ ಕಾರ್ಯ ನಿರ್ವಹಣೆ: ನಿರಾಣಿ ಹೇಳಿಕೆ
ಇಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ನಡೆದಾಡುವ ದೇವರು, ತ್ರಿವಿಧ ದಾಸೋಹಿ ಲಿಂಗೈಕ್ಯ ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಗದ್ದುಗೆಯ ದ್ವಿತೀಯ ವರ್ಷದ ಲಕ್ಷ ಪುಷ್ಪ ಬಿಲ್ವಾರ್ಚನೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು, ಸಚಿವ @BCNagesh_bjp ಮತ್ತು ಇತರರು ಉಪಸ್ಥಿತರಿದ್ದರು. pic.twitter.com/hPowsIwlLo
— Basavaraj S Bommai (@BSBommai) November 29, 2021
ತಾಂತ್ರಿಕ ಸಲಹಾ ಸಮಿತಿ ಸಲಹೆ ಮೇರೆಗೆ ಮುಂದೆ ಏನಾದರೂ ಕ್ರಮ ಕೈಗೊಳ್ಳಬೇಕಾದರೆ ತೆಗದುಕೊಳ್ಳುತ್ತೇವೆ. ಹಾಗೆಯೇ ಕೇರಳದಿಂದ ಬರುವವರ ಮೇಲೆ ಸಂಪೂರ್ಣ ನಿಗಾ ವಹಿಸಲಾಗಿದೆ. ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ನಡೆದಿಲ್ಲ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಯಾದಗಿರಿಯಲ್ಲಿ ಪೊಲೀಸರ ದೌರ್ಜನ್ಯಕ್ಕೆ ಬಡ ಜೀವ ಬಲಿ
ಮಂಗಳೂರು ಭಾಗದಲ್ಲೂ ವಿಶೇಷವಾಗಿ ನಿಗಾವಹಿಸಲಾಗಿದೆ. ಆ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಪಾಸಿಟಿವ್ ಬಂದಿಲ್ಲ ಎಂದು ತಿಳಿಸಿದರು.